India vs West Indies Series 2026: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಬಹುನಿರೀಕ್ಷಿತ ವೈಟ್‌ಬಾಲ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ವೆಸ್ಟ್ ಇಂಡೀಸ್ ತಂಡ ಭಾರತ ಪ್ರವಾಸ ಕೈಗೊಂಡಿದ್ದು, ಉಭಯ ತಂಡಗಳ ನಡುವೆ ಒಟ್ಟು 8 ಪಂದ್ಯಗಳು ನಡೆಯಲಿವೆ. ಇದರಲ್ಲಿ 3 ಏಕದಿನ ಪಂದ್ಯಗಳು ಹಾಗೂ 5 ಟಿ20 ಪಂದ್ಯಗಳು ಸೇರಿವೆ. ಸೆಪ್ಟೆಂಬರ್ 27ರಿಂದ ಆರಂಭವಾಗುವ ಈ ಪ್ರವಾಸ ಅಕ್ಟೋಬರ್ 17ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂತಿಮ ಟಿ20 ಪಂದ್ಯದೊಂದಿಗೆ ಮುಕ್ತಾಯವಾಗಲಿದೆ. ಈ ಸರಣಿಯಲ್ಲಿ ಭಾರತ ಏಕದಿನ ತಂಡವನ್ನ ಶುಭ್‌ಮನ್ ಗಿಲ್ ಮುನ್ನಡೆಸಲಿದ್ದಾರೆ. ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಲಿದ್ದಾರೆ. ವೆಸ್ಟ್ ಇಂಡೀಸ್ ತಂಡಕ್ಕೆ ಎರಡೂ ಸರಣಿಗಳಲ್ಲೂ ಶಾಯ್ ಹೋಪ್ ನಾಯಕನಾಗಿದ್ದಾರೆ.
ಸೆಪ್ಟೆಂಬರ್ 27ರಿಂದ ಏಕದಿನ ಸರಣಿ
ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲ ಪಂದ್ಯ ಸೆಪ್ಟೆಂಬರ್ 27ರಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಎರಡನೇ ಏಕದಿನ ಪಂದ್ಯ ಸೆಪ್ಟೆಂಬರ್ 30ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಅಕ್ಟೋಬರ್ 3ರಂದು ಹೊಸ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ.
The #WestIndies have announced their squads for the upcoming tour of India! 👀🚨#INDvWI 👉 1st ODI 👉 SUN, 27th SEP, 1 PM pic.twitter.com/TePQdrVRLO
— Star Sports (@StarSportsIndia) September 19, 2026
ಏಕದಿನ ಸರಣಿಯ ವೇಳಾಪಟ್ಟಿ
* ಸೆಪ್ಟೆಂಬರ್ 27: 1ನೇ ಏಕದಿನ – ತಿರುವನಂತಪುರಂ – ಮಧ್ಯಾಹ್ನ 2 ಗಂಟೆ
* ಸೆಪ್ಟೆಂಬರ್ 30: 2ನೇ ಏಕದಿನ – ಗುವಾಹಟಿ – ಮಧ್ಯಾಹ್ನ 2 ಗಂಟೆ
* ಅಕ್ಟೋಬರ್ 3: 3ನೇ ಏಕದಿನ – ಹೊಸ ಚಂಡೀಗಢ – ಮಧ್ಯಾಹ್ನ 2 ಗಂಟೆ
ಅಕ್ಟೋಬರ್ 6ರಿಂದ ಟಿ20 ಸರಣಿ
🚨 News 🚨#TeamIndia ODI & T20I squads announced for West Indies tour of India 2026, along with updated squad for Japan T20I & Asian Games.
More Details ▶️https://t.co/Lxx3Bz8Q14 pic.twitter.com/Y9RGlQ09XK— BCCI (@BCCI) September 16, 2026
ಏಕದಿನ ಸರಣಿ ಮುಗಿದ ಬಳಿಕ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಮೊದಲ ಟಿ20 ಪಂದ್ಯ ಅಕ್ಟೋಬರ್ 6ರಂದು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಕ್ಟೋಬರ್ 9ರಂದು ರಾಂಚಿಯಲ್ಲಿ ಎರಡನೇ ಪಂದ್ಯ, ಅಕ್ಟೋಬರ್ 11ರಂದು ಇಂದೋರ್‌ನಲ್ಲಿ ಮೂರನೇ ಪಂದ್ಯ ನಡೆಯಲಿದೆ. ನಾಲ್ಕನೇ ಟಿ20 ಪಂದ್ಯ ಅಕ್ಟೋಬರ್ 14ರಂದು ಹೈದರಾಬಾದ್‌ನಲ್ಲಿ ನಡೆಯಲಿದ್ದು, ಅಂತಿಮ ಪಂದ್ಯ ಅಕ್ಟೋಬರ್ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎಲ್ಲಾ ಟಿ20 ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾಗಲಿವೆ.
ಟಿ20 ಸರಣಿಯ ವೇಳಾಪಟ್ಟಿ
* ಅಕ್ಟೋಬರ್ 6: 1ನೇ ಟಿ20 – ಲಕ್ನೋ – ಸಂಜೆ 7 ಗಂಟೆ
* ಅಕ್ಟೋಬರ್ 9: 2ನೇ ಟಿ20 – ರಾಂಚಿ – ಸಂಜೆ 7 ಗಂಟೆ
* ಅಕ್ಟೋಬರ್ 11: 3ನೇ ಟಿ20 – ಇಂದೋರ್ – ಸಂಜೆ 7 ಗಂಟೆ
* ಅಕ್ಟೋಬರ್ 14: 4ನೇ ಟಿ20 – ಹೈದರಾಬಾದ್ – ಸಂಜೆ 7 ಗಂಟೆ
* ಅಕ್ಟೋಬರ್ 17: 5ನೇ ಟಿ20 – ಬೆಂಗಳೂರು – ಸಂಜೆ 7 ಗಂಟೆ
ಬಲಿಷ್ಠ ಆಟಗಾರರೊಂದಿಗೆ ಭಾರತ ತಂಡ
ಏಕದಿನ ಸರಣಿಗೆ ಶುಭ್‌ಮನ್ ಗಿಲ್ ನಾಯಕತ್ವದ ಭಾರತ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಸೇರಿದಂತೆ ಪ್ರಮುಖ ಆಟಗಾರರು ಸ್ಥಾನ ಪಡೆದಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ತಂಡವನ್ನ ಮುನ್ನಡೆಸಲಿದ್ದು, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಅಕ್ಸರ್ ಪಟೇಲ್, ಶಿವಂ ದುಬೆ, ತಿಲಕ್ ವರ್ಮಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್ ಸೇರಿದಂತೆ ಹಲವು ಆಟಗಾರರು ತಂಡದಲ್ಲಿದ್ದಾರೆ. ವೈಭವ್ ಸೂರ್ಯವಂಶಿ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ತಂಡದಲ್ಲೂ ಪ್ರಮುಖ ಆಟಗಾರರು
ವೆಸ್ಟ್ ಇಂಡೀಸ್ ಪರ ಶಾಯ್ ಹೋಪ್ ನಾಯಕತ್ವ ವಹಿಸಲಿದ್ದಾರೆ. ಎರಡೂ ಸರಣಿಗಳ ತಂಡದಲ್ಲಿ ಜ್ಯುವೆಲ್ ಆಂಡ್ರ್ಯೂ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಶಮರ್ ಜೋಸೆಫ್, ಗುಡಕೇಶ್ ಮೋತಿ, ಕೀಮೋ ಪಾಲ್ ಮತ್ತು ಶೆರ್ಫೇನ್ ರುದರ್‌ಫೋರ್ಡ್ ಸೇರಿದಂತೆ ಪ್ರಮುಖ ಆಟಗಾರರು ಇದ್ದಾರೆ. ಇನ್ನು ಟಿ20 ತಂಡದಲ್ಲಿ ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ಅಕೇಲ್ ಹೊಸೈನ್, ರೊಮಾರಿಯೋ ಶೆಫರ್ಡ್ ಮತ್ತು ನಿಕೋಲಸ್ ಪೂರನ್ ಸೇರಿದಂತೆ ಅನುಭವಿ ಆಟಗಾರರೂ ಇದ್ದಾರೆ.
ಒಟ್ಟಿನಲ್ಲಿ ಮೂರು ವಾರಗಳ ಅವಧಿಯಲ್ಲಿ ನಡೆಯಲಿರುವ ಈ 8 ಪಂದ್ಯಗಳ ಸರಣಿ ಕ್ರಿಕೆಟ್ ಅಭಿಮಾನಿಗಳಿಗೆ ಸತತ ಪಂದ್ಯಗಳ ರಸದೌತಣ ನೀಡಲಿದೆ. ವಿಶೇಷವಾಗಿ ಅಕ್ಟೋಬರ್ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟಿ20 ಪಂದ್ಯದ ಮೇಲೆ ಅಭಿಮಾನಿಗಳ ಗಮನ ನೆಟ್ಟಿದೆ.