• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ಮಂಗಳೂರಿನ ತಣ್ಣೀರುಬಾವಿ ಬೀಚ್‌ನಲ್ಲಿ ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ಚಾಲನೆ

ಮಂಗಳೂರಿನ ತಣ್ಣೀರುಬಾವಿ ಬೀಚ್‌ನಲ್ಲಿ ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ಚಾಲನೆ

Written ByYashaswini V
Published: Sep 17, 2026, 12:23 PM IST|Updated: Sep 17, 2026, 12:26 PM IST
joinshare

ಕಡಲ ನಗರಿ ಮಂಗಳೂರಿನ ತಣ್ಣೀರುಬಾವಿ ಬೀಚ್‌ನಲ್ಲಿ ಸ್ವಚ್ಛತೆಯ ಸೇವೆ ಎಂಬ ವಿನೂತನ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. 
 

Swachhata Seva campaign1/6

ತಣ್ಣೀರುಬಾವಿ ಬೀಚ್

ಮಂಗಳೂರು ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್‌ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
Swachhata Seva campaign2/6

ಪರಿಸರ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಪರಿಸರ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸ್ವಚ್ಛ ಹಾಗೂ ನೈರ್ಮಲ್ಯಯುತ ವಾತಾವರಣ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವುದರ ಜೊತೆಗೆ, ಪ್ರವಾಸೋದ್ಯಮದ ಬೆಳವಣಿಗೆಯ ಮೂಲಕ ಸ್ಥಳೀಯ ಆರ್ಥಿಕತೆಗೂ ಉತ್ತೇಜನ ನೀಡುತ್ತದೆ ಎಂದು ಹೇಳಿದರು.
Swachhata Seva campaign3/6

ಸ್ವಚ್ಛತೆಯನ್ನು ಕೇವಲ ಒಂದು ದಿನದ ಕಾರ್ಯಕ್ರಮವಲ್ಲ

ರಾಜ್ಯದ ನಗರ ಪ್ರದೇಶಗಳ ಪ್ರಮುಖ ಸ್ಥಳಗಳ ಸೌಂದರ್ಯೀಕರಣ, ಸಾರ್ವಜನಿಕ ಪ್ರದೇಶಗಳ ನೈರ್ಮಲ್ಯ ಕಾಪಾಡುವುದು ಹಾಗೂ ತ್ಯಾಜ್ಯ ವಿಂಗಡಣೆಗೆ (Waste Segregation) ಹೆಚ್ಚಿನ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ. ಸ್ವಚ್ಛತೆಯನ್ನು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ನಿರಂತರ ಜನಾಂದೋಲನವಾಗಿ ರೂಪಿಸಬೇಕು ಎಂದು ಅವರು ಕರೆ ನೀಡಿದರು
Swachhata Seva campaign4/6

ಸ್ವಚ್ಛತಾ ಪ್ರತಿಜ್ಞೆ

ಅಭಿಯಾನದ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಸಾಮೂಹಿಕವಾಗಿ ‘ಸ್ವಚ್ಛತಾ ಪ್ರತಿಜ್ಞೆ’ ಸ್ವೀಕರಿಸಿದರು.
Swachhata Seva campaign5/6

ಸ್ವಚ್ಛತಾ ಕಾರ್ಯ

‘ಸ್ವಚ್ಛತಾ ಪ್ರತಿಜ್ಞೆ’ ಸ್ವೀಕರಿಸಿದ ಬಳಿಕ ತಣ್ಣೀರುಬಾವಿ ಬೀಚ್ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
Swachhata Seva campaign6/6

‘ಸ್ವಚ್ಛತೆಯ ಸೇವೆ’ ಅಭಿಯಾನ

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶ್ರೀ ಭಾಸ್ಕರ್ ಮೊಯ್ಲಿ, ಆಯುಕ್ತರಾದ ಶ್ರೀ ರಾಹುಲ್ ರತ್ನಂ ಪಾಂಡೆ, ಪೌರಕಾರ್ಮಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಯುವಜನರು ಸಕ್ರಿಯವಾಗಿ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಿದರು.
TAGS:
Kannada News

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.