• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಏಷ್ಯನ್ ಪ್ಯಾರಾ ಗೇಮ್ಸ್‌ 2026: ಕಿರುಕುಳ ಆರೋಪ, ಭಾರತಕ್ಕೆ ವಾಪಸಾದ ಪ್ಯಾರಾ ಸ್ವಿಮ್ಮರ್‌!?

ಏಷ್ಯನ್ ಪ್ಯಾರಾ ಗೇಮ್ಸ್‌ 2026: ಕಿರುಕುಳ ಆರೋಪ, ಭಾರತಕ್ಕೆ ವಾಪಸಾದ ಪ್ಯಾರಾ ಸ್ವಿಮ್ಮರ್‌!?

ಜಪಾನ್ ಪೊಲೀಸರು ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಬಳಿಕ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ. ಪ್ರಕರಣದ ಬೆನ್ನಲ್ಲೇ ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು, ಜೀವಿತಾವಧಿ ನಿಷೇಧದ ಬಗ್ಗೆಯೂ ಚರ್ಚೆ ನಡೆದಿದೆ.

Written ByChetana Devarmani
Published: Oct 22, 2026, 11:35 AM IST|Updated: Oct 22, 2026, 11:37 AM IST
joinshare
ಏಷ್ಯನ್ ಪ್ಯಾರಾ ಗೇಮ್ಸ್‌ 2026: ಕಿರುಕುಳ ಆರೋಪ, ಭಾರತಕ್ಕೆ ವಾಪಸಾದ ಪ್ಯಾರಾ ಸ್ವಿಮ್ಮರ್‌!?

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಈ ದೀಪಾವಳಿಗೆ ಸುಂದರವಾಗಿ ಕಾಣಬೇಕೆ? ನಿಮ್ಮ ಕೂದಲು ಮತ್ತು ಚರ್ಮದ ಆರೈಕೆಯನ್ನು ಈಗಲೇ ಪ್ರಾರಂಭಿಸಿ! ತಜ್ಞರ ಸಲಹೆಯನ್ನು ತಿಳಿಯಿರಿ

ಈ ದೀಪಾವಳಿಗೆ ಸುಂದರವಾಗಿ ಕಾಣಬೇಕೆ? ನಿಮ್ಮ ಕೂದಲು ಮತ್ತು ಚರ್ಮದ ಆರೈಕೆಯನ್ನು ಈಗಲೇ ಪ್ರಾರಂಭಿಸಿ! ತಜ್ಞರ ಸಲಹೆಯನ್ನು ತಿಳಿಯಿರಿ

2

ಸರ್ಕಾರಿ ನೌಕರರಿಗೆ ₹69,000 ಕನಿಷ್ಠ ಮೂಲ ವೇತನ, ₹34,470 ಕನಿಷ್ಠ ಪಿಂಚಣಿ ಸೌಲಭ್ಯ! ಯಾವ ತಿಂಗಳಿನಿಂದ ಕೈ ಸೇರಲಿದೆ ಹೆಚ್ಚಿನ ಸಂಬಳ?

3

ಕರಿಬೇವು vs ಬೇವಿನ ಎಲೆಗಳು: ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ? ಇದು ಪೌಷ್ಠಿಕಾಂಶದ ಹೋಲಿಕೆ!

4

ಗದಗ ಜಿಲ್ಲೆಯಲ್ಲಿ ಕಡಲೆ ಮಾರಾಟದ ಹಣಕ್ಕಾಗಿ ಸ್ನೇಹಿತನಿಂದಲೇ ಭೀಕರ ಕೊಲೆ: ಕಿರಾತಕ ಅರೆಸ್ಟ್

5

ಮೈಸೂರು ದಸರಾದಲ್ಲಿ ಸಚಿವರನ್ನೇ ಒಳಬಿಡದ ವಿಚಾರ... ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Asian Para Games 2026: ಜಪಾನ್‌ ನಲ್ಲಿ ನಡೆಯುತ್ತಿರುವ 2026 ರ ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಭಾರತೀಯ ಪ್ಯಾರಾ ಈಜುಗಾರ ಮೊಹಮ್ಮದ್ ಶಮ್ಸ್ ಆಲಂ ಶೇಖ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಪಾನ್ ಪೊಲೀಸರು ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಬಳಿಕ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ. ಪ್ರಕರಣದ ಬೆನ್ನಲ್ಲೇ ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು, ಜೀವಿತಾವಧಿ ನಿಷೇಧದ ಬಗ್ಗೆಯೂ ಚರ್ಚೆ ನಡೆದಿದೆ.

ವರದಿಗಳ ಪ್ರಕಾರ, ನಾಗೋಯಾ ದಲ್ಲಿ ಭಾರತೀಯ ಪ್ಯಾರಾ ಈಜು ತಂಡ ತಂಗಿದ್ದ ಹೋಟೆಲ್‌ ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೋಟೆಲ್‌ನ ಮಹಿಳಾ ಹೌಸ್‌ಕೀಪಿಂಗ್ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಶೇಖ್ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳಾ ಸಿಬ್ಬಂದಿಯ ದೂರಿನ ಬಳಿಕ ಸ್ಥಳೀಯ ಆಯೋಜಕರು ಮತ್ತು ಭಾರತೀಯ ತಂಡದ ಅಧಿಕಾರಿಗಳಿಗೆ ಮಾಹಿತಿ ತಲುಪಿದೆ.

ಬಳಿಕ ಜಪಾನ್ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾರಾ ಈಜುಗಾರ ಮೊಹಮ್ಮದ್ ಶಮ್ಸ್ ಆಲಂ ಶೇಖ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ನಡೆದ ಮರುದಿನವೇ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಈ ಬೆಳವಣಿಗೆಯಿಂದ ಭಾರತೀಯ ಕ್ರೀಡಾ ತಂಡಕ್ಕೂ ಮುಜುಗರ ಉಂಟಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಪ್ಯಾರಾಲಿಂಪಿಕ್ ಸಮಿತಿ (PCI), ಶೇಖ್ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಜೀವಿತಾವಧಿ ನಿಷೇಧ ವಿಧಿಸುವ ಪ್ರಸ್ತಾವನೆಯೂ ಪರಿಶೀಲನೆಯಲ್ಲಿದೆ. ಆದರೆ, ಈ ಕುರಿತು ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಕಣಕ್ಕಿಳಿಯಬೇಕಿದ್ದ ಪ್ಯಾರಾ ಈಜುಗಾರ ಮೊಹಮ್ಮದ್ ಶಮ್ಸ್ ಆಲಂ ಶೇಖ್, ಆರೋಪದ ಹಿನ್ನೆಲೆಯಲ್ಲಿ ಸ್ಪರ್ಧಿಸುವ ಅವಕಾಶ ಕಳೆದುಕೊಂಡಿದ್ದಾರೆ. ಕ್ರೀಡಾಕೂಟ ಮುಗಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣದ ಕುರಿತು ಚರ್ಚಿಸಿ ಮುಂದಿನ ಕ್ರಮ ನಿರ್ಧರಿಸುವ ಸಾಧ್ಯತೆಯಿದೆ.

ಯಾರು ಈ ಮೊಹಮ್ಮದ್ ಶಮ್ಸ್ ಆಲಂ ಶೇಖ್?

40 ವರ್ಷದ ಪ್ಯಾರಾ ಈಜುಗಾರ ಮೊಹಮ್ಮದ್ ಶಮ್ಸ್ ಆಲಂ ಶೇಖ್ ಮೂಲತಃ ಬಿಹಾರದವರು. ಅವರು ಪ್ಯಾರಾ ಈಜು ಕ್ಷೇತ್ರದಲ್ಲಿ ಭಾರತವನ್ನು ಹಲವು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪ್ರತಿನಿಧಿಸಿದ್ದಾರೆ. ಪುರುಷರ 100 ಮೀಟರ್ ಬಟರ್‌ಫ್ಲೈ ಎಸ್5 ಮತ್ತು 50 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಎಸ್‌ಬಿ4 ವಿಭಾಗಗಳಲ್ಲಿ ಅವರು ಈ ಹಿಂದೆ ವಿಶ್ವದ ನಂಬರ್ ಒನ್ ಸ್ಥಾನ ಪಡೆದಿದ್ದರು ಎಂದು ವರದಿಯಾಗಿದೆ.

2018 ರಲ್ಲಿ ಜಕಾರ್ತಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೊಹಮ್ಮದ್ ಶಮ್ಸ್ ಆಲಂ ಶೇಖ್ 200 ಮೀಟರ್ ಮತ್ತು 50 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗೆದ್ದಿದ್ದರು. 2025ರ ರೇಕ್ಜಾವಿಕ್ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿಯೂ 200 ಮೀಟರ್ ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಚಿನ್ನದ ಪದಕ ಗೆದ್ದು ಭಾರತೀಯ ಹಾಗೂ ಏಷ್ಯನ್ ದಾಖಲೆ ನಿರ್ಮಿಸಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದ ಆಟಗಾರನ ವಿರುದ್ಧ ಕೇಳಿಬಂದಿರುವ ಈ ಆರೋಪ ಇದೀಗ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಹಾಗೂ ಭಾರತೀಯ ಪ್ಯಾರಾಲಿಂಪಿಕ್ ಸಮಿತಿಯ ಅಧಿಕೃತ ನಿರ್ಧಾರ ಏನಿರಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

ಗಮನಿಸಿ: ಈ ವರದಿಯಲ್ಲಿನ ಆರೋಪಗಳು ಇನ್ನೂ ಅಂತಿಮವಾಗಿ ಸಾಬೀತಾಗಿರುವುದಿಲ್ಲ. ಶಿಸ್ತು ಕ್ರಮದ ಕುರಿತು ಅಧಿಕೃತ ಅಂತಿಮ ನಿರ್ಧಾರವೂ ಪ್ರಕಟವಾಗಿಲ್ಲ.
 

Add Zee News as a Preferred Source
TAGS:
Asian Games