• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್‌ : ವೆಸ್ಟ್ ಇಂಡೀಸ್‌ಗೆ 223 ರನ್‌ಗಳ ಬೃಹತ್ ಗುರಿ ನೀಡಿದ ಟಿಂ ಇಂಡಿಯಾ

ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್‌ : ವೆಸ್ಟ್ ಇಂಡೀಸ್‌ಗೆ 223 ರನ್‌ಗಳ ಬೃಹತ್ ಗುರಿ ನೀಡಿದ ಟಿಂ ಇಂಡಿಯಾ

ಇಂದೋರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಭಾರತ ತಂಡ 223 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಮಧ್ಯಮ ಕ್ರಮಾಂಕದ ಕುಸಿತದ ನಡುವೆಯೂ ತಂಡ ಈ ದೊಡ್ಡ ಮೊತ್ತ ತಲುಪಿದ್ದು ರೋಚಕ ಸಂಗತಿ.. ಸಂಪೂರ್ಣ ವಿವರ ಇಲ್ಲಿದೆ ನೋಡಿ..

Written ByKrishna NK
Published: Oct 11, 2026, 09:38 PM IST|Updated: Oct 11, 2026, 09:42 PM IST
joinshare
ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್‌ : ವೆಸ್ಟ್ ಇಂಡೀಸ್‌ಗೆ 223 ರನ್‌ಗಳ ಬೃಹತ್ ಗುರಿ ನೀಡಿದ ಟಿಂ ಇಂಡಿಯಾ
Image Credit: abhishek sharma

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ರಿಕ್ಷಾ ತುಳಿದು ಪತ್ನಿಯನ್ನ ಪೊಲೀಸ್‌ ಮಾಡಿದ ಗಂಡನಿಗೆ ಶಾಕ್‌! ಖಾಕಿ ತೊಟ್ಟ ಬಳಿಕ ಕೈಕೊಟ್ಟ ಪತ್ನಿ...

ರಿಕ್ಷಾ ತುಳಿದು ಪತ್ನಿಯನ್ನ ಪೊಲೀಸ್‌ ಮಾಡಿದ ಗಂಡನಿಗೆ ಶಾಕ್‌! ಖಾಕಿ ತೊಟ್ಟ ಬಳಿಕ ಕೈಕೊಟ್ಟ ಪತ್ನಿ...

2

ರಾಯಚೂರು PWD ಕಚೇರಿಯಲ್ಲಿ ಕಪ್ಪು ಗೊಂಬೆ ಪ್ರತ್ಯಕ್ಷ! ವಾಮಾಚಾರದ ಶಂಕೆ, ಇದರ ಹಿಂದಿರುವರ್ಯಾರು?

3

ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್‌ : ವೆಸ್ಟ್ ಇಂಡೀಸ್‌ಗೆ 223 ರನ್‌ಗಳ ಬೃಹತ್ ಗುರಿ ನೀಡಿದ ಟಿಂ ಇಂಡಿಯಾ

4

ಬಿಗ್‌ಬಾಸ್ ಮನೆಯಿಂದ ಸಂಗೀತಾ ಭಟ್ ಔಟ್‌ : ಕೇವಲ 5 ವಾರಗಳ ಆಟಕ್ಕೆ ನಟಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತೆ?

5

ಭಾರತೀಯ ಕ್ರೂಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು : ಐಷಾರಾಮಿ 'ಕಾರ್ಡೆಲಿಯಾ ಸ್ಕೈ' ಲೋಕಾರ್ಪಣೆ.. ವಿಶೇಷತೆ ಏನ್‌ ಗೊತ್ತೆ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

IND vs WI live score updates : ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿದ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 223 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ. ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕ ಹಾಗೂ ಮಧ್ಯಮ ಕ್ರಮಾಂಕದ ಹೋರಾಟದ ಫಲವಾಗಿ ಭಾರತ ತಂಡ ಈ ದೊಡ್ಡ ಮೊತ್ತವನ್ನು ತಲುಪಲು ಸಾಧ್ಯವಾಯಿತು.

ಅಭಿಷೇಕ್ ಶರ್ಮಾ ಅಬ್ಬರ, ಆರಂಭಿಕ ಆಘಾತ
ಕಳೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಸಂಜು ಸ್ಯಾಮ್ಸನ್ (3 ರನ್) ಈ ಬಾರಿ ಬೇಗನೇ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ಆದರೆ, ಮತ್ತೊಬ್ಬ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ವಿಂಡೀಸ್ ಬೌಲರ್‍ಗಳ ಬೆಂಡೆತ್ತಿದರು. ಕೇವಲ 18 ಎಸೆತಗಳಲ್ಲೇ ಅರ್ಧಶತಕ ಪೂರೈಸಿದ ಅವರು, ಒಟ್ಟಾರೆ 30 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳೊಂದಿಗೆ 69 ರನ್ ಸಿಡಿಸಿ ತಂಡಕ್ಕೆ ಭದ್ರವಾದ ಬುನಾದಿ ಹಾಕಿಕೊಟ್ಟರು.

ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ
ಕೇವಲ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿದ್ದ ಭಾರತ ತಂಡವು 250ಕ್ಕೂ ಅಧಿಕ ರನ್ ಗಳಿಸುವ ಸ್ಪಷ್ಟ ಮುನ್ಸೂಚನೆ ನೀಡಿತ್ತು. ಆದರೆ, ಮುಂದಿನ ಕೆಲವೇ ಓವರ್‌ಗಳಲ್ಲಿ ಪೆವಿಲಿಯನ್ ಪರೇಡ್ ನಡೆಯಿತು. 
ಇಶಾನ್ ಕಿಶನ್ (18 ಎಸೆತಗಳಲ್ಲಿ 37 ರನ್, 6 ಬೌಂಡರಿ, 1 ಸಿಕ್ಸರ್)
ನಾಯಕ ಶ್ರೇಯಸ್ ಅಯ್ಯರ್ (1 ರನ್)
ಅಭಿಷೇಕ್ ಶರ್ಮಾ (69 ರನ್)
ನಮನ್ ಧೀರ್ (5 ಎಸೆತಗಳಲ್ಲಿ 10 ರನ್)

ತಿಲಕ್ ವರ್ಮಾ-ಅಕ್ಷರ್ ಪಟೇಲ್ ಆಸರೆ
ಹೀಗೆ ಕೇವಲ ಕೆಲವೇ ಓವರ್‌ಗಳ ಅಂತರದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಭಾರತ ತಂಡವು 10 ಓವರ್‌ಗಳಾಗುವಷ್ಟರಲ್ಲಿ 125 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಜೊತೆಗೂಡಿದ ತಿಲಕ್ ವರ್ಮಾ ಹಾಗೂ ನಿತೀಶ್ ಕುಮಾರ್ ರೆಡ್ಡಿ (21 ರನ್) ತಂಡವನ್ನು ಚೇತರಿಸಿಕೊಳ್ಳುವಂತೆ ಮಾಡಿದರು. 37 ರನ್‌ಗಳ ಜೊತೆಯಾಟದ ಬಳಿಕ ನಿತೀಶ್ ಔಟಾದರು.

ನಂತರ ಬಂದ ತಿಲಕ್ ವರ್ಮಾ (28 ರನ್) ವಿಚಿತ್ರ ರೀತಿಯಲ್ಲಿ ರನ್ ಔಟ್ ಆದರು. ಅಕ್ಷರ್ ಪಟೇಲ್ ಹೊಡೆದ ಚೆಂಡು ಬೌಂಡರಿ ದಾಟಿದೆ ಎಂದು ಭಾವಿಸಿ ತಿಲಕ್ ನಿಧಾನವಾಗಿ ನಡೆದುಕೊಂಡು ಬಂದರು. ಆದರೆ, ಚೆಂಡನ್ನು ಫೀಲ್ಡರ್ ತಡೆದಿದ್ದು ಗೊತ್ತಾಗದೆ, ವಿಂಡೀಸ್ ವಿಕೆಟ್ ಕೀಪರ್ ಶಾಯ್ ಹೋಪ್ ಮತ್ತು ಬೌಲರ್ ಸೇರಿಕೊಂಡು ರನ್ ಔಟ್ ಬಲೆಗೆ ಕೆಡವಿದರು. ಅಕ್ಷರ್ ಪಟೇಲ್ ಕೂಡ 14 ಎಸೆತಗಳಲ್ಲಿ 20 ರನ್ ಗಳಿಸಿ ರನ್ ಔಟ್ ಆದರು. ಅಂತಿಮವಾಗಿ ಅರ್ಷದೀಪ್ ಸಿಂಗ್ (11) ಮತ್ತು ಪ್ರಿನ್ಸ್ ಯಾದವ್ (13) ಉಪಯುಕ್ತ ಆಟವಾಡುವ ಮೂಲಕ ತಂಡದ ಮೊತ್ತವನ್ನು 223ಕ್ಕೆ ತಲುಪಿಸಿದರು.

ವೆಸ್ಟ್ ಇಂಡೀಸ್ ಬೌಲಿಂಗ್ ಪ್ರದರ್ಶನ
ವೆಸ್ಟ್ ಇಂಡೀಸ್ ಪರ ರೋಸ್ಟನ್ ಚೇಸ್ (38ಕ್ಕೆ 2), ಶಮರ್ ಜೋಸೆಫ್ (54ಕ್ಕೆ 2) ಮತ್ತು ಶಮರ್ ಸ್ಪ್ರಿಂಗರ್ (50ಕ್ಕೆ 2) ತಲಾ ಎರಡು ವಿಕೆಟ್ ಪಡೆದು ಯಶಸ್ವಿ ಬೌಲರ್‌ಗಳೆನಿಸಿಕೊಂಡರೆ, ಗುಡಕೇಶ್ ಮೋಟಿ ಮತ್ತು ಕೀಮೋ ಪಾಲ್ ತಲಾ ಒಂದೊಂದು ವಿಕೆಟ್ ಪಡೆದರು.

Add Zee News as a Preferred Source
TAGS:
Cricket