• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /SENA ದೇಶಗಳಲ್ಲಿ ಪಂತ್ ಅಬ್ಬರಕ್ಕೆ ವಿಶ್ವವೇ ಬೆರಗು; ಅಪರೂಪದ ದಾಖಲೆ ಬರೆದ ಭಾರತದ ವಿಕೆಟ್ ಕೀಪರ್!

SENA ದೇಶಗಳಲ್ಲಿ ಪಂತ್ ಅಬ್ಬರಕ್ಕೆ ವಿಶ್ವವೇ ಬೆರಗು; ಅಪರೂಪದ ದಾಖಲೆ ಬರೆದ ಭಾರತದ ವಿಕೆಟ್ ಕೀಪರ್!

ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ 128 ರನ್‌ಗಳ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ನಾಲ್ಕೂ SENA ದೇಶಗಳಲ್ಲಿ ಟೆಸ್ಟ್ ಶತಕ ಗಳಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ವಿಕೆಟ್ ಕೀಪರ್ ಎಂಬ ಗೌರವವೂ ಅವರಿಗೆ ಲಭಿಸಿದೆ.

Written ByPuttaraj K Alur
Published: Nov 22, 2026, 15:36 IST|Updated: Nov 22, 2026, 15:45 IST
joinshare
SENA ದೇಶಗಳಲ್ಲಿ ಪಂತ್ ಅಬ್ಬರಕ್ಕೆ ವಿಶ್ವವೇ ಬೆರಗು; ಅಪರೂಪದ ದಾಖಲೆ ಬರೆದ ಭಾರತದ ವಿಕೆಟ್ ಕೀಪರ್!
Image Credit: Rishabh Pant

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

2

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

3

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

4

ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸ್ಫೋಟಕ ತಿರುವು : ಇಡಿ ಅಧಿಕಾರಿಗಳಿಂದ ಮಹತ್ವದ ಮಾಹಿತಿ ಬಹಿರಂಗ

5

ಕ್ರಿಕೆಟ್ ಬಿಟ್ಟು ರಾಜಕೀಯಕ್ಕೆ ಚಹಲ್ ಎಂಟ್ರಿ.. ಬಿಜೆಪಿ ಸೇರಿದ ಸ್ಪಿನ್ ಮಾಂತ್ರಿಕ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Rishabh Pant Century: ಟೀಮ್ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭರ್ಜರಿ ಶತಕ ಸಿಡಿಸುವ ಮೂಲಕ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಸೇರಿದಂತೆ ನಾಲ್ಕೂ SENA ರಾಷ್ಟ್ರಗಳಲ್ಲಿ ಟೆಸ್ಟ್ ಶತಕ ಗಳಿಸಿದ ಭಾರತದ ಮೊದಲ ವಿಕೆಟ್ ಕೀಪರ್-ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ ಈ ಸಾಧನೆ ಮಾಡಿದ ಏಷ್ಯಾದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.

ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂತ್ ನ್ಯೂಜಿಲೆಂಡ್ ಬೌಲರ್‌ಗಳ ವಿರುದ್ಧ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ಮೂರು ತಿಂಗಳ ಗಾಯದ ವಿರಾಮದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿರುವ ಅವರು, ತಮ್ಮ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. 153 ಎಸೆತಗಳನ್ನ ಎದುರಿಸಿದ ಪಂತ್ 10 ಬೌಂಡರಿ ಮತ್ತು 6 ಸಿಕ್ಸರ್‌ಗಳ ನೆರವಿನಿಂದ 128 ರನ್ ಗಳಿಸಿದರು. 99 ರನ್‌ಗಳಲ್ಲಿದ್ದಾಗ ಗ್ಲೆನ್ ಫಿಲಿಪ್ಸ್ ಬೌಲಿಂಗ್‌ನಲ್ಲಿ ಮುಂದೆ ಬಂದು ಮಿಡ್‌ಆಫ್ ಮೇಲಿಂದ ಸಿಕ್ಸರ್ ಸಿಡಿಸುವ ಮೂಲಕ ಶತಕ ಪೂರೈಸಿದರು.

ವಿಶ್ವದ ಮೂರನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆ

 

Just Rishabh Pant things 😎🤷‍♂️ #TeamIndia | #NZvIND | @RishabhPant17 https://t.co/xhJ5CZHMvZ

— BCCI (@BCCI) November 22, 2026

 ನಾಲ್ಕೂ SENA ದೇಶಗಳಲ್ಲಿ ಟೆಸ್ಟ್ ಶತಕ ಗಳಿಸಿರುವ ವಿಶ್ವದ ಮೂರನೇ ವಿಕೆಟ್ ಕೀಪರ್ ಎಂಬ ಗೌರವವೂ ಪಂತ್‌ಗೆ ಸಂದಿದೆ. ಇದಕ್ಕೂ ಮೊದಲು ಆಸ್ಟ್ರೇಲಿಯಾದ ಆ್ಯಡಂ ಗಿಲ್‌ಕ್ರಿಸ್ಟ್ ಮತ್ತು ಇಂಗ್ಲೆಂಡ್‌ನ ಜಾನಿ ಬೈರ್‌ಸ್ಟೋವ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಪಂತ್ ಕೂಡ ಈ ವಿಶೇಷ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ನಾಲ್ಕೂ SENA ರಾಷ್ಟ್ರಗಳಲ್ಲಿ ಟೆಸ್ಟ್ ಶತಕ ಗಳಿಸಿದ ಆರನೇ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನೂ ಪಂತ್ ನಿರ್ಮಿಸಿದ್ದಾರೆ. ಈ ಹಿಂದೆ ಮೊಹಮ್ಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಈ ಸಾಧನೆ ಮಾಡಿದ್ದರು. ಇದೀಗ ಈ ಗಣ್ಯರ ಸಾಲಿಗೆ ಪಂತ್ ಕೂಡ ಸೇರಿದ್ದಾರೆ.

 

ನಾಲ್ಕು ದೇಶಗಳಲ್ಲಿ ಪಂತ್ ಬಾರಿಸಿದ ಶತಕಗಳ ವಿವರ

ಪಂತ್ ಅವರ SENA ಶತಕಗಳ ಪಯಣ 2018ರಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆ ಆರಂಭವಾಗಿತ್ತು. ಲಂಡನ್‌ನ ದಿ ಓವಲ್ ಮೈದಾನದಲ್ಲಿ 114 ರನ್ ಗಳಿಸಿದ್ದರು. 2019ರಲ್ಲಿ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ 159 ರನ್ ಸಿಡಿಸಿದ್ದರು. 2022ರಲ್ಲಿ ಕೇಪ್‌ಟೌನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಜೇಯ 100 ರನ್ ಗಳಿಸಿದ್ದರು. ಅದೇ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ 146 ರನ್ ಬಾರಿಸಿದ್ದರು. 2025ರಲ್ಲಿ ಲೀಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 134 ಮತ್ತು 118 ರನ್‌ಗಳ ಎರಡು ಶತಕಗಳನ್ನ ದಾಖಲಿಸಿದ್ದರು. ಇದೀಗ 2026ರಲ್ಲಿ ವೆಲ್ಲಿಂಗ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 128 ರನ್ ಗಳಿಸುವ ಮೂಲಕ ನಾಲ್ಕೂ ದೇಶಗಳಲ್ಲಿ ಶತಕ ಬಾರಿಸಿದ ಸಾಧನೆಯನ್ನ ಪೂರ್ಣಗೊಳಿಸಿದ್ದಾರೆ.

ಸಿಕ್ಸರ್‌ಗಳ ದಾಖಲೆಯಲ್ಲೂ ಪಂತ್‌ಗೆ ಎರಡನೇ ಸ್ಥಾನ

ನ್ಯೂಜಿಲೆಂಡ್ ವಿರುದ್ಧದ ಈ ಇನ್ನಿಂಗ್ಸ್‌ನಲ್ಲಿ ಸಿಡಿಸಿದ ಆರು ಸಿಕ್ಸರ್‌ಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಪಂತ್ ಅವರ ಒಟ್ಟು ಸಿಕ್ಸರ್‌ಗಳ ಸಂಖ್ಯೆ 108ಕ್ಕೆ ಏರಿಕೆಯಾಗಿದೆ. ಈ ಮೂಲಕ ನ್ಯೂಜಿಲೆಂಡ್‌ನ ಮಾಜಿ ಆಟಗಾರ ಬ್ರೆಂಡನ್ ಮೆಕಲಮ್ ಅವರ 107 ಸಿಕ್ಸರ್‌ಗಳ ದಾಖಲೆಯನ್ನ ಹಿಂದಿಕ್ಕಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಪಂತ್ ಈಗ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ 138 ಸಿಕ್ಸರ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ವಿಕೆಟ್ ಕೀಪರ್ ಆಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಪಂತ್ ಗಳಿಸಿರುವ ಶತಕಗಳ ಸಂಖ್ಯೆ ಒಂಬತ್ತಕ್ಕೆ ತಲುಪಿದೆ. ಈ ವಿಭಾಗದಲ್ಲಿ ಆ್ಯಡಂ ಗಿಲ್‌ಕ್ರಿಸ್ಟ್ 17 ಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆ್ಯಂಡಿ ಫ್ಲವರ್ 12 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಂತ್ ಮೂರನೇ ಸ್ಥಾನದಲ್ಲಿದ್ದಾರೆ. ಇದಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 3,000 ರನ್‌ಗಳ ಗಡಿ ದಾಟಿರುವ ಪಂತ್, ಈ ಟೂರ್ನಿಯ ಇತಿಹಾಸದಲ್ಲಿ ಅತಿಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್ ಎಂಬ ತಮ್ಮ ದಾಖಲೆಯನ್ನ ಮತ್ತಷ್ಟು ಬಲಪಡಿಸಿಕೊಂಡಿದ್ದಾರೆ.

ಭಾರತಕ್ಕೆ ಬೃಹತ್ ಮುನ್ನಡೆ

 

That will be Stumps on Day 4! #TeamIndia with the important wicket of Henry Nicholls in the final session 🙌 New Zealand trail by 233 runs as a crucial Day 5 beckons ⏳ Scorecard ▶️ https://t.co/SaMcNXtAVG #NZvIND https://t.co/4Re39tYM9r

— BCCI (@BCCI) November 22, 2026

 ಪಂತ್ ಅವರ ಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 720 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತ್ತು. ತಂಡ ಇನ್ನೂ 233 ರನ್‌ಗಳ ಹಿನ್ನಡೆಯಲ್ಲಿತ್ತು. ಸೋಮವಾರ ನಡೆಯಲಿರುವ ಅಂತಿಮ ದಿನದಾಟದಲ್ಲಿ ಭಾರತ ಉಳಿದ ಎಂಟು ವಿಕೆಟ್‌ಗಳನ್ನ ಕಬಳಿಸಿ ಇನ್ನಿಂಗ್ಸ್‌ ಗೆಲುವಿನ ಗುರಿಯನ್ನ ಹೊಂದಿದೆ.

Add Zee News as a Preferred Source
TAGS:
Cricket
Sports
Kannada News