• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /6,6,6,6,6,6 ಆರು ಸಿಕ್ಸರ್​ ಸಿಡಿಸಿ ಅಬ್ಬರಿಸಿದ ಭಾರತೀಯ ಸ್ಟಾರ್‌ ಕ್ರಿಕೆಟರ್!

6,6,6,6,6,6 ಆರು ಸಿಕ್ಸರ್​ ಸಿಡಿಸಿ ಅಬ್ಬರಿಸಿದ ಭಾರತೀಯ ಸ್ಟಾರ್‌ ಕ್ರಿಕೆಟರ್!

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿದಿದ್ದರೂ, ಲೆಜೆಂಡ್ಸ್ ಕ್ರಿಕೆಟ್‌ನಲ್ಲಿ ಯುವರಾಜ್ ಅವರ ಬ್ಯಾಟ್ ಮತ್ತೊಮ್ಮೆ ಅಬ್ಬರಿಸುತ್ತಿರುವುದು ಅಭಿಮಾನಿಗಳಿಗೆ ಹಳೆಯ ದಿನಗಳನ್ನು ನೆನಪಿಸಿದೆ.

Written ByChetana Devarmani
Published: Oct 04, 2026, 06:24 PM IST|Updated: Oct 04, 2026, 06:26 PM IST
joinshare
6,6,6,6,6,6 ಆರು ಸಿಕ್ಸರ್​ ಸಿಡಿಸಿ ಅಬ್ಬರಿಸಿದ ಭಾರತೀಯ ಸ್ಟಾರ್‌ ಕ್ರಿಕೆಟರ್!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಜಗತ್ತಿಗೆ ಹೋರಾಟದ ಭಾಷೆ ಕಲಿಸಿದ ಬ್ರೂಸ್ ಲೀ ಜೀವನ ಕಥೆ ಗೊತ್ತೆ..? ದುರಂತ ಅಂತ್ಯ ಇಂದಿಗೂ ನಿಗೂಢ

ಜಗತ್ತಿಗೆ ಹೋರಾಟದ ಭಾಷೆ ಕಲಿಸಿದ ಬ್ರೂಸ್ ಲೀ ಜೀವನ ಕಥೆ ಗೊತ್ತೆ..? ದುರಂತ ಅಂತ್ಯ ಇಂದಿಗೂ ನಿಗೂಢ

2

ರಿಯಲ್ ಹೀರೋ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ : ಭಾರತೀಯ ಪೈಲಟ್‌‌ಗೆ ಇಸ್ರೇಲ್‌ನಿಂದ ಅತ್ಯುನ್ನತ ಗೌರವ!

3

6,6,6,6,6,6 ಆರು ಸಿಕ್ಸರ್​ ಸಿಡಿಸಿ ಅಬ್ಬರಿಸಿದ ಭಾರತೀಯ ಸ್ಟಾರ್‌ ಕ್ರಿಕೆಟರ್!

4

ಸಂಜು, ಶ್ರೇಯಸ್‌ ಅಯ್ಯರ್‌ ಅಲ್ಲ.. ವಿರಾಟ್‌ ಕೊಹ್ಲಿ 3ನೇ ಬ್ಯಾಟಿಂಗ್‌ ಸ್ಲಾಟ್‌ಗೆ ಬೆಸ್ಟ್ ಬ್ಯಾಟ್ಸ್‌ಮನ್‌‌ ಆಯ್ಕೆ

5

ನಕಲಿ ಮೆಡಿಸನ್ ಕಿಂಗ್ ಪಿನ್ ಪ್ರಶಾಂತನ ಕಳ್ಳಾಟ ಬಯಲು : ಟರ್ಕಿ ಭೇಟಿ ಸಿಕ್ರೇಟ್‌ ರಿವೀಲ್‌

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

2007ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಒಂದೇ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿ ವಿಶ್ವ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದ ಯುವರಾಜ್ ಸಿಂಗ್ ಅವರ ಆ ಐತಿಹಾಸಿಕ ಕ್ಷಣ ಇಂದಿಗೂ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿದಿದ್ದರೂ, ಲೆಜೆಂಡ್ಸ್ ಕ್ರಿಕೆಟ್‌ನಲ್ಲಿ ಯುವರಾಜ್ ಅವರ ಬ್ಯಾಟ್ ಮತ್ತೊಮ್ಮೆ ಅಬ್ಬರಿಸುತ್ತಿರುವುದು ಅಭಿಮಾನಿಗಳಿಗೆ ಹಳೆಯ ದಿನಗಳನ್ನು ನೆನಪಿಸಿದೆ.

ಶನಿವಾರ ನಡೆದ ಇಂಡಿಯಾ ಚಾಂಪಿಯನ್ಸ್ ಹಾಗೂ ಆಸ್ಟ್ರೇಲಿಯಾ ಚಾಂಪಿಯನ್ಸ್ ನಡುವಿನ ಪಂದ್ಯದಲ್ಲಿ ಭಾರತ ತಂಡ 46 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಟಾಸ್ ಬಳಿಕ ಮೊದಲು ಬ್ಯಾಟಿಂಗ್ ಮಾಡಿದ ಇಂಡಿಯಾ ಚಾಂಪಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಚಾಂಪಿಯನ್ಸ್ ತಂಡ 16.2 ಓವರ್‌ಗಳಲ್ಲಿ 150 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲನುಭವಿಸಿತು.

ಭಾರತದ ಪರ ಆರಂಭಿಕ ಆಟಗಾರ ನಮನ್ ಓಜಾ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್‌ನೊಂದಿಗೆ 31 ರನ್ ಗಳಿಸಿದರು. ಅವರ ವಿಕೆಟ್ ಪತನದ ಬಳಿಕ ಕ್ರೀಸ್‌ಗೆ ಬಂದ ನಾಯಕ ಯುವರಾಜ್ ಸಿಂಗ್ ಆಸ್ಟ್ರೇಲಿಯಾ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಯುವಿ, ಬೌಂಡರಿ ಮತ್ತು ಸಿಕ್ಸರ್‌ಗಳ ಮೂಲಕ ರನ್‌ ವೇಗವನ್ನು ಹೆಚ್ಚಿಸಿದರು. 44 ಎಸೆತಗಳಲ್ಲಿ 71 ರನ್‌ಗಳಿಸಿದ ಅವರು ತಂಡ 196 ರನ್‌ಗಳ ದೊಡ್ಡ ಮೊತ್ತ ಕಲೆಹಾಕಲು ಪ್ರಮುಖ ಕಾರಣರಾದರು.

ಯುವರಾಜ್ ಸಿಂಗ್ ಅವರಿಗೆ ಯೂಸುಫ್ ಪಠಾಣ್ ಕೂಡ ಉತ್ತಮ ಸಾಥ್ ನೀಡಿದರು. ಕೇವಲ 20 ಎಸೆತಗಳನ್ನು ಎದುರಿಸಿದ ಯೂಸುಫ್ ಒಂದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 37 ರನ್ ಸಿಡಿಸಿದರು. ಇರ್ಫಾನ್ ಪಠಾಣ್ ಮಾತ್ರ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗದೆ ಕೇವಲ ಒಂದು ರನ್‌ಗೆ ವಿಕೆಟ್ ಒಪ್ಪಿಸಿದರು. ಇನ್ನಿಂಗ್ಸ್‌ನ ಅಂತಿಮ ಹಂತದಲ್ಲಿ ರಿಷಿ ಧವನ್ ಕೂಡ ಬಿರುಸಿನ ಬ್ಯಾಟಿಂಗ್ ನಡೆಸಿದರು. ಕೇವಲ 12 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ಸಹಾಯದಿಂದ 35 ರನ್‌ಗಳಿಸಿ ತಂಡದ ಮೊತ್ತವನ್ನು 196ಕ್ಕೆ ಕೊಂಡೊಯ್ದರು.

197 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಚಾಂಪಿಯನ್ಸ್ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಾಯಕ ಉಸ್ಮಾನ್ ಖಾವಾಜಾ ಖಾತೆ ತೆರೆಯುವ ಮುನ್ನವೇ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಬೆನ್ ಡಂಕ್ ಕೂಡ ಕೇವಲ 6 ರನ್‌ಗಳಿಗೆ ಪೆವಿಲಿಯನ್ ಸೇರಿದರು. ಆರಂಭಿಕ ಆಘಾತದ ನಡುವೆಯೂ ಡಾರ್ಸಿ ಶಾರ್ಟ್ ಹಾಗೂ ಜೋ ಬರ್ನ್ಸ್ ಆಸ್ಟ್ರೇಲಿಯಾ ಇನ್ನಿಂಗ್ಸ್‌ಗೆ ಚೇತರಿಕೆ ನೀಡಿದರು.

ಇಬ್ಬರೂ ಭಾರತೀಯ ಬೌಲರ್‌ಗಳ ವಿರುದ್ಧ ಬಿರುಸಿನ ಬ್ಯಾಟಿಂಗ್ ನಡೆಸಿ ತಂಡದ ಸ್ಕೋರ್‌ಬೋರ್ಡ್‌ಗೆ ವೇಗ ನೀಡಿದರು. ಇವರಿಬ್ಬರ ಜೊತೆಯಾಟದ ಪರಿಣಾಮ ಆಸ್ಟ್ರೇಲಿಯಾ ಕೇವಲ 9ನೇ ಓವರ್‌ನಲ್ಲೇ 100 ರನ್‌ಗಳ ಗಡಿ ದಾಟಿತು. ಡಾರ್ಸಿ ಶಾರ್ಟ್ ವಿಶೇಷವಾಗಿ ಭಾರತೀಯ ಬೌಲರ್‌ಗಳ ಮೇಲೆ ಮುಗಿಬಿದ್ದರು. ಅವರು 28 ಎಸೆತಗಳಲ್ಲಿ 4 ಬೌಂಡರಿ ಹಾಗೂ ಬರೋಬ್ಬರಿ 7 ಸಿಕ್ಸರ್‌ಗಳೊಂದಿಗೆ 65 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಮತ್ತೊಂದೆಡೆ ಜೋ ಬರ್ನ್ಸ್ 32 ಎಸೆತಗಳಲ್ಲಿ 4 ಸಿಕ್ಸರ್‌ಗಳ ನೆರವಿನಿಂದ 45 ರನ್ ಗಳಿಸಿದರು. ಈ ಇಬ್ಬರ ಬ್ಯಾಟಿಂಗ್‌ನಿಂದ ಆಸ್ಟ್ರೇಲಿಯಾ ಗೆಲುವಿನತ್ತ ಸಾಗುತ್ತಿರುವಂತೆ ಕಂಡುಬಂದರೂ, ನಂತರ ಭಾರತೀಯ ಬೌಲರ್‌ಗಳು ಪಂದ್ಯವನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡರು. ಆಸ್ಟ್ರೇಲಿಯಾ ಬ್ಯಾಟಿಂಗ್ ಕುಸಿಯತೊಡಗಿತು. ಕ್ಯಾಲಮ್ ಫರ್ಗುಸನ್ ಶೂನ್ಯಕ್ಕೆ ಔಟಾದರೆ, ಜೊನಾಥನ್ ವೆಲ್ಸ್ 11 ರನ್ ಗಳಿಸಿದರು. ನಾಥನ್ ಕೌಲ್ಟರ್-ನೈಲ್ ಶೂನ್ಯಕ್ಕೆ, ಕೇನ್ ರಿಚರ್ಡ್‌ಸನ್ 4 ರನ್‌ಗೆ, ಬೆನ್ ಹಿಲ್ಫೆನ್‌ಹಾಸ್ ಒಂದು ರನ್‌ಗೆ ಹಾಗೂ ಫವಾದ್ ಅಹ್ಮದ್ 9 ರನ್‌ಗೆ ವಿಕೆಟ್ ಒಪ್ಪಿಸಿದರು.

ಭಾರತದ ಬೌಲಿಂಗ್ ವಿಭಾಗದಲ್ಲಿ ಧವಲ್ ಕುಲಕರ್ಣಿ ಹಾಗೂ ಮೋಹಿತ್ ಶರ್ಮಾ ಮಿಂಚಿದರು. ಧವಲ್ ಕುಲಕರ್ಣಿ 4 ವಿಕೆಟ್ ಪಡೆದು ಆಸ್ಟ್ರೇಲಿಯಾ ಬ್ಯಾಟಿಂಗ್ ಬೆನ್ನೆಲುಬು ಮುರಿದರೆ, ಮೋಹಿತ್ ಶರ್ಮಾ 3 ವಿಕೆಟ್ ಕಬಳಿಸಿದರು. ಸ್ಪಿನ್ನರ್ ಪೀಯೂಷ್ ಚಾವ್ಲಾ 2 ವಿಕೆಟ್ ಪಡೆದರೆ, ಹರ್ಭಜನ್ ಸಿಂಗ್ ಒಂದು ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಯುವರಾಜ್ ಸಿಂಗ್ ಅವರ ಸ್ಫೋಟಕ 71 ರನ್‌ಗಳ ನೆರವಿನಿಂದ ಇಂಡಿಯಾ ಚಾಂಪಿಯನ್ಸ್ ತಂಡ 196 ರನ್‌ಗಳ ಬೃಹತ್ ಮೊತ್ತ ಕಲೆಹಾಕಿ, ಬಳಿಕ ಸಂಘಟಿತ ಬೌಲಿಂಗ್ ಪ್ರದರ್ಶನದ ಮೂಲಕ ಆಸ್ಟ್ರೇಲಿಯಾ ಚಾಂಪಿಯನ್ಸ್ ತಂಡವನ್ನು 150 ರನ್‌ಗಳಿಗೆ ಆಲೌಟ್ ಮಾಡಿತು. 46 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಇಂಡಿಯಾ ಚಾಂಪಿಯನ್ಸ್ ಗಮನ ಸೆಳೆದಿದ್ದು, ಯುವರಾಜ್ ಸಿಂಗ್ ಅವರ ಬ್ಯಾಟಿಂಗ್ ಅಬ್ಬರ ಮತ್ತೊಮ್ಮೆ ಅಭಿಮಾನಿಗಳಿಗೆ ವಿಶೇಷ ಮನರಂಜನೆ ನೀಡಿದೆ.

Add Zee News as a Preferred Source
TAGS:
Cricket