SOCIAL MEDIA

Newsletter

PARTNER SITES
Select Language Select State

ಸತತ ವೈಫಲ್ಯಕ್ಕೆ ಬ್ಯಾಟ್‌ನಲ್ಲೇ ಉತ್ತರ ಕೊಟ್ಟ ಸಂಜು ಸ್ಯಾಮ್ಸನ್: 21 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ!

ಸಂಜು ಸ್ಯಾಮ್ಸನ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದು, ಈ ಇನ್ನಿಂಗ್ಸ್‌ನ ಪ್ರಮುಖ ಆಕರ್ಷಣೆಯಾಗಿದೆ. ಅವರ ಬ್ಯಾಟಿಂಗ್‌ನಲ್ಲಿ ಬೌಂಡರಿ ಹಾಗೂ ಸಿಕ್ಸರ್‌ಗಳ ಸುರಿಮಳೆಯ ಕಂಡುಬಂದಿತು. ಸಂಜು ಕೇವಲ 41 ಎಸೆತಗಳಲ್ಲಿ 82 ರನ್ ಗಳಿಸಿ ಔಟಾದರು. ಈ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನ ಸಿಡಿಸಿದ್ದಾರೆ.

Written By Puttaraj K Alur
Published: Oct 09, 2026, 08:32 PM IST | Updated: Oct 09, 2026, 08:44 PM IST
Image Credit: Sanju Samson Batting
Join

Sanju Samson 21 Ball Fifty: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಸತತ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದ ಸಂಜು, ಈ ಪಂದ್ಯದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ತಮ್ಮ ಸಾಮರ್ಥ್ಯವನ್ನ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ಭಾರತೀಯ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ.

ಆರಂಭದಿಂದಲೇ ಸಂಜು ಸ್ಯಾಮ್ಸನ್ ಅಬ್ಬರ!

ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ 2ನೇ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಭಾರತ ತಂಡ ಮೊದಲು ಬ್ಯಾಟಿಂಗ್ ಆರಂಭಿಸಿತು. ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಇಬ್ಬರೂ ಮೊದಲ ವಿಕೆಟ್‌ಗೆ 42 ರನ್‌ಗಳ ಜೊತೆಯಾಟವಾಡಿದರು. ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರು. ಆದರೆ ಮತ್ತೊಂದು ತುದಿಯಲ್ಲಿ ಸಂಜು ಸ್ಯಾಮ್ಸನ್ ತಮ್ಮ ಆಕ್ರಮಣಕಾರಿ ಆಟ ಮುಂದುವರಿಸಿದರು. ಆರಂಭದಿಂದಲೇ ಬೌಲರ್‌ಗಳ ಮೇಲೆ ಒತ್ತಡ ಹೇರಿದ ಅವರು, ಬೌಂಡರಿ ಮತ್ತು ಸಿಕ್ಸರ್‌ಗಳ ಮೂಲಕ ರನ್‌ಗತಿಯನ್ನ ಹೆಚ್ಚಿಸಿದರು.

21 ಎಸೆತಗಳಲ್ಲಿ ಅರ್ಧಶತಕ

ಸಂಜು ಸ್ಯಾಮ್ಸನ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದು, ಈ ಇನ್ನಿಂಗ್ಸ್‌ನ ಪ್ರಮುಖ ಆಕರ್ಷಣೆಯಾಗಿದೆ. ಅವರ ಬ್ಯಾಟಿಂಗ್‌ನಲ್ಲಿ ಬೌಂಡರಿ ಹಾಗೂ ಸಿಕ್ಸರ್‌ಗಳ ಸುರಿಮಳೆಯ ಕಂಡುಬಂದಿತು. ಸಂಜು ಕೇವಲ 41 ಎಸೆತಗಳಲ್ಲಿ 82 ರನ್ ಗಳಿಸಿ ಔಟಾದರು. ಈ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನ ಸಿಡಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 200.00 ಆಗಿದೆ. ಸಂಜು ಅವರ ಈ ಆಟದಿಂದ ಭಾರತ ತಂಡದ ರನ್‌ಗತಿ ವೇಗ ಪಡೆದುಕೊಂಡಿತು. ಆರಂಭಿಕ ಹಂತದಲ್ಲೇ ದೊಡ್ಡ ಮೊತ್ತದತ್ತ ಸಾಗಲು ತಂಡಕ್ಕೆ ಭದ್ರ ಬುನಾದಿ ದೊರೆಯಿತು.

 

ನಾಲ್ಕು ಇನ್ನಿಂಗ್ಸ್‌ಗಳ ವೈಫಲ್ಯಕ್ಕೆ ತಿರುಗೇಟು

 

ಈ ಪಂದ್ಯಕ್ಕೂ ಮುನ್ನ ಸಂಜು ಸ್ಯಾಮ್ಸನ್ ಅವರ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಕಳೆದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಅವರು ಒಮ್ಮೆ ಮಾತ್ರ ಎರಡಂಕಿಯ ರನ್ ಗಳಿಸಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ 11 ರನ್, ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ 2 ರನ್, ಶ್ರೀಲಂಕಾ ವಿರುದ್ಧದ ಸೆಮಿಫೈನಲ್‌ನಲ್ಲಿ 7 ರನ್ ಹಾಗೂ ಜಪಾನ್ ವಿರುದ್ಧದ ಪಂದ್ಯದಲ್ಲಿ 9 ರನ್ ಗಳಿಸಿದ್ದರು.

ಈ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಸಂಜು ಅವರನ್ನ ತಂಡದಿಂದ ಕೈಬಿಟ್ಟು ವೈಭವ್ ಸೂರ್ಯವಂಶಿಗೆ ಅವಕಾಶ ನೀಡಬೇಕೆಂಬ ಚರ್ಚೆ ನಡೆದಿತ್ತು. ಆದರೆ ನಾಯಕ ಶ್ರೇಯಸ್ ಅಯ್ಯರ್ ತಂಡದ ಸಂಯೋಜನೆಯನ್ನ ಬದಲಿಸದೆ ಸಂಜುಗೆ ಮತ್ತೊಂದು ಅವಕಾಶ ನೀಡಿದರು. ಆ ಅವಕಾಶವನ್ನ ಸದುಪಯೋಗಪಡಿಸಿಕೊಂಡ ಸಂಜು, ತಮ್ಮ ಬ್ಯಾಟಿಂಗ್ ಮೂಲಕ ಉತ್ತರ ನೀಡಿದ್ದಾರೆ.

ಭಾರತದ ಬೃಹತ್ ಮೊತ್ತದತ್ತ ಮುನ್ನಡೆ

ಲಭ್ಯವಿರುವ ಸ್ಕೋರ್‌ಕಾರ್ಡ್ ಪ್ರಕಾರ, ಭಾರತ 18 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 215 ರನ್‌ಗಳ ಬೃಹತ್‌ ಮೊತ್ತ ಗಳಿಸಿದೆ. ಸಂಜು ಸ್ಯಾಮ್ಸನ್ 82 ರನ್‌ಗಳೊಂದಿಗೆ ತಂಡದ ಪರ ಪ್ರಮುಖ ಕೊಡುಗೆ ನೀಡಿದ್ದಾರೆ. ಇಶಾನ್ ಕಿಶನ್ 22 ಎಸೆತಗಳಲ್ಲಿ 43 ರನ್ ಗಳಿಸಿ ಉತ್ತಮ ಬೆಂಬಲ ನೀಡಿದರು. ಶ್ರೇಯಸ್ ಅಯ್ಯರ್ 14 ಎಸೆತಗಳಲ್ಲಿ 34 ರನ್ ಗಳಿಸಿದರೆ, ತಿಲಕ್ ವರ್ಮಾ 11 ಎಸೆತಗಳಲ್ಲಿ 23 ರನ್ ಗಳಿಸಿದ್ದರು.

3 ವಿಕೆಟ್ ಪಡೆದು ಗಮನ ಸೆಳೆದ ರೋಸ್ಟನ್ ಚೇಸ್!

ಒಟ್ನಲ್ಲಿ ಸತತ ವೈಫಲ್ಯಗಳ ಬಳಿಕ ಸಂಜು ಸ್ಯಾಮ್ಸನ್ ಆಡಿದ ಈ ಸ್ಫೋಟಕ ಇನ್ನಿಂಗ್ಸ್ ಅವರ ಆತ್ಮವಿಶ್ವಾಸಕ್ಕೆ ಮಹತ್ವದ ಉತ್ತೇಜನ ನೀಡಿದೆ. 21 ಎಸೆತಗಳಲ್ಲಿ ಅರ್ಧಶತಕ ಹಾಗೂ 82 ರನ್‌ಗಳ ಕೊಡುಗೆಯ ಮೂಲಕ ಸಂಜು ತಮ್ಮ ಸಾಮರ್ಥ್ಯವನ್ನ ತೋರಿಸಿದ್ದಾರೆ. ಅವರ ಈ ಪ್ರದರ್ಶನ ಮುಂದಿನ ಪಂದ್ಯಗಳಲ್ಲೂ ಮುಂದುವರಿಯುತ್ತದೆಯೇ ಎಂಬುದು ಅಭಿಮಾನಿಗಳ ಕುತೂಹಲವಾಗಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES