SOCIAL MEDIA

Newsletter

PARTNER SITES
Select Language Select State

ಶತಕ ಸಿಡಿಸಿ ಮೈದಾನದಲ್ಲೇ ʻಓಂ ನಮಃ ಶಿವಾಯʼ ಮಂತ್ರ ಹೇಳಿದ ಅಭಿಷೇಕ್ ಶರ್ಮಾ ವಿಡಿಯೋ ವೈರಲ್

Abhishek Sharma century: ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಶತಕದ ಬಳಿಕ ಅಭಿಷೇಕ್ ಶರ್ಮಾ ‘ಓಂ ನಮಃ ಶಿವಾಯ’ ಎಂದು ಜಪಿಸುತ್ತಾ ಸಂಭ್ರಮಿಸಿದ್ದು ಅಭಿಮಾನಿಗಳ ಗಮನ ಸೆಳೆದಿದೆ.

Reported By Chetana Devarmani Written By Chetana Devarmani
Published: Sep 17, 2026, 10:19 PM IST | Updated: Sep 17, 2026, 10:26 PM IST
Join

Abhishek Sharma chanting Om Namah Shivaya : ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿದ ಅಭಿಷೇಕ್ ಶರ್ಮಾ, ತಮ್ಮ ಸ್ಫೋಟಕ ಇನ್ನಿಂಗ್ಸ್ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಆದರೆ ಈ ಶತಕಕ್ಕಿಂತಲೂ ಹೆಚ್ಚು ಗಮನ ಸೆಳೆದಿದ್ದು ಅವರು ಅದನ್ನು ಆಚರಿಸಿದ ವಿಭಿನ್ನ ರೀತಿಯಾಗಿದೆ.

ಅಭಿಷೇಕ್ ಶರ್ಮಾ ಈ ಪಂದ್ಯದಲ್ಲಿ ಒಟ್ಟು 34 ಎಸೆತಗಳನ್ನು ಎದುರಿಸಿ 11 ಭರ್ಜರಿ ಸಿಕ್ಸರ್‌ಗಳು ಹಾಗೂ 9 ಬೌಂಡರಿಗಳ ನೆರವಿನಿಂದ 108 ರನ್ ಗಳಿಸಿದರು. ಆರಂಭದಿಂದಲೇ ಬೌಲರ್‌ಗಳ ಮೇಲೆ ಒತ್ತಡ ಹೇರಿದ ಅವರು ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು. ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈದ ಅಭಿಷೇಕ್, ಕೇವಲ 30 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದರು.

ಆದರೆ ವಿಶೇಷವೆಂದರೆ, ಶತಕ ಬಾರಿಸಿದ ಕ್ಷಣದಲ್ಲಿ ಅಭಿಷೇಕ್‌ಗೆ ತಾವು ಶತಕ ಪೂರೈಸಿರುವುದೇ ತಕ್ಷಣ ತಿಳಿದಿರಲಿಲ್ಲ. ತಮ್ಮ ಬ್ಯಾಟಿಂಗ್‌ನಲ್ಲೇ ಸಂಪೂರ್ಣವಾಗಿ ತಲ್ಲೀನರಾಗಿದ್ದ ಅವರು ಪ್ರೇಕ್ಷಕರು ಹಾಗೂ ಸಹ ಆಟಗಾರರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಿರುವುದನ್ನು ಕಂಡು ಅಚ್ಚರಿಗೊಂಡರು. ಬಳಿಕವೇ ತಾವು ಶತಕ ಸಿಡಿಸಿರುವುದು ಅವರಿಗೆ ಅರಿವಾಯಿತು.

ಶತಕದ ಬಳಿಕ ‘ಓಂ ನಮಃ ಶಿವಾಯ’ ಜಪ

ಶತಕ ಪೂರ್ಣಗೊಂಡ ಬಳಿಕ ಅಭಿಷೇಕ್ ಶರ್ಮಾ ಈ ಬಾರಿ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಿದರು. ಮೈದಾನದಲ್ಲೇ ಕುಳಿತು ‘ಓಂ ನಮಃ ಶಿವಾಯ’ ಮಂತ್ರವನ್ನು ಜಪಿಸುತ್ತಾ ಕೆಲ ಕ್ಷಣಗಳನ್ನು ಕಳೆದರು. ಅಭಿಷೇಕ್ ಶರ್ಮಾ ತಮ್ಮ ಶತಕವನ್ನು ಈ ರೀತಿಯಾಗಿ ಆಚರಿಸಿದ್ದು ಇದೇ ಮೊದಲ ಬಾರಿಗೆ ಎನ್ನಲಾಗಿದೆ. ಅವರ ಈ ವಿಶೇಷ ಸೆಲೆಬ್ರೇಷನ್ ಇದೀಗ ಅಭಿಮಾನಿಗಳ ಗಮನ ಸೆಳೆದಿದೆ.

ಅಭಿಷೇಕ್ ಇತ್ತೀಚಿನ ದಿನಗಳಲ್ಲಿ ತಮ್ಮ ಆಟದ ಜೊತೆಗೆ ಮಾನಸಿಕ ಏಕಾಗ್ರತೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಧ್ಯಾನ ಮಾಡುವ ಮೂಲಕ ತಮ್ಮ ಮನಸ್ಸನ್ನು ಶಾಂತವಾಗಿಟ್ಟುಕೊಂಡು ಬ್ಯಾಟಿಂಗ್‌ನಲ್ಲಿ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಧ್ಯಾನ ಮಾಡುತ್ತಿರುವ ಫೋಟೋವನ್ನೂ ಹಂಚಿಕೊಂಡಿದ್ದರು.

ಬ್ಯಾಟಿಂಗ್‌ಗೆ ಇಳಿಯುವ ಮುನ್ನ ಅಭಿಷೇಕ್ ತಮ್ಮ ಬ್ಯಾಟ್‌ನಿಂದ ಚೆಂಡನ್ನು ಹೊಡೆಯುತ್ತಾ ಅಭ್ಯಾಸ ಮಾಡುವುದೂ ಗಮನಾರ್ಹ. ಈ ವೇಳೆ ಅವರ ಸಂಪೂರ್ಣ ಗಮನ ಚೆಂಡಿನ ಮೇಲೆಯೇ ಇರುತ್ತದೆ. ಚೆಂಡಿನ ಮೇಲೆ ಕೇಂದ್ರೀಕರಿಸುವ ಈ ಅಭ್ಯಾಸವೇ ಕ್ರೀಸ್‌ಗೆ ಬಂದ ಕೂಡಲೇ ಬೌಲರ್‌ಗಳ ಮೇಲೆ ಆಕ್ರಮಣಕಾರಿ ಆಟವಾಡಲು ನೆರವಾಗುತ್ತಿದೆ.

 

 

11 ಸಿಕ್ಸರ್, 9 ಬೌಂಡರಿ; 108 ರನ್

ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿತು. ನಿಗದಿತ 20 ಓವರ್‌ಗಳಲ್ಲಿ ಭಾರತ 7 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿತು. ಭಾರತದ ಪರ ಅಭಿಷೇಕ್ ಶರ್ಮಾ 108 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಸಂಜು ಸ್ಯಾಮ್ಸನ್ ಕೂಡ ಅರ್ಧಶತಕ ದಾಖಲಿಸಿ 50 ರನ್ ಗಳಿಸಿದರು. ನಾಯಕ ಶ್ರೇಯಸ್ ಅಯ್ಯರ್ 29 ರನ್‌ಗಳ ಕೊಡುಗೆ ನೀಡಿದರು.

ಅಫ್ಘಾನಿಸ್ತಾನದ ಬೌಲಿಂಗ್ ವಿಭಾಗದಲ್ಲಿ ಅಜ್ಮತುಲ್ಲಾ ಒಮರ್‌ಜೈ 2 ವಿಕೆಟ್ ಪಡೆದರೆ, ರಶೀದ್ ಖಾನ್ ಮತ್ತು ಅಬ್ದುಲ್ಲಾ ತಲಾ ಒಂದು ವಿಕೆಟ್ ಪಡೆದರು. ಆದರೆ ಭಾರತದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನ ಮುಂದೆ ಅಫ್ಘಾನ್ ಬೌಲರ್‌ಗಳು ಹೆಚ್ಚಿನ ಸಮಯ ಒತ್ತಡದಲ್ಲೇ ಕಾಣಿಸಿಕೊಂಡರು.

ದಾಖಲೆಯ ವೇಗದ ಶತಕ, 11 ಸಿಕ್ಸರ್‌ಗಳು ಮತ್ತು 9 ಬೌಂಡರಿಗಳೊಂದಿಗೆ ಅಭಿಷೇಕ್ ಶರ್ಮಾ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಶತಕದ ಬಳಿಕ ‘ಓಂ ನಮಃ ಶಿವಾಯ’ ಮಂತ್ರ ಜಪಿಸಿದ ಅವರ ವಿಭಿನ್ನ ಸಂಭ್ರಮಾಚರಣೆ ಕೂಡ ಅಭಿಮಾನಿಗಳಲ್ಲಿ ವಿಶೇಷ ಕುತೂಹಲ ಮೂಡಿಸಿದೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES