• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಕೊಹ್ಲಿ, ರೋಹಿತ್, ನಾಯಕ ಶ್ರೇಯಸ್ ಶೂನ್ಯಕ್ಕೆ ಔಟ್; ಕಿವೀಸ್ ಎದುರು ಭಾರತಕ್ಕೆ ಹೀನಾಯ ಸೋಲು!!

ಕೊಹ್ಲಿ, ರೋಹಿತ್, ನಾಯಕ ಶ್ರೇಯಸ್ ಶೂನ್ಯಕ್ಕೆ ಔಟ್; ಕಿವೀಸ್ ಎದುರು ಭಾರತಕ್ಕೆ ಹೀನಾಯ ಸೋಲು!!

ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಮ್ಯಾಟ್ ಹೆನ್ರಿ ಮಾರಕ ಬೌಲಿಂಗ್‌ಗೆ ತತ್ತರಿಸಿದ ಭಾರತ ಕೇವಲ 89 ರನ್‌ಗಳಿಗೆ ಆಲೌಟ್ ಆಗಿ 244 ರನ್‌ಗಳ ಭಾರಿ ಸೋಲು ಅನುಭವಿಸಿತು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾದರೆ, ಹೆನ್ರಿ ಒಟ್ಟು 6 ವಿಕೆಟ್ ಕಬಳಿಸಿ ಭಾರತದ ಸೋಲಿಗೆ ಪ್ರಮುಖ ಕಾರಣರಾದರು.

Written ByPuttaraj K Alur
Published: Nov 13, 2026, 15:47 IST|Updated: Nov 13, 2026, 16:15 IST
joinshare
ಕೊಹ್ಲಿ, ರೋಹಿತ್, ನಾಯಕ ಶ್ರೇಯಸ್ ಶೂನ್ಯಕ್ಕೆ ಔಟ್; ಕಿವೀಸ್ ಎದುರು ಭಾರತಕ್ಕೆ ಹೀನಾಯ ಸೋಲು!!
Image Credit: India vs New Zealand

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

India vs New Zealand: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಅನುಭವಿಸಿದೆ. ವೇಗಿ ಮ್ಯಾಟ್ ಹೆನ್ರಿ ಅವರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಟೀಮ್ ಇಂಡಿಯಾ ಕೇವಲ 89 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ನ್ಯೂಜಿಲೆಂಡ್ ತಂಡ 244 ರನ್‌ಗಳ ಬೃಹತ್ ಅಂತರದ ಗೆಲುವು ದಾಖಲಿಸಿದೆ. ವಿಶೇಷವೆಂದರೆ ಭಾರತದ ಪ್ರಮುಖ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ನಾಯಕ ಶ್ರೇಯಸ್ ಅಯ್ಯರ್ ಖಾತೆ ತೆರೆಯುವ ಮೊದಲೇ ವಿಕೆಟ್ ಒಪ್ಪಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ವಿಲ್ ಯಂಗ್ ಅವರ ಭರ್ಜರಿ ಶತಕದ ನೆರವಿನಿಂದ 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 333 ರನ್ ಗಳಿಸಿತು. 334 ರನ್‌ಗಳ ಕಠಿಣ ಗುರಿಯನ್ನ ಬೆನ್ನಟ್ಟಿದ ಭಾರತ ತಂಡ ನ್ಯೂಜಿಲೆಂಡ್ ಬೌಲರ್‌ಗಳ ಎದುರು ರನ್ ಗಳಿಸಲು ಪರದಾಡಿತು. ಅಂತಿಮವಾಗಿ 89 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಹೀನಾಯ ಸೋಲು ಕಂಡಿತು.

ವಿಲ್ ಯಂಗ್ ಶತಕದ ಅಬ್ಬರ

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕ ಬ್ಯಾಟರ್ ವಿಲ್ ಯಂಗ್ ಆಸರೆಯಾದರು. ಭಾರತೀಯ ಬೌಲರ್‌ಗಳನ್ನ ಸಮರ್ಥವಾಗಿ ಎದುರಿಸಿದ ಅವರು ಆಕರ್ಷಕ ಶತಕ ಸಿಡಿಸಿ ತಂಡದ ಮೊತ್ತವನ್ನ ಹೆಚ್ಚಿಸಿದರು. 108 ಎಸೆತಗಳನ್ನ ಎದುರಿಸಿದ ಯಂಗ್ 125 ರನ್ ಗಳಿಸಿದರು. ಅವರ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ 50 ಓವರ್‌ಗಳ ಅಂತ್ಯಕ್ಕೆ 333 ರನ್‌ಗಳ ದೊಡ್ಡ ಮೊತ್ತ ಕಲೆಹಾಕಿತು. ಭಾರತವು ಗೆಲುವಿಗೆ 334 ರನ್‌ಗಳ ದೊಡ್ಡ ಟಾರ್ಗೆಟ್‌ ಚೇಸ್‌ ಮಾಡ್ಬೇಕಿತ್ತು. ಆದರೆ ಈ ಮೊತ್ತ ಬೆನ್ನಟ್ಟಲು ಕಣಕ್ಕಿಳಿದ ಭಾರತೀಯ ಬ್ಯಾಟರ್‌ಗಳಿಗೆ ಆರಂಭದಿಂದಲೇ ನ್ಯೂಜಿಲೆಂಡ್ ವೇಗಿಗಳ ಸವಾಲು ಎದುರಾಯಿತು.

ಕೊಹ್ಲಿ, ರೋಹಿತ್, ಶ್ರೇಯಸ್‌ಗೆ ಶೂನ್ಯದ ಆಘಾತ

New Zealand win the 4th ODI by 244 runs. We go again for the 5th and final ODI on Sunday with #TeamIndia leading the series 2-1. Scorecard ▶️ https://t.co/5IIzn3UMi2 #NZvIND https://t.co/a9HZSGxfQK

— BCCI (@BCCI) November 13, 2026

ಭಾರತದ ಇನಿಂಗ್ಸ್ ಆರಂಭವಾಗುತ್ತಿದ್ದಂತೆಯೇ ಮ್ಯಾಟ್ ಹೆನ್ರಿ ತಮ್ಮ ಬೌಲಿಂಗ್ ಸಾಮರ್ಥ್ಯ ಪ್ರದರ್ಶಿಸಿದರು. ಭಾರತದ ಪ್ರಮುಖ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರನ್ನ ಶೂನ್ಯಕ್ಕೆ ಔಟ್ ಮಾಡುವ ಮೂಲಕ ತಂಡಕ್ಕೆ ದೊಡ್ಡ ಹೊಡೆತ ನೀಡಿದರು. ಈ ಮೂವರು ಅನುಭವಿ ಬ್ಯಾಟರ್‌ಗಳು ಒಂದೇ ಪಂದ್ಯದಲ್ಲಿ ಖಾತೆ ತೆರೆಯುವ ಮೊದಲೇ ಪೆವಿಲಿಯನ್ ಸೇರಿದ್ದು ಭಾರತದ ಬ್ಯಾಟಿಂಗ್ ವೈಫಲ್ಯವನ್ನ ಮತ್ತಷ್ಟು ಎತ್ತಿತೋರಿಸಿತು. ಆರಂಭಿಕ ಹಂತದಲ್ಲೇ ಪ್ರಮುಖ ವಿಕೆಟ್‌ಗಳನ್ನ ಕಳೆದುಕೊಂಡ ಭಾರತ ತಂಡ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮ್ಯಾಟ್ ಹೆನ್ರಿ ಅವರ ವೇಗ ಮತ್ತು ನಿಖರ ದಾಳಿಗೆ ಭಾರತೀಯ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು.

27 ರನ್ ನೀಡಿ 6 ವಿಕೆಟ್ ಪಡೆದ ಹೆನ್ರಿ

ಭಾರತದ ಬ್ಯಾಟಿಂಗ್ ವಿಭಾಗವನ್ನೇ ಸಂಪೂರ್ಣವಾಗಿ ಕುಸಿಯುವಂತೆ ಮಾಡಿದ ಮ್ಯಾಟ್ ಹೆನ್ರಿ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. 9.4 ಓವರ್‌ಗಳಲ್ಲಿ ಕೇವಲ 27 ರನ್ ನೀಡಿ ಆರು ವಿಕೆಟ್ ಕಬಳಿಸಿದರು. ಎರಡು ಮೇಡನ್ ಓವರ್‌ಗಳನ್ನ ಎಸೆದ ಅವರು ಭಾರತದ ಬ್ಯಾಟರ್‌ಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದರು. ಹೆನ್ರಿ ತಮ್ಮ ಆರು ವಿಕೆಟ್‌ಗಳ ಸಾಧನೆಯ ಮೂಲಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಸೇರಿದಂತೆ ಭಾರತದ ಪ್ರಮುಖ ಆಟಗಾರರನ್ನ ಪೆವಿಲಿಯನ್‌ಗೆ ಕಳುಹಿಸಿದರು. ನಂತರ ಇಶಾನ್ ಕಿಶನ್, ಕುಲದೀಪ್ ಯಾದವ್ ಮತ್ತು ಗುರ್ನೂರ್ ಬ್ರಾರ್ ಅವರ ವಿಕೆಟ್‌ಗಳನ್ನೂ ತಮ್ಮ ಖಾತೆಗೆ ಸೇರಿಸಿಕೊಂಡರು. ಹೆನ್ರಿಗೆ ಉತ್ತಮ ಸಾಥ್ ನೀಡಿದ ಮ್ಯಾಥ್ ಫಿಶ್ನರ್ ಮೂರು ವಿಕೆಟ್ ಪಡೆದರೆ, ಕೈಲಿ ಜೇಮಿಸನ್ ಒಂದು ವಿಕೆಟ್ ಕಬಳಿಸಿದರು. ನ್ಯೂಜಿಲೆಂಡ್ ಬೌಲರ್‌ಗಳ ಸಂಘಟಿತ ಪ್ರದರ್ಶನದ ಮುಂದೆ ಭಾರತದ ಇಡೀ ಬ್ಯಾಟಿಂಗ್ ಪಡೆ 89 ರನ್‌ಗಳಿಗೆ ಸೀಮಿತವಾಯಿತು.

ಏಕದಿನ ಇತಿಹಾಸದಲ್ಲಿ ಭಾರತದ 2ನೇ ದೊಡ್ಡ ಸೋಲು

ನ್ಯೂಜಿಲೆಂಡ್ ವಿರುದ್ಧ 244 ರನ್‌ಗಳ ಅಂತರದಲ್ಲಿ ಸೋಲು ಕಂಡಿರುವ ಭಾರತ ತಂಡ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ತನ್ನ 2ನೇ ಅತಿದೊಡ್ಡ ರನ್‌ಗಳ ಅಂತರದ ಸೋಲನ್ನ ದಾಖಲಿಸಿದೆ. ಇದಕ್ಕೂ ಮೊದಲು 2000ರಲ್ಲಿ ಶ್ರೀಲಂಕಾ ವಿರುದ್ಧ ಭಾರತ 245 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ವಿಲ್ ಯಂಗ್ ಅವರ ಶತಕ ಹಾಗೂ ಮ್ಯಾಟ್ ಹೆನ್ರಿ ಅವರ ಆರು ವಿಕೆಟ್‌ಗಳ ಸಾಧನೆ ನ್ಯೂಜಿಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿವೆ. ಮತ್ತೊಂದೆಡೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ನಾಯಕ ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾಗಿದ್ದು ಭಾರತದ ಪಾಲಿಗೆ ನಿರಾಸೆಯ ಸಂಗತಿಯಾಗಿದೆ.

Add Zee News as a Preferred Source
TAGS:
Cricket
Sports
Kannada News