• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಏಷ್ಯನ್ ಗೇಮ್ಸ್‌ 2026: ಭಾರತ - ಪಾಕಿಸ್ತಾನ ಪಂದ್ಯ ಯಾವಾಗ ನಡೆಯಲಿದೆ?

ಏಷ್ಯನ್ ಗೇಮ್ಸ್‌ 2026: ಭಾರತ - ಪಾಕಿಸ್ತಾನ ಪಂದ್ಯ ಯಾವಾಗ ನಡೆಯಲಿದೆ?

Asian Games 2026 IND vs PAK Match date and time : ಜಪಾನ್‌ನ ಐಚಿ - ನಗೋಯಾದಲ್ಲಿ 20ನೇ ಏಷ್ಯನ್ ಕ್ರೀಡಾಕೂಟ ನಡೆಯುತ್ತಿದ್ದು, ಪುರುಷರ ಕ್ರಿಕೆಟ್ ಪಂದ್ಯಾವಳಿಯು ಸೆಪ್ಟೆಂಬರ್ 24 ರಂದು ಆರಂಭವಾಗಲಿದೆ.

Written ByChetana Devarmani
Published: Sep 24, 2026, 12:05 PM IST|Updated: Sep 24, 2026, 12:09 PM IST
joinshare
ಏಷ್ಯನ್ ಗೇಮ್ಸ್‌ 2026: ಭಾರತ - ಪಾಕಿಸ್ತಾನ ಪಂದ್ಯ ಯಾವಾಗ ನಡೆಯಲಿದೆ?

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Asian Games 2026 IND vs PAK Match date and time : ಜಪಾನ್‌ನ ಐಚಿ ನಗೋಯಾದಲ್ಲಿ 20 ನೇ ಏಷ್ಯನ್ ಕ್ರೀಡಾಕೂಟ ನಡೆಯುತ್ತಿದ್ದು, ಪುರುಷರ ಕ್ರಿಕೆಟ್ ಪಂದ್ಯಾವಳಿಯು ಸೆಪ್ಟೆಂಬರ್ 24 ರಂದು ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಜಪಾನ್ ತಂಡವು ಅಫ್ಘಾನಿಸ್ತಾನ ವನ್ನು ಎದುರಿಸಲಿದೆ. ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಕ್ರಿಕೆಟ್ ನಾಲ್ಕನೇ ಬಾರಿಗೆ ಸೇರ್ಪಡೆಗೊಂಡಿದ್ದು, ಒಟ್ಟು 10 ತಂಡಗಳು ಪದಕಕ್ಕಾಗಿ ಸ್ಪರ್ಧಿಸುತ್ತಿವೆ.

ಏಷ್ಯನ್ ಕ್ರೀಡಾಕೂಟದಲ್ಲಿ ನಡೆಯಲಿರುವ ಕ್ರಿಕೆಟ್‌ ಪಂದ್ಯಾವಳಿಯ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಅಭಿಮಾನಿಗಳ ಮನದಲ್ಲಿರುವ ಪ್ರಮುಖ ಪ್ರಶ್ನೆಯೆಂದರೆ, ಕ್ರಿಕೆಟ್ ಅಂಗಳದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ರೋಚಕ ಹಣಾಹಣಿ ನಡೆಯಲಿದೆಯೇ ಅಥವಾ ಇಲ್ಲವೇ ಎಂಬುದು. ಪಂದ್ಯಾವಳಿಯ ಅಧಿಕೃತ ಸ್ವರೂಪ ಮತ್ತು ವೇಳಾಪಟ್ಟಿಯ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಏಷ್ಯನ್‌ ಗೇಮ್ಸ್‌ನಲ್ಲಿ ಮುಖಾಮುಖಿ ಸಾಧ್ಯವಿದೆ. ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯಗಳು ಎಂದು ನಡೆಯಲಿವೆ ಎಂಬುದನ್ನು ತಿಳಿಯಲು ಇಲ್ಲಿ ತಿಳಿಯಿರಿ. 

ಈ ಬಾರಿ ಏಷ್ಯನ್ ಗೇಮ್ಸ್‌ ನಲ್ಲಿ ಪುರುಷರ ಕ್ರಿಕೆಟ್ ಪಂದ್ಯಾವಳಿಯಲ್ಲಿ 10 ದೇಶಗಳ ತಂಡಗಳು ಸ್ಪರ್ಧಿಸುತ್ತಿವೆ. ಶ್ರೇಯಾಂಕದ ಆಧಾರದ ಮೇಲೆ ಭಾರತ, ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ನೇರವಾಗಿ ಕ್ವಾರ್ಟರ್-ಫೈನಲ್ ಹಂತಕ್ಕೆ ಪ್ರವೇಶ ಪಡೆದಿವೆ. ಅದೇ ಸಮಯದಲ್ಲಿ, ಅಫ್ಘಾನಿಸ್ತಾನವು 'ಪೂರ್ಣ ಸದಸ್ಯ' (Full Member) ತಂಡವಾಗಿ ಮುಖ್ಯ ಹಂತದಲ್ಲಿ ನೇರ ಸ್ಥಾನವನ್ನು ಪಡೆದುಕೊಂಡಿದೆ. ಜೊತೆಗೆ, ಜೂನ್‌ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದ ಅರ್ಹತಾ ಸುತ್ತಿನ ಮೂಲಕ ಹಾಂಗ್ ಕಾಂಗ್, ಮಲೇಷ್ಯಾ, ನೇಪಾಳ ಮತ್ತು ಓಮನ್ ತಂಡಗಳು ಮುಖ್ಯ ಹಂತಕ್ಕೆ ಅರ್ಹತೆ ಪಡೆದಿವೆ. ಆತಿಥೇಯ ರಾಷ್ಟ್ರವಾಗಿ ಜಪಾನ್ ನೇರ ಪ್ರವೇಶವನ್ನು ಪಡೆದಿದೆ.

ಪಂದ್ಯಾವಳಿಯ ಸ್ವರೂಪವೇನು?

ಏಷ್ಯನ್‌ ಗೇಮ್ಸ್‌ನಲ್ಲಿ ನಡೆಯಲಿರುವ ಕ್ರಿಕೆಟ್‌ ಪಂದ್ಯಾವಳಿಯನ್ನು ಎರಡು ಪ್ರತ್ಯೇಕ ಹಂತಗಳಾಗಿ ವಿಂಗಡಿಸಲಾಗಿದೆ. ಕೆಳ ಶ್ರೇಯಾಂಕದ ಆರು ತಂಡಗಳನ್ನು ಅಂದರೆ ಆತಿಥೇಯ ಜಪಾನ್, ಅಫ್ಘಾನಿಸ್ತಾನ, ನೇಪಾಳ, ಓಮನ್, ಮಲೇಷ್ಯಾ ಮತ್ತು ಹಾಂಗ್ ಕಾಂಗ್ ತಲಾ ಮೂರು ತಂಡಗಳಿರುವ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. 'ಸಿಂಗಲ್ ರೌಂಡ್-ರಾಬಿನ್' ಹಂತದ ನಂತರ, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಕ್ವಾರ್ಟರ್ ಫೈನಲ್‌ಗೆ ಮುನ್ನಡೆಯಲಿವೆ. ಈ ನಾಲ್ಕು ತಂಡಗಳು ನಂತರ ಭಾರತ, ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳನ್ನು ಎದುರಿಸಲಿವೆ. ತದನಂತರ ಸೆಮಿ ಫೈನಲ್ ಪಂದ್ಯಗಳು ನಡೆಯಲಿದ್ದು, ನಂತರ ಫೈನಲ್ ಪಂದ್ಯ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆಯೇ?

ಏಷ್ಯನ್ ಗೇಮ್ಸ್‌ನ ವೇಳಾಪಟ್ಟಿ ಪ್ರಕಾರ, ಗುಂಪು ಹಂತದಲ್ಲಿ ಅಥವಾ ಆರಂಭಿಕ ಕ್ವಾರ್ಟರ್-ಫೈನಲ್ ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಪಂದ್ಯ ನಡೆಯುವುದಿಲ್ಲ. ಎರಡೂ ತಂಡಗಳನ್ನು ಪ್ರತ್ಯೇಕ ವಿಭಾಗಗಳಲ್ಲಿ ಇರಿಸಲಾಗಿದೆ ಮತ್ತು ಕ್ವಾರ್ಟರ್ ಫೈನಲ್‌ಗೆ ನೇರ ಪ್ರವೇಶ ನೀಡಲಾಗಿದೆ. ಎರಡೂ ತಂಡಗಳು ನಾಕೌಟ್ ಹಂತಗಳಲ್ಲಿ ಮುನ್ನಡೆದರೆ ಮಾತ್ರ ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯಲು ಸಾಧ್ಯವಾಗುತ್ತದೆ. ಉಭಯ ತಂಡಗಳು ತಮ್ಮ ತಮ್ಮ ಕ್ವಾರ್ಟರ್ ಫೈನಲ್ ಮತ್ತು ಸೆಮಿ ಫೈನಲ್ ಪಂದ್ಯಗಳನ್ನು ಗೆದ್ದರೆ, ಅಕ್ಟೋಬರ್ 3 ರಂದು ನಡೆಯಲಿರುವ ಚಿನ್ನದ ಪದಕದ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಆಗಲಿವೆ. ಮತ್ತೊಂದೆಡೆ ಒಂದು ವೇಳೆ ಎರಡೂ ತಂಡಗಳು ಸೆಮಿ ಫೈನಲ್‌ ನಲ್ಲಿ ಸೋತರೆ, ಅದೇ ದಿನ ಅಂದರೆ ಅಕ್ಟೋಬರ್ 3 ರಂದು ನಡೆಯುವ ಕಂಚಿನ ಪದಕದ ಪಂದ್ಯ ದಲ್ಲಿಯೂ ಅವು ಪರಸ್ಪರ ಮುಖಾಮುಖಿ ಆಗುವ ಸಾಧ್ಯತೆಯಿದೆ. ಒಟ್ಟಾರೆ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ವೀಕ್ಷಿಸಲು ಕ್ರಿಕೆಟ್‌ ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. 

Add Zee News as a Preferred Source
TAGS:
Cricket