• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಮುಂಬೈ ಇಂಡಿಯನ್ಸ್‌ಗೆ ಗುಡ್‌ಬೈ ಹೇಳಲಿದ್ದಾರಾ ಹಾರ್ದಿಕ್ ಪಾಂಡ್ಯ? ಪಂಜಾಬ್ ಕಿಂಗ್ಸ್‌ಗೆ ಮೆಗಾ ಟ್ರೇಡ್‌ ಮಾತುಕತೆ!

ಮುಂಬೈ ಇಂಡಿಯನ್ಸ್‌ಗೆ ಗುಡ್‌ಬೈ ಹೇಳಲಿದ್ದಾರಾ ಹಾರ್ದಿಕ್ ಪಾಂಡ್ಯ? ಪಂಜಾಬ್ ಕಿಂಗ್ಸ್‌ಗೆ ಮೆಗಾ ಟ್ರೇಡ್‌ ಮಾತುಕತೆ!

ಐಪಿಎಲ್ 2027ಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತೊರೆದು ಪಂಜಾಬ್ ಕಿಂಗ್ಸ್ ಸೇರುವ ಸಾಧ್ಯತೆ ಕುರಿತು ಚರ್ಚೆ ಜೋರಾಗಿದೆ. ಈ ವರ್ಗಾವಣೆ ಮಾತುಕತೆಯಲ್ಲಿ ಪಂಜಾಬ್‌ನ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ ಮತ್ತು ವಿಕೆಟ್ ಕೀಪರ್ ವಿಷ್ಣು ವಿನೋದ್ ಹೆಸರುಗಳೂ ಕೇಳಿಬಂದಿವೆ. ಆದರೆ ಆಟಗಾರರ ವರ್ಗಾವಣೆ ಇನ್ನೂ ಅಂತಿಮಗೊಂಡಿಲ್ಲ. ಎರಡೂ ತಂಡಗಳ ಅಧಿಕೃತ ಘೋಷಣೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

Written ByPuttaraj K Alur
Published: Nov 05, 2026, 16:14 IST|Updated: Nov 05, 2026, 16:23 IST
joinshare
ಮುಂಬೈ ಇಂಡಿಯನ್ಸ್‌ಗೆ ಗುಡ್‌ಬೈ ಹೇಳಲಿದ್ದಾರಾ ಹಾರ್ದಿಕ್ ಪಾಂಡ್ಯ? ಪಂಜಾಬ್ ಕಿಂಗ್ಸ್‌ಗೆ ಮೆಗಾ ಟ್ರೇಡ್‌ ಮಾತುಕತೆ!
Image Credit: Hardik Pandya

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Hardik Pandya: ಐಪಿಎಲ್ 2027ರ ಸೀಸನ್ ಆರಂಭಕ್ಕೂ ಮುನ್ನ ಆಟಗಾರರ ವರ್ಗಾವಣೆ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಂಡವನ್ನ ತೊರೆದು ಪಂಜಾಬ್ ಕಿಂಗ್ಸ್ ಸೇರಲಿದ್ದಾರೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹಾರ್ದಿಕ್ ಅವರನ್ನ ತಮ್ಮ ತಂಡಕ್ಕೆ ಕರೆತರಲು ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಮಾತುಕತೆ ಮುಂದುವರಿದಿದೆ ಎಂದು ವರದಿಗಳು ತಿಳಿಸಿವೆ.

ಈ ವರ್ಗಾವಣೆ ಒಪ್ಪಂದದ ಭಾಗವಾಗಿ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ ಮುಂಬೈ ಇಂಡಿಯನ್ಸ್‌ಗೆ ಸೇರುವ ಸಾಧ್ಯತೆಯಿದೆ. ಇದರೊಂದಿಗೆ ವಿಕೆಟ್ ಕೀಪರ್ ಬ್ಯಾಟರ್ ವಿಷ್ಣು ವಿನೋದ್ ಅವರ ಹೆಸರೂ ಪ್ರಸ್ತಾವಿತ ಒಪ್ಪಂದದಲ್ಲಿ ಕೇಳಿಬಂದಿದೆ. ಆದರೆ ಈ ಆಟಗಾರರ ವರ್ಗಾವಣೆ ಕುರಿತು ಎರಡೂ ತಂಡಗಳಿಂದ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

ಹಾರ್ದಿಕ್ ಬದಲಿಗೆ ಅರ್ಶ್‌ದೀಪ್ ಸಿಂಗ್?

ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಮಾತುಕತೆಯಲ್ಲಿ ಅರ್ಶ್‌ದೀಪ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಪಂಜಾಬ್ ತಂಡ ಹಾರ್ದಿಕ್ ಪಾಂಡ್ಯರನ್ನ ಪಡೆಯಲು ಆಸಕ್ತಿ ತೋರಿದ್ದು, ಬದಲಾಗಿ ಅರ್ಶ್‌ದೀಪ್ ಅವರನ್ನ ಮುಂಬೈ ತಂಡಕ್ಕೆ ನೀಡುವ ಪ್ರಸ್ತಾವನೆ ಮುಂದಿಟ್ಟಿದೆ ಎಂದು ವರದಿಯಾಗಿದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಬೌಲಿಂಗ್ ವಿಭಾಗವನ್ನ ಬಲಪಡಿಸುವ ಅಗತ್ಯವಿದ್ದು, ಎಡಗೈ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ ತಂಡಕ್ಕೆ ಉಪಯುಕ್ತವಾಗಬಹುದು ಎಂಬ ಲೆಕ್ಕಾಚಾರವಿದೆ ಎಂದು ವರದಿಗಳು ತಿಳಿಸಿವೆ. ಅರ್ಶ್‌ದೀಪ್ ಜೊತೆಗೆ ವಿಷ್ಣು ವಿನೋದ್ ಅವರನ್ನೂ ವರ್ಗಾವಣೆ ಒಪ್ಪಂದದಲ್ಲಿ ಸೇರಿಸುವ ಸಾಧ್ಯತೆ ಚರ್ಚೆಯಲ್ಲಿದೆ. ಆದರೆ ಈ ಪ್ರಸ್ತಾವನೆ ಅಂತಿಮಗೊಂಡಿಲ್ಲ. ಆಟಗಾರರ ವರ್ಗಾವಣೆಗೆ ಸಂಬಂಧಿಸಿದ ಮಾತುಕತೆ ಇನ್ನೂ ನಡೆಯುತ್ತಿದ್ದು, ಒಪ್ಪಂದದ ವಿವರಗಳು ಅಂತಿಮವಾಗಬೇಕಿವೆ.

ಪಂಜಾಬ್ ತಂಡದಲ್ಲಿ ಆಟಗಾರನಾಗಿ ಮುಂದುವರಿಯಲಿದ್ದಾರಾ ಹಾರ್ದಿಕ್?

ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದರೂ ನಾಯಕತ್ವದ ಜವಾಬ್ದಾರಿ ಸಿಗುವ ಸಾಧ್ಯತೆ ಕಡಿಮೆ ಎಂದು ವರದಿಗಳು ಸೂಚಿಸಿವೆ. ತಂಡದ ನಾಯಕನಾಗಿ ಶ್ರೇಯಸ್ ಅಯ್ಯರ್ ಮುಂದುವರಿಯುವ ನಿರೀಕ್ಷೆಯಿದೆ. ಹೀಗಾಗಿ ಹಾರ್ದಿಕ್ ಪಂಜಾಬ್ ತಂಡದಲ್ಲಿ ನಾಯಕನಾಗಿ ಅಲ್ಲ, ಆಟಗಾರನಾಗಿ ಆಡಲಿದ್ದಾರೆ ಎನ್ನಲಾಗಿದೆ. 2024ರಲ್ಲಿ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದ ಹಾರ್ದಿಕ್ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆದರೆ ಅವರ ನಾಯಕತ್ವದ ಅವಧಿಯಲ್ಲಿ ತಂಡ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗಿರಲಿಲ್ಲ. ಮೂರು ಸೀಸನ್‌ಗಳಲ್ಲಿ ಎರಡು ಬಾರಿ ಮುಂಬೈ ತಂಡ ಪ್ಲೇಆಫ್ ಪ್ರವೇಶಿಸುವಲ್ಲಿ ವಿಫಲವಾಗಿತ್ತು. ಇದರಿಂದ ಹಾರ್ದಿಕ್ ಅವರ ಮುಂದಿನ ಐಪಿಎಲ್ ಪಯಣದ ಕುರಿತು ಹಲವು ಚರ್ಚೆಗಳು ಆರಂಭವಾಗಿದ್ದವು.

ಹಾರ್ದಿಕ್‌ಗೆ ಇತರ ತಂಡಗಳಿಂದಲೂ ಆಸಕ್ತಿ

ಹಾರ್ದಿಕ್ ಪಾಂಡ್ಯ ಅವರನ್ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಪಂಜಾಬ್ ಕಿಂಗ್ಸ್ ಮಾತ್ರವಲ್ಲದೆ ರಾಜಸ್ಥಾನ್ ರಾಯಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡಗಳೂ ಆಸಕ್ತಿ ತೋರಿದ್ದವು ಎಂದು ವರದಿಯಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದಿಂದಲೂ ಹಾರ್ದಿಕ್ ಅವರನ್ನ ಪಡೆಯುವ ಕುರಿತು ಪ್ರಸ್ತಾವನೆ ಬಂದಿತ್ತು ಎನ್ನಲಾಗಿದೆ. ಆದರೆ ಮುಂಬೈ ಇಂಡಿಯನ್ಸ್ ತಂಡವು ಹಾರ್ದಿಕ್ ಅವರನ್ನ ಬಿಡುಗಡೆ ಮಾಡಲು ಬದಲಾಗಿ ಪ್ರಮುಖ ಆಟಗಾರರನ್ನ ಪಡೆಯುವ ನಿರೀಕ್ಷೆಯಲ್ಲಿದೆ ಎಂದು ವರದಿಗಳು ತಿಳಿಸಿವೆ. ಮುಂಬೈ ತಂಡವು ತನ್ನ ಬೌಲಿಂಗ್ ವಿಭಾಗವನ್ನ ಬಲಪಡಿಸುವತ್ತ ಗಮನ ಹರಿಸಿದೆ. ಹೀಗಾಗಿ ಅರ್ಶ್‌ದೀಪ್ ಸಿಂಗ್ ಒಳಗೊಂಡಿರುವ ಪಂಜಾಬ್ ತಂಡದ ಪ್ರಸ್ತಾವನೆ ಹೆಚ್ಚು ಗಮನ ಸೆಳೆದಿದೆ ಎನ್ನಲಾಗಿದೆ.

ನವೆಂಬರ್ 17ರೊಳಗೆ ಅಂತಿಮ ನಿರ್ಧಾರ?

ಐಪಿಎಲ್ ಆಟಗಾರರ ವರ್ಗಾವಣೆ ಮತ್ತು ರಿಟೆನ್ಷನ್ ಪ್ರಕ್ರಿಯೆಗೆ ಸಂಬಂಧಿಸಿದ ಗಡುವನ್ನ ಬಿಸಿಸಿಐ ನವೆಂಬರ್ 17ರವರೆಗೆ ವಿಸ್ತರಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಿಗೆ ಒಪ್ಪಂದದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಇನ್ನೂ ಸಮಯವಿದೆ. ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16ರಂದು ಗೋವಾದಲ್ಲಿ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಅದಕ್ಕೂ ಮುನ್ನ ತಂಡಗಳ ನಡುವಿನ ಆಟಗಾರರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ ಅವರು ಗಾಯದ ಸಮಸ್ಯೆಯಿಂದ ಕಳೆದ ಐಪಿಎಲ್ ಸೀಸನ್ ಬಳಿಕ ಸ್ಪರ್ಧಾತ್ಮಕ ಪಂದ್ಯಗಳಲ್ಲಿ ಆಡಿಲ್ಲವೆಂಬ ಅಂಶವೂ ವರ್ಗಾವಣೆ ಮಾತುಕತೆಯಲ್ಲಿ ಪ್ರಮುಖವಾಗಿದೆ. ಅವರ ಫಿಟ್‌ನೆಸ್ ಮತ್ತು ಮುಂದಿನ ಸೀಸನ್‌ಗೆ ಲಭ್ಯತೆ ಕೂಡ ತಂಡಗಳ ನಿರ್ಧಾರದಲ್ಲಿ ಗಮನದಲ್ಲಿರಲಿದೆ. ಒಟ್ನಲ್ಲಿ ಮುಂಬೈ ಇಂಡಿಯನ್ಸ್ ತೊರೆದು ಪಂಜಾಬ್ ಕಿಂಗ್ಸ್ ಸೇರುವ ಸಾಧ್ಯತೆಯಿರುವ ಹಾರ್ದಿಕ್ ಪಾಂಡ್ಯರ ವರ್ಗಾವಣೆ ಐಪಿಎಲ್ ವಲಯದಲ್ಲಿ ಕುತೂಹಲ ಮೂಡಿಸಿದೆ. ಆದರೆ ಅರ್ಶ್‌ದೀಪ್ ಸಿಂಗ್ ಸೇರಿದಂತೆ ಆಟಗಾರರ ವರ್ಗಾವಣೆ ಒಪ್ಪಂದ ಅಂತಿಮಗೊಂಡಿದೆಯೇ ಎಂಬುದಕ್ಕೆ ಎರಡೂ ತಂಡಗಳ ಅಧಿಕೃತ ಘೋಷಣೆಗಾಗಿ ಕಾಯಬೇಕಿದೆ.

Add Zee News as a Preferred Source
TAGS:
Cricket
Sports
Kannada News