1970ರ ದಶಕದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಾದರು. ಇಲ್ಲಿಯೇ ಅವರ ರಾಜಕೀಯ ಪ್ರಯಾಣದ ಆರಂಭವನ್ನು ಗುರುತಿಸಿತು. ಇದಾದ ಮೇಲೆ 1987 ರಲ್ಲಿ ಭಾರತೀಯ ಜನತಾ ಪಾರ್ಟಿ ಬಿಜೆಪಿಯನ್ನು ಸೇರಿಕೊಂಡರು. ಕೆಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಸಾಧಿಸಿ ಹಲವಾರು ಸಮಸ್ಯೆಗಳನ್ನು ಪರಿಹರಿಸಿದರು.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 76ನೇ ವಸಂತಕ್ಕೆ ಕಾಲಿಟ್ಟಿದ್ದು ಸಂಭ್ರಮದಲ್ಲಿದ್ದಾರೆ. ದೇಶದ್ಯಾಂತ ಭಾರತೀಯ ಜನತಾ ಪಾರ್ಟಿ ಬಿಜೆಪಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಜೊತೆಗೆ ರಾತ್ರಿಯಿಂದಲೇ ಪ್ರಧಾನಿ ಮೋದಿ ಅವರಿಗೆ ದೇಶ, ವಿದೇಶಗಳಿಂದ ಗಣ್ಯರು ವಿಶ್ ಮಾಡುತ್ತಿದ್ದಾರೆ. ಅಲ್ಲದೇ ದೇಶದಲ್ಲಿಯೂ ಎಲ್ಲರೂ ದೇಶದ ಪ್ರಧಾನಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ರಾಜಕೀಯದಲ್ಲಿ ಉನ್ನತ ಸ್ಥಾನವನ್ನು ತಲುಪಿರುವ ಪ್ರಧಾನಿ ಮೋದಿ ಅವರು 2014 ರಲ್ಲಿ ಭಾರತದ ಪ್ರಧಾನಮಂತ್ರಿಗಳಾಗಿ ಅಧಿಕಾರ ಸ್ವೀಕಾರ ಮಾಡಿದರು. ಅಂದಿನಿಂದ ಈವರೆಗೂ ನರೇಂದ್ರ ಮೋದಿ ಅವರೇ ಪ್ರಧಾನಮಂತ್ರಿ ಹುದ್ದೆಯಲ್ಲಿದ್ದಾರೆ.
1/6
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ
2014ರ ಮೇ 26 ರಂದು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡರು. ನರೇಂದ್ರ ಮೋದಿ ಅವರು ಭಾರತದ 14ನೇ ಪ್ರಧಾನಮಂತ್ರಿಯಾಗಿ ಅಂದು ಅಧಿಕಾರ ಸ್ವೀಕಾರ ಮಾಡಿದ್ದರು. ಇದಾದ ಮೇಲೆ 2014, 2019 ಮತ್ತು 2024 ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯೂ ಅಭೂತ ಪೂರ್ವ ಗೆಲುವು ಸಾಧಿಸಿದೆ. ಹೀಗಾಗಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
2/6
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ
ನರೇಂದ್ರ ಮೋದಿ ಅವರು 2014ಕ್ಕಿಂತ ಮೊದಲು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಎಲ್ಲ ತಯಾರಿಗಳನ್ನು ಮಾಡಿಕೊಂಡಿದ್ದರು. ಅವಗಲೇ ಎಲ್ಲೆಂದರಲ್ಲಿ ಮೋದಿ ಹೆಸರು ಹೆಚ್ಚು ಖ್ಯಾತಿ ಪಡೆಯಲು ಶುರು ಮಾಡಿತು. ಇದು ಅಲ್ಲದೇ ಭಾರತೀಯ ಜನತಾ ಪಕ್ಷ ಮತ್ತು ಎನ್‌ಡಿಎ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವರ ಹೆಸರನ್ನು ಘೋಷಣೆ ಮಾಡಲಾಯಿತು. ಇದು ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಬಂದಿರುವುದು ಇತಿಹಾಸವಾಗಿ ಉಳಿದಿದೆ. ಏಕೆಂದರೆ ಈಗ ನರೇಂದ್ರ ಮೋದಿ ಅವರು ಮಹತ್ವದ ಪ್ರಧಾನಿ ಹುದ್ದೆಯಲ್ಲಿದ್ದಾರೆ.
3/6
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ
ನರೇಂದ್ರ ಮೋದಿ ಅವರು 2001ರಲ್ಲಿ ಅಕ್ಟೋಬರ್ 10 ರಂದು ಗಾಂಧಿನಗರದಲ್ಲಿ ಮೊದಲ ಬಾರಿಗೆ ಗುಜರಾತ್‌ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ವೇಳೆ ನರೇಂದ್ರ ಮೋದಿ ಅವರಿಗೆ ಸಾಕಷ್ಟು ಬೆಂಬಲಿಗರು, ಗಣ್ಯರು, ಕಾರ್ಯರ್ತರು ಶುಭಾ ಹಾರೈಸಿದ್ದರು. ಇನ್ನೊಂದು ವಿಶೇಷತೆ ಎಂದರೆ ಇದಕ್ಕಿಂತ ಮೊದಲು ನರೇಂದ್ರ ಮೋದಿ ಅವರು ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿ ಕಾರ್ಯಕರ್ತರಾಗಿದ್ದವರು ಇಂದು ಪ್ರಧಾನಿಯಾಗಿರುವುದು ದೊಡ್ಡ ಸಾಧನೆಯೇ ಸರಿ.
4/6
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ
ಗುಜರಾತ್ ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಅಥವಾ ಸೇವೆ ಸಲ್ಲಿಸಿದ ಕೀರ್ತಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ನರೇಂದ್ರ ಮೋದಿ ಅವರು 2001ರ ಅಕ್ಟೋಬರ್‌ರಿಂದ ಮೇ 2014ರ ವರೆಗೆ ಮುಖ್ಯಮಂತ್ರಿಯಾಗಿ ಗುಜರಾತ್‌ನ ಸೇವೆ ಸಲ್ಲಿಸಿದ್ದಾರೆ. 2001ರಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು 2014ರ ವರೆಗೆ ಅಂದರೆ 14 ವರ್ಷಗಳ ಕಾಲ ಮಹತ್ವದ ಹುದ್ದೆಯಲ್ಲಿದ್ದರು.
5/6
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ
ಮೋದಿ ಅವರು ಮೊದಲು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಅಂದರೆ ಆರ್‌ಎಸ್‌ಎಸ್‌ಗೆ ತಮ್ಮ ಎಂಟನೇ ವಯಸ್ಸಿನಲ್ಲಿಯೇ ಸೇರಿಕೊಂಡರು. 1970ರ ದಶಕದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಾದರು. ಇಲ್ಲಿಯೇ ಅವರ ರಾಜಕೀಯ ಪ್ರಯಾಣದ ಆರಂಭವನ್ನು ಗುರುತಿಸಿತು. ಇದಾದ ಮೇಲೆ 1987 ರಲ್ಲಿ ಭಾರತೀಯ ಜನತಾ ಪಾರ್ಟಿ ಬಿಜೆಪಿಯನ್ನು ಸೇರಿಕೊಂಡರು. ಕೆಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಸಾಧಿಸಿ ಹಲವಾರು ಸಮಸ್ಯೆಗಳನ್ನು ಪರಿಹರಿಸಿದರು. ಚುನಾವಣೆಯಲ್ಲಿ ಹೇಗೆ ಸ್ಪರ್ಧೆ ಮಾಡಬೇಕು ಎಂದು ಸಾಕಷ್ಟು ಮಾಹಿತಿ ಪಡೆದುಕೊಂಡರು. ಇದೇ ಭಾರತೀಯ ಜನಾತ ಪಾರ್ಟಿಯಲ್ಲಿ ಮೋದಿ ಅವರ ಸ್ಥಾನಮಾನವು ಕೊಟ್ಟಿತು.
6/6
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 1950 ಸೆಪ್ಟೆಂಬರ್ 17 ರಂದು ಗುಜರಾತ್ ರಾಜ್ಯದ ನೆಹ್ಸಾನಾ ಜಿಲ್ಲೆಯ ವಡ್ನಗರ್‌ನಲ್ಲಿ ಜನಿಸಿದರು. ಇಂದಿಗೆ ನರೇಂದ್ರ ಮೋದಿ ಅವರಿಗೆ 76 ವರ್ಷಗಳು ತುಂಬಿವೆ. ಈ ವಿಶೇಷ ಸಂದರ್ಭಗಳಲ್ಲಿ ಅವರಿಗೆ ಎಲ್ಲ ಕ್ಷೇತ್ರಗಳಿಂದಲೂ ಶುಭಾಶಯಗಳು ಹರಿದು ಬರುತ್ತಿವೆ. ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಇಂದಿಗೂ ಅವು ಚಾಲನೆಯಲ್ಲಿರುವುದು ಅವರ ಕೆಲಸ ವೈಖರಿಯನ್ನು ಎತ್ತಿ ತೋರಿಸುತ್ತದೆ. ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ಅವರ ವಿಶೇಷ ಫೋಟೋಗಳು ಇಲ್ಲಿವೆ.