• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಸ್ಟಾರ್‌ ಕ್ರಿಕೆಟರ್‌ ಅರ್ಷದೀಪ್ ಸಿಂಗ್ ಹೃದಯ ಕದ್ದಚೆಲುವೆ ಇವರೇ ನೋಡಿ

ಸ್ಟಾರ್‌ ಕ್ರಿಕೆಟರ್‌ ಅರ್ಷದೀಪ್ ಸಿಂಗ್ ಹೃದಯ ಕದ್ದಚೆಲುವೆ ಇವರೇ ನೋಡಿ

Arshdeep Singh girl friend Samreen Kaur: ಅರ್ಷದೀಪ್ ಮತ್ತು ಸಮ್ರೀನ್ ಅವರ ನಿಶ್ಚಿತಾರ್ಥದ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿವೆ.

Written ByChetana Devarmani
Published: Nov 12, 2026, 11:25 IST|Updated: Nov 12, 2026, 11:28 IST
joinshare
ಸ್ಟಾರ್‌ ಕ್ರಿಕೆಟರ್‌ ಅರ್ಷದೀಪ್ ಸಿಂಗ್ ಹೃದಯ ಕದ್ದಚೆಲುವೆ ಇವರೇ ನೋಡಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Arshdeep Singh Proposes to Samreen Kaur Photo:‌ ಟೀಂ ಇಂಡಿಯಾದ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಬಹುಕಾಲದಿಂದ ಪ್ರೀತಿಸುತ್ತಿದ್ದ ಗೆಳತಿ ಸಮ್ರೀನ್ ಕೌರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನವೆಂಬರ್ 11, 2026ರಂದು ಈ ಜೋಡಿ ತಮ್ಮ ಜೀವನದ ಹೊಸ ಪಯಣಕ್ಕೆ ಮುನ್ನುಡಿ ಬರೆದಿದ್ದು, ಈ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದೆ.

ಅರ್ಷದೀಪ್ ಮತ್ತು ಸಮ್ರೀನ್ ಅವರ ನಿಶ್ಚಿತಾರ್ಥದ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿವೆ. ವಿಶೇಷವಾಗಿ ಅರ್ಷದೀಪ್ ಮೊಣಕಾಲೂರಿ ಕುಳಿತು ಸಮ್ರೀನ್‌ಗೆ ಉಂಗುರ ತೊಡಿಸುತ್ತಿರುವ ಕ್ಷಣ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ತಮ್ಮ ಜೀವನದ ಮಹತ್ವದ ಕ್ಷಣವನ್ನು ಸ್ಮರಣೀಯವಾಗಿಸಲು ಅರ್ಷದೀಪ್ ಸಿಂಗ್ ನ್ಯೂಜಿಲೆಂಡ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಜೋಡಿ ಹಂಚಿಕೊಂಡಿರುವ ಫೋಟೋಗಳ ಜೊತೆಗೆ ಭಾವನಾತ್ಮಕ ಸಂದೇಶವನ್ನೂ ಪ್ರಕಟಿಸಿದೆ. ಜೀವನದಲ್ಲಿ ಸಿಗುವ ಅತ್ಯಂತ ದೊಡ್ಡ ಉಡುಗೊರೆ ಎಂದರೆ ಪರಸ್ಪರ ಒಬ್ಬರನ್ನೊಬ್ಬರು ಕಂಡುಕೊಂಡಿರುವುದು. ಇದೀಗ ಜೀವನಪೂರ್ತಿ ಜೊತೆಯಾಗಿರುವ ನಿರ್ಧಾರಕ್ಕೆ ಅಧಿಕೃತ ರೂಪ ನೀಡಿದ್ದೇವೆ ಎಂಬ ಅರ್ಥದ ಸಂದೇಶದೊಂದಿಗೆ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಅರ್ಷದೀಪ್ ಸಿಂಗ್ ಅವರ ಪ್ರೇಮ ಜೀವನದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿತ್ತು. ಈ ಹಿಂದೆ ಅವರು ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬರ ಕೈ ಹಿಡಿದಿರುವ ಫೋಟೋ ಹಂಚಿಕೊಂಡಿದ್ದರು. ಆದರೆ ಆ ಸಮಯದಲ್ಲಿ ಆಕೆಯ ಮುಖವನ್ನು ಬಹಿರಂಗಪಡಿಸಿರಲಿಲ್ಲ.

ನಂತರ ಧರ್ಮಶಾಲಾದಲ್ಲಿ ಅರ್ಷದೀಪ್ ಮತ್ತು ಸಮ್ರೀನ್ ಒಟ್ಟಿಗೆ ಕಾಣಿಸಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಇಬ್ಬರೂ ಕೈ ಹಿಡಿದುಕೊಂಡು ಓಡಾಡುತ್ತಿದ್ದ ದೃಶ್ಯಗಳು ಅವರ ಸಂಬಂಧದ ಬಗ್ಗೆ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದವು. ಆ ಬಳಿಕ ಜುಲೈ ತಿಂಗಳಲ್ಲಿ ಸಮ್ರೀನ್ ಕೌರ್ ಜೊತೆಗಿನ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಅರ್ಷದೀಪ್ ತಮ್ಮ ಪ್ರೀತಿಯನ್ನು ಬಹಿರಂಗಪಡಿಸಿದ್ದರು. ಇದೀಗ ನಿಶ್ಚಿತಾರ್ಥದೊಂದಿಗೆ ಈ ಪ್ರೇಮಕಥೆಗೆ ಹೊಸ ತಿರುವು ಸಿಕ್ಕಿದೆ.

ಯಾರು ಈ ಸಮ್ರೀನ್ ಕೌರ್?

ಅರ್ಷದೀಪ್ ಸಿಂಗ್ ಅವರ ಮನಗೆದ್ದಿರುವ ಸಮ್ರೀನ್ ಕೌರ್ ಮನರಂಜನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಲಾವಿದೆ. ಪಂಜಾಬಿ ಮ್ಯೂಸಿಕ್ ವಿಡಿಯೋಗಳಲ್ಲಿ ಅಭಿನಯಿಸುವ ಮೂಲಕ ಅವರು ಜನಪ್ರಿಯತೆ ಗಳಿಸಿದ್ದಾರೆ. ಬಾಲಿವುಡ್‌ನ ಕ್ರಿಕೆಟ್ ಆಧಾರಿತ ‘83’ ಸಿನಿಮಾದಲ್ಲಿಯೂ ಸಮ್ರೀನ್ ಕಾಣಿಸಿಕೊಂಡಿದ್ದಾರೆ. ಇದರ ಜೊತೆಗೆ ‘ನೇಲ್ ಪಾಲಿಷ್’ ಸೇರಿದಂತೆ ಕೆಲವು ಚಿತ್ರ ಹಾಗೂ ವೆಬ್ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಹಲವು ಪಂಜಾಬಿ ಹಾಡುಗಳ ಮ್ಯೂಸಿಕ್ ವಿಡಿಯೋಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ.

ಸಮ್ರೀನ್ ಕೌರ್ ಅವರು ‘ಮಿಸ್ ಇಂಡಿಯಾ ಜಮ್ಮು ಮತ್ತು ಕಾಶ್ಮೀರ’ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾಷನ್ ಮತ್ತು ವಿಭಿನ್ನ ಸ್ಟೈಲಿಶ್ ಲುಕ್ ಮೂಲಕವೂ ಅಭಿಮಾನಿಗಳನ್ನು ಹೊಂದಿದ್ದಾರೆ. ಬಹುಕಾಲದಿಂದ ಪ್ರೀತಿಸುತ್ತಿದ್ದ ಅರ್ಷದೀಪ್ ಸಿಂಗ್ ಮತ್ತು ಸಮ್ರೀನ್ ಕೌರ್ ಇದೀಗ ತಮ್ಮ ಸಂಬಂಧಕ್ಕೆ ನಿಶ್ಚಿತಾರ್ಥದ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಜೋಡಿಯ ಹೊಸ ಜೀವನಕ್ಕೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

Add Zee News as a Preferred Source
TAGS:
Sports