• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ರಾಜಧಾನಿಯಲ್ಲಿ ಇಂಡೋ-ವಿಂಡೀಸ್ ಟಿ20 ಕದನ : ಬಿಗಿ ಭದ್ರತೆ, ಪಾರ್ಕಿಂಗ್ ವ್ಯವಸ್ಥೆ ಸಂಪೂರ್ಣ ಮಾಹಿತಿ ಇಲ್ಲಿದೆ

ರಾಜಧಾನಿಯಲ್ಲಿ ಇಂಡೋ-ವಿಂಡೀಸ್ ಟಿ20 ಕದನ : ಬಿಗಿ ಭದ್ರತೆ, ಪಾರ್ಕಿಂಗ್ ವ್ಯವಸ್ಥೆ ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಿರ್ಣಾಯಕ ಐದನೇ ಟಿ20 ಪಂದ್ಯಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಈ ಬಾರಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಹಾಗೂ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

Written ByKrishna NK
Published: Oct 16, 2026, 05:07 PM IST|Updated: Oct 16, 2026, 05:10 PM IST
joinshare
ರಾಜಧಾನಿಯಲ್ಲಿ ಇಂಡೋ-ವಿಂಡೀಸ್ ಟಿ20 ಕದನ : ಬಿಗಿ ಭದ್ರತೆ, ಪಾರ್ಕಿಂಗ್ ವ್ಯವಸ್ಥೆ ಸಂಪೂರ್ಣ ಮಾಹಿತಿ ಇಲ್ಲಿದೆ
Image Credit: cricket news

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಮಳೆ ನಿಂತಿತು ಅಂದುಕೊಳ್ಳಬೇಡಿ.. ರಾಜಧಾನಿ ಜನರಿಗೆ ಎಚ್ಚರಿಕೆ.. ಈ 5 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ!

ಮಳೆ ನಿಂತಿತು ಅಂದುಕೊಳ್ಳಬೇಡಿ.. ರಾಜಧಾನಿ ಜನರಿಗೆ ಎಚ್ಚರಿಕೆ.. ಈ 5 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ!

2

ಡಿಸೆಂಬರ್‌ ಒಳಗೆ 17,000 ಶಿಕ್ಷಕರ ನೇಮಕಾತಿ ಪೂರ್ಣ! ಸಚಿವ ಮಧು ಬಂಗಾರಪ್ಪ ಘೋಷಣೆ

3

ರಾಜಧಾನಿಯಲ್ಲಿ ಇಂಡೋ-ವಿಂಡೀಸ್ ಟಿ20 ಕದನ : ಬಿಗಿ ಭದ್ರತೆ, ಪಾರ್ಕಿಂಗ್ ವ್ಯವಸ್ಥೆ ಸಂಪೂರ್ಣ ಮಾಹಿತಿ ಇಲ್ಲಿದೆ

4

ಸಿದ್ದರಾಮಯ್ಯರಿಂದ ಅಧಿಕಾರಿ ಕಿತ್ತುಕೊಳ್ಳೊಕ್ಕೆ ಸ್ಟಿಂಗ್‌ ಪ್ಲಾನ್ ಮಾಡಿದ್ದೇ ಡಿಕೆಶಿ : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಿಡಿ

5

Bank Holiday: ನಾಳೆ 3ನೇ ಶನಿವಾರವಾದರೂ ಬ್ಯಾಂಕ್‌ಗಳಿಗೆ ರಜೆ.. ಎಲ್ಲಿ? ಏಕೆ? ಇಲ್ಲಿದೆ ಮಹತ್ವದ ಮಾಹಿತಿ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ಕಾಲ್ತುಳಿತ ದುರಂತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪಂದ್ಯ ವೀಕ್ಷಣೆಗೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಕ್ರೀಡಾಂಗಣದ ಸುತ್ತಮುತ್ತ 2 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದ್ದು, ವಾಹನ ಸಂಚಾರ ಮತ್ತು ಪಾರ್ಕಿಂಗ್ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ. ಹಾಗಾದ್ರೆ, ಪಂದ್ಯಕ್ಕೆ ಹೇಗಿದೆ ಭದ್ರತಾ ವ್ಯವಸ್ಥೆ..? ಯಾವೆಲ್ಲಾ ಕಡೆ ವಾಹನ ಪಾರ್ಕಿಂಗ್‌ಗೆ ಅವಕಾಶ..? ಕಂಪ್ಲೀಟ್ ಡೀಟೇಲ್ಸ್.

ಸಮಬಲದ ಕದನ.. ಅಭಿಮಾನಿಗಳಲ್ಲಿ ಕುತೂಹಲ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಐದನೇ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ನಡೆದಿರುವ ನಾಲ್ಕು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಎರಡು ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿವೆ.ಹೀಗಾಗಿ ಐದನೇ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ನಾಳೆ ನಡೆಯಲಿರುವ ಈ ಪಂದ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.ಇನ್ನು ಕಾಲ್ತುಳಿತ ದುರಂತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಅಂತರಾಷ್ಟ್ರೀಯ ಪಂದ್ಯ ಇದಾಗಿರುವುದರಿಂದ, ಭದ್ರತಾ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್
ಪಂದ್ಯದ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.ಐಪಿಎಲ್ ಮಾದರಿಯಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳನ್ನೂ ನಿಯೋಜಿಸಲಾಗಿದೆ.ಪಂದ್ಯ ವೀಕ್ಷಣೆಗೆ ಬರುವ ಅಭಿಮಾನಿಗಳ ಸುರಕ್ಷತೆ, ಜನಸಂದಣಿ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕೆ ಪೊಲೀಸರು ಹೆಚ್ಚಿನ ಗಮನ ಹರಿಸಿದ್ದಾರೆ.ಅಂತರಾಷ್ಟ್ರೀಯ ಪಂದ್ಯ ಹಿನ್ನೆಲೆ ಎರಡೂ ತಂಡಗಳ ಆಟಗಾರರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೂ ಹೆಚ್ಚಿನ ಭದ್ರತೆ ಒದಗಿಸಲಾಗುತ್ತಿದೆ.ಇದರ ಜೊತೆಗೆ ಸಂಚಾರ ಮಾರ್ಗ ಮತ್ತು ವಾಹನ ಪಾರ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ ಪೊಲೀಸರು ಈಗಾಗಲೇ ಸುತ್ತೋಲೆ ಹೊರಡಿಸಿದ್ದಾರೆ.

ಪಾರ್ಕಿಂಗ್ ಎಲ್ಲಿ..? ಪ್ರವೇಶ ಯಾವ ಗೇಟ್‌ನಲ್ಲಿ..?
ಪಂದ್ಯ ವೀಕ್ಷಣೆಗೆ ಬರುವ ಅಭಿಮಾನಿಗಳು ನಿಗದಿಪಡಿಸಿರುವ ಸ್ಥಳಗಳಲ್ಲೇ ವಾಹನಗಳನ್ನು ಪಾರ್ಕ್ ಮಾಡಬೇಕು.ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಸ್ ನಿಲ್ದಾಣದ ಮೊದಲ ಮಹಡಿ, ಫ್ರೀಡಂ ಪಾರ್ಕ್‌ನ ಎಂಎಲ್‌ಸಿಪಿ ಪಾರ್ಕಿಂಗ್ ಸ್ಥಳ ಹಾಗೂ ಸೆಂಟ್ ಜೋಸೆಫ್ ಯುರೋಪಿಯನ್ ಬಾಲಕರ ಶಾಲೆಯ ಮೈದಾನದಲ್ಲಿ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ.

ಇನ್ನು ಕಬ್ಬನ್ ರಸ್ತೆ, ಲಿಂಕ್ ರಸ್ತೆ ಮತ್ತು ಕ್ವೀನ್ಸ್ ರಸ್ತೆಯಲ್ಲಿರುವ ನಿಗದಿತ ಗೇಟ್‌ಗಳ ಮೂಲಕವೇ ಕ್ರೀಡಾಂಗಣಕ್ಕೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ನೀಡಲಾಗಿದೆ. ಕೆಲವು ಗೇಟ್‌ಗಳನ್ನು ನಿರ್ಗಮನಕ್ಕೆ ಮಾತ್ರ ಮೀಸಲಿಡಲಾಗಿದೆ.ಓಲಾ,ಉಬರ್ ಹಾಗೂ ಆಟೋ ಸೇರಿದಂತೆ ಕ್ಯಾಬ್‌ಗಳ ಪಿಕ್‌ಅಪ್‌ಗೆ ಬಿಆರ್‌ವಿ ಗ್ರೌಂಡ್‌ನಲ್ಲಿ ಮತ್ತು ಡ್ರಾಪ್‌ಗೆ ಗೇಟ್ ನಂಬರ್ 6ರಲ್ಲಿ ವ್ಯವಸ್ಥೆ ಮಾಡಲಾಗಿದೆ.ಹೀಗಾಗಿ ಪಂದ್ಯ ವೀಕ್ಷಣೆಗೆ ತೆರಳುವವರು ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸಿ, ಸಾಧ್ಯವಾದಷ್ಟು ಮುಂಚಿತವಾಗಿಯೇ ಕ್ರೀಡಾಂಗಣ ತಲುಪುವುದು ಉತ್ತಮ. ಅದೆನೇ ಹೇಳಿ. ಕಾಲ್ತುಳಿತದ ಕರಾಳ ನೆನಪು ಇನ್ನೂ ಕ್ರಿಕೆಟ್ ಪ್ರೇಮಿಗಳನ್ನು ಕಾಡುತ್ತಿದೆ. ಈಗ ಇಂಡೋ- ವಿಂಡೀಸ್ ಕದನ ಕುತೂಹಲ ಹೆಚ್ಚಾಗಿದ್ದು, ಪಂದ್ಯ ನೋಡಲು ಕ್ರಿಕೆಟ್ ಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ.

Add Zee News as a Preferred Source
TAGS:
Cricket