• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಈ ಖ್ಯಾತ ನಟನ ಜೊತೆ ಸಾರಾ ತೆಂಡೂಲ್ಕರ್ ಮದುವೆ ಫಿಕ್ಸ್‌!

ಈ ಖ್ಯಾತ ನಟನ ಜೊತೆ ಸಾರಾ ತೆಂಡೂಲ್ಕರ್ ಮದುವೆ ಫಿಕ್ಸ್‌!

ಬಾಲಿವುಡ್ ನಟ ಸನ್ನಿ ಡಿಯೋಲ್ ಅವರ ಪುತ್ರ ರಾಜ್‌ವೀರ್ ಡಿಯೋಲ್ ಜೊತೆ ಸಾರಾ ಅವರ ಹೆಸರು ತಳುಕು ಹಾಕಿಕೊಂಡಿದ್ದು, ಇಬ್ಬರೂ 2027ರಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Written ByChetana Devarmani
Published: Nov 24, 2026, 16:31 IST|Updated: Nov 24, 2026, 16:32 IST
joinshare
ಈ ಖ್ಯಾತ ನಟನ ಜೊತೆ ಸಾರಾ ತೆಂಡೂಲ್ಕರ್ ಮದುವೆ ಫಿಕ್ಸ್‌!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಖ್ಯಾತ ನಟನ ಜೊತೆ ಸಾರಾ ತೆಂಡೂಲ್ಕರ್ ಮದುವೆ ಫಿಕ್ಸ್‌!

ಈ ಖ್ಯಾತ ನಟನ ಜೊತೆ ಸಾರಾ ತೆಂಡೂಲ್ಕರ್ ಮದುವೆ ಫಿಕ್ಸ್‌!

2

ನಟ ದರ್ಶನ್‌ಗೆ ಸಿಗಲಿದೆಯಾ ಡಬಲ್ ರಿಲೀಫ್? ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗಳ ಯೂಟರ್ನ್, ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಲು ಅರ್ಜಿ!

3

₹20 ಕೋಟಿ ಬೆಂಗಳೂರು ಹಬ್ಬಕ್ಕೆ ಇದೆ ಹಣ.. ಆಶಾ ಕಾರ್ಯಕರ್ತೆಯರ ಕಣ್ಣೀರಿಗೆ ಬೆಲೆಯಿಲ್ಲವೇ? ಡಿಕೆಶಿಗೆ ಡಾ. ಮುಖ್ಯಮಂತ್ರಿ ಚಂದ್ರು ತರಾಟೆ!

4

ಕಿರುಚಿತ್ರಗಳ ಸಂಭ್ರಮಕ್ಕೆ ಸಾಕ್ಷಿಯಾದ ‘ಸಿನಿಮಿನಿ’ ಎರಡನೇ ಆವೃತ್ತಿಯ ಕಿರುಚಿತ್ರೋತ್ಸವ

5

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ರಾಕೇಶ್ ಶೆಟ್ಟಿ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Sara Tendulkar marriage: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಆಗಾಗ್ಗೆ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ಅವರ ಮದುವೆ ಕುರಿತ ವದಂತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಾಲಿವುಡ್ ನಟ ಸನ್ನಿ ಡಿಯೋಲ್ ಅವರ ಪುತ್ರ ರಾಜ್‌ವೀರ್ ಡಿಯೋಲ್ ಜೊತೆ ಸಾರಾ ಅವರ ಹೆಸರು ತಳುಕು ಹಾಕಿಕೊಂಡಿದ್ದು, ಇಬ್ಬರೂ 2027ರಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವದಂತಿಗಳ ಬೆನ್ನಲ್ಲೇ ಇದೀಗ ಸಾರಾ ಅವರ ಆಪ್ತ ಮೂಲಗಳು ಸ್ಪಷ್ಟನೆ ನೀಡಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಸಾರಾ ತೆಂಡೂಲ್ಕರ್ ಮತ್ತು ರಾಜ್‌ವೀರ್ ಡಿಯೋಲ್ ಮದುವೆಯಾಗಲಿದ್ದಾರೆ ಎಂಬ ಪೋಸ್ಟ್‌ಗಳು ವೈರಲ್ ಆಗಿದ್ದವು. ಅಷ್ಟೇ ಅಲ್ಲದೆ, ರಾಜ್‌ವೀರ್ ಸಾರಾ ಅವರಿಗೆ ದುಬಾರಿ ಉಡುಗೊರೆಗಳನ್ನು ಕಳುಹಿಸುತ್ತಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಇದರಿಂದ ಇಬ್ಬರ ನಡುವೆ ಪ್ರೇಮ ಸಂಬಂಧವಿದೆಯೇ ಎಂಬ ಚರ್ಚೆ ಆರಂಭವಾಗಿತ್ತು.

ಆದರೆ ಈ ಸುದ್ದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸಾರಾ ಅವರ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ. ಸಾರಾ ಸದ್ಯ ಸಿಂಗಲ್ ಆಗಿದ್ದು, ತಮ್ಮ ವೃತ್ತಿ ಮತ್ತು ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಮದುವೆ ಕುರಿತ ವದಂತಿಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ಆಪ್ತರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಸಾರಾ ಮತ್ತು ರಾಜ್‌ವೀರ್ ಒಬ್ಬರನ್ನೊಬ್ಬರು ಭೇಟಿಯೂ ಆಗಿಲ್ಲ ಎಂದು ಹೇಳಲಾಗಿದೆ.

ಸಾರಾ ಮತ್ತು ರಾಜ್‌ವೀರ್ ಇಬ್ಬರೂ ದೇಶದ ಪ್ರಸಿದ್ಧ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಈ ಸುದ್ದಿ ಹೆಚ್ಚು ಗಮನ ಸೆಳೆದಿದೆ. ಸಾರಾ ಅವರು ಸಚಿನ್ ತೆಂಡೂಲ್ಕರ್ ಮತ್ತು ಅಂಜಲಿ ತೆಂಡೂಲ್ಕರ್ ದಂಪತಿಯ ಹಿರಿಯ ಪುತ್ರಿ. ಮತ್ತೊಂದೆಡೆ, ರಾಜ್‌ವೀರ್ ಡಿಯೋಲ್ ಅವರು ಬಾಲಿವುಡ್ ನಟ ಸನ್ನಿ ಡಿಯೋಲ್ ಅವರ ಪುತ್ರ ಹಾಗೂ ಹಿರಿಯ ನಟ ಧರ್ಮೇಂದ್ರ ಅವರ ಮೊಮ್ಮಗ. ಎರಡೂ ಕುಟುಂಬಗಳು ಚಿತ್ರರಂಗ ಮತ್ತು ಕ್ರೀಡಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿವೆ. ಹೀಗಾಗಿ ಇವರಿಬ್ಬರ ಮದುವೆ ಕುರಿತ ಸುದ್ದಿಗಳು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿವೆ. ಆದರೆ ಈ ಸಂಬಂಧವಾಗಿ ಎರಡೂ ಕುಟುಂಬಗಳಿಂದ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ.

ಸಾರಾ ತೆಂಡೂಲ್ಕರ್ ಅವರ ವೈಯಕ್ತಿಕ ಜೀವನದ ಬಗ್ಗೆ ಇಂತಹ ಸುದ್ದಿಗಳು ಹರಿದಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಕ್ರಿಕೆಟಿಗ ಶುಭಮನ್ ಗಿಲ್ ಜೊತೆ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಆದರೆ ಈ ಕುರಿತು ಸಾರಾ ಯಾವುದೇ ಬಹಿರಂಗ ಪ್ರತಿಕ್ರಿಯೆ ನೀಡಿರಲಿಲ್ಲ. ವೈಯಕ್ತಿಕ ಜೀವನದ ವಿಚಾರಗಳನ್ನು ಖಾಸಗಿಯಾಗಿಯೇ ಇರಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

ಒಟ್ಟಿನಲ್ಲಿ, ಸಾರಾ ತೆಂಡೂಲ್ಕರ್ ಮತ್ತು ರಾಜ್‌ವೀರ್ ಡಿಯೋಲ್ 2027ರಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸದ್ಯಕ್ಕೆ ಕೇವಲ ವದಂತಿಯಾಗಿದೆ. ಇಬ್ಬರ ನಡುವೆ ಪ್ರೇಮ ಸಂಬಂಧವಿದೆ ಅಥವಾ ಮದುವೆ ನಿಶ್ಚಯವಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಸತ್ಯವೆಂದು ನಂಬುವ ಮುನ್ನ ಅಧಿಕೃತ ಮಾಹಿತಿಗಾಗಿ ಕಾಯುವುದು ಉತ್ತಮ.

Add Zee News as a Preferred Source
TAGS:
Sports