• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಇಂಗ್ಲೆಂಡ್‌ ಸರಣಿ ಸೋಲಿನ ಬೆನ್ನಲ್ಲೇ ಪಾಕ್‌ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ! ಶೋಯೆಬ್‌ ಅಖ್ತರ್‌ಗೆ PCBಯಲ್ಲಿ ದೊಡ್ಡ ಹುದ್ದೆ?

ಇಂಗ್ಲೆಂಡ್‌ ಸರಣಿ ಸೋಲಿನ ಬೆನ್ನಲ್ಲೇ ಪಾಕ್‌ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ! ಶೋಯೆಬ್‌ ಅಖ್ತರ್‌ಗೆ PCBಯಲ್ಲಿ ದೊಡ್ಡ ಹುದ್ದೆ?

ಇಂಗ್ಲೆಂಡ್‌ ವಿರುದ್ಧ ಪಾಕಿಸ್ತಾನ 0-3 ಅಂತರದಲ್ಲಿ ಟೆಸ್ಟ್‌ ಸರಣಿ ಸೋತ ಬೆನ್ನಲ್ಲೇ PCBಯಲ್ಲಿ ಮಹತ್ವದ ಬದಲಾವಣೆಗಳ ಚರ್ಚೆ ಶುರುವಾಗಿದೆ. ಮಾಜಿ ವೇಗಿ ಶೋಯೆಬ್‌ ಅಖ್ತರ್‌ PCB ಅಧ್ಯಕ್ಷ ಮೊಹ್ಸಿನ್‌ ನಖ್ವಿಯನ್ನ ಭೇಟಿಯಾಗಿ ಕ್ರಿಕೆಟ್‌ ಸುಧಾರಣೆ ಕುರಿತು ಮಾತುಕತೆ ನಡೆಸಿದ್ದಾರೆ. ಅಖ್ತರ್‌ಗೆ ಪ್ರಮುಖ ಜವಾಬ್ದಾರಿ ನೀಡುವ ಸಾಧ್ಯತೆಯಿದ್ದರೂ, ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ.

Written ByPuttaraj K Alur
Published: Sep 29, 2026, 04:53 PM IST|Updated: Sep 29, 2026, 05:04 PM IST
joinshare
ಇಂಗ್ಲೆಂಡ್‌ ಸರಣಿ ಸೋಲಿನ ಬೆನ್ನಲ್ಲೇ ಪಾಕ್‌ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ! ಶೋಯೆಬ್‌ ಅಖ್ತರ್‌ಗೆ PCBಯಲ್ಲಿ ದೊಡ್ಡ ಹುದ್ದೆ?
Image Credit: Shoaib Akhtar

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Shoaib Akhtar PCB Role: ಇಂಗ್ಲೆಂಡ್‌ ಪ್ರವಾಸದಲ್ಲಿ ಪಾಕಿಸ್ತಾನ ಟೆಸ್ಟ್‌ ತಂಡ 0-3 ಅಂತರದಲ್ಲಿ ಸರಣಿ ಸೋಲು ಕಂಡ ಬೆನ್ನಲ್ಲೇ ಕ್ರಿಕೆಟ್‌ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಮಂಡಳಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶೋಯೆಬ್‌ ಅಖ್ತರ್‌ ಮತ್ತು PCB ಅಧ್ಯಕ್ಷ ಮೊಹ್ಸಿನ್‌ ನಖ್ವಿ ನಡುವೆ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ. ಅಖ್ತರ್‌ಗೆ ಯಾವ ಹುದ್ದೆ ಸಿಗಲಿದೆ ಎಂಬುದು ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಆದರೆ ಪಾಕಿಸ್ತಾನ ಕ್ರಿಕೆಟ್‌ನ ಭವಿಷ್ಯದ ಯೋಜನೆಗಳು, ತಂಡದ ಪ್ರದರ್ಶನ ಸುಧಾರಣೆ ಮತ್ತು ಆಡಳಿತ ವ್ಯವಸ್ಥೆಯ ಬದಲಾವಣೆಗಳ ಕುರಿತು ಚರ್ಚೆ ನಡೆದಿದೆ ಎಂದು ವರದಿಯಾಗಿದೆ.

ಮೊಹ್ಸಿನ್‌ ನಖ್ವಿ ಜೊತೆ ಅಖ್ತರ್‌ ಮಹತ್ವದ ಮಾತುಕತೆ

ಪಾಕಿಸ್ತಾನದ ಮಾಜಿ ವೇಗದ ಬೌಲರ್‌ ಶೋಯೆಬ್‌ ಅಖ್ತರ್‌ ಇಸ್ಲಾಮಾಬಾದ್‌ನಲ್ಲಿ ನೆಲೆಸಿದ್ದಾರೆ. ಕಳೆದ ವಾರ ಅವರು PCB ಅಧ್ಯಕ್ಷ ಮೊಹ್ಸಿನ್‌ ನಖ್ವಿ ಅವರನ್ನ ಭೇಟಿಯಾಗಿ ಪಾಕಿಸ್ತಾನ ಕ್ರಿಕೆಟ್‌ನ ಪ್ರಸ್ತುತ ಪರಿಸ್ಥಿತಿ ಹಾಗೂ ತಂಡವನ್ನ ಮುನ್ನಡೆಸುವ ಹೊಸ ಮಾರ್ಗಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ ಎಂದು ಮಂಡಳಿಗೆ ನಿಕಟವಾಗಿರುವ ಮೂಲವೊಂದು ತಿಳಿಸಿರುವುದಾಗಿ ವರದಿಯಾಗಿದೆ.

ಕೆಲವು ವಾರಗಳ ಹಿಂದೆ ಅಖ್ತರ್‌ ಅವರ ಹಿರಿಯ ಸಹೋದರ ನಿಧನರಾಗಿದ್ದರು. ಈ ಸಂದರ್ಭದಲ್ಲಿ ಮೊಹ್ಸಿನ್‌ ನಖ್ವಿ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅವರಿಗೆ ಬೆಂಬಲ ನೀಡಿದ್ದರು ಎನ್ನಲಾಗಿದೆ. ಈ ನಡೆ ಅಖ್ತರ್‌ ಅವರ ಮೇಲೆ ಪ್ರಭಾವ ಬೀರಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿಂದೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಹಾಗೂ ತಂಡದ ಕಾರ್ಯವೈಖರಿಯನ್ನ ಅಖ್ತರ್‌ ಬಹಿರಂಗವಾಗಿ ಟೀಕಿಸುತ್ತಿದ್ದರು. ಇದೀಗ ಮಂಡಳಿಯ ಅಧ್ಯಕ್ಷರೊಂದಿಗೆ ಉತ್ತಮ ಸಂಬಂಧ ಬೆಳೆದಿರುವುದು ಹೊಸ ಜವಾಬ್ದಾರಿಯ ಸಾಧ್ಯತೆ ಹೆಚ್ಚಿಸಿದೆ ಎಂದು ವರದಿಗಳು ತಿಳಿಸಿವೆ.

ನಖ್ವಿ ಅವರು ಪಾಕಿಸ್ತಾನ ಕ್ರಿಕೆಟ್‌ನ ಭವಿಷ್ಯದ ಯೋಜನೆಗಳನ್ನ ಅಖ್ತರ್‌ ಜೊತೆ ಹಂಚಿಕೊಂಡಿದ್ದು, ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (NCA) ಹಾಗೂ ತಂಡದ ತರಬೇತಿ ಶಿಬಿರಗಳಿಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಅಖ್ತರ್‌ ಕೂಡ ಮಂಡಳಿಯ ಅಧ್ಯಕ್ಷರ ಮುಂದೆ ತಮ್ಮದೇ ಆದ ಆಲೋಚನೆಗಳು ಮತ್ತು ಕೆಲವು ಷರತ್ತುಗಳನ್ನ ಮುಂದಿಟ್ಟಿದ್ದಾರೆ. ಪಾಕಿಸ್ತಾನ ಕ್ರಿಕೆಟ್‌ ಅನ್ನ ಹೇಗೆ ಮುಂದಕ್ಕೆ ಕೊಂಡೊಯ್ಯಬಹುದು ಎಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನ ಅವರು ಹಂಚಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ವಿದೇಶಿ ಕೋಚ್‌ಗಳು, ಸಲಹೆಗಾರರ ನೇಮಕಕ್ಕೂ ಚಿಂತನೆ

ಶೋಯೆಬ್‌ ಅಖ್ತರ್‌ ಮಾತ್ರವಲ್ಲದೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ತಂಡದ ಆಡಳಿತ ಮತ್ತು ತರಬೇತಿ ವ್ಯವಸ್ಥೆಯಲ್ಲೂ ಹಲವು ಬದಲಾವಣೆಗಳನ್ನ ತರಲು ಯೋಜಿಸುತ್ತಿದೆ. ಹಿರಿಯ ತಂಡದ ಫೀಲ್ಡಿಂಗ್‌ ಕೋಚ್‌ ಶೇನ್‌ ಮೆಕ್‌ಡರ್ಮಾಟ್‌ ಹಾಗೂ ಬ್ಯಾಟಿಂಗ್‌ ಕೋಚ್‌ ಆಶ್ಲೆ ನಾಫ್ಕೆ ಅವರು ಹಠಾತ್ತನೆ ತಮ್ಮ ಹುದ್ದೆಗಳಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ವಿದೇಶಿ ಕೋಚ್‌ಗಳು ಮತ್ತು ಸಲಹೆಗಾರರನ್ನ ನೇಮಿಸುವ ಬಗ್ಗೆಯೂ PCB ಚಿಂತನೆ ನಡೆಸುತ್ತಿದೆ.

ಇದರ ಜೊತೆಗೆ ಪಾಕಿಸ್ತಾನದ ಮಹಿಳಾ ಕ್ರಿಕೆಟ್‌ ತಂಡಕ್ಕೆ ದೀರ್ಘಾವಧಿಯ ಪೂರ್ಣಾವಧಿ ಮುಖ್ಯ ಕೋಚ್‌ ನೇಮಕ ಮಾಡುವ ಯೋಜನೆಯೂ ಮಂಡಳಿಯ ಮುಂದಿದೆ. ಮಹಿಳಾ ತಂಡದ ಪ್ರದರ್ಶನದಲ್ಲೂ ಸ್ಥಿರತೆ ಕಾಣದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಮುಂದಾಗಿರುವುದಾಗಿ ವರದಿಯಾಗಿದೆ. ಪುರುಷರ ರಾಷ್ಟ್ರೀಯ ತಂಡ, ಮಹಿಳಾ ತಂಡ, ಶಾಹೀನ್ಸ್‌ ಹಾಗೂ ಕಿರಿಯರ ತಂಡಗಳ ಪ್ರದರ್ಶನ ಸುಧಾರಿಸಬೇಕು ಎಂದು PCB ಅಧ್ಯಕ್ಷರು ನಿರೀಕ್ಷಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಮಂಡಳಿಯ ಕ್ರಿಕೆಟ್‌ ವಿಭಾಗದಲ್ಲಿ ಹಲವು ಮಹತ್ವದ ಬದಲಾವಣೆಗಳು ನಡೆಯುವ ಸಾಧ್ಯತೆಯಿದೆ.

ಇಂಗ್ಲೆಂಡ್‌ನಲ್ಲಿ ಐತಿಹಾಸಿಕ ಸರಣಿ ಸೋಲು

ಪಾಕಿಸ್ತಾನ ತಂಡ ಇಂಗ್ಲೆಂಡ್‌ ಪ್ರವಾಸದಲ್ಲಿ ಅನುಭವಿಸಿದ ಹೀನಾಯ ಸೋಲು ಮಂಡಳಿಯ ಪುನರ್‌ರಚನೆಗೆ ಪ್ರಮುಖ ಕಾರಣವಾಗಿದೆ. ಇಂಗ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪಾಕಿಸ್ತಾನ 0-3 ಅಂತರದಲ್ಲಿ ಸೋಲು ಕಂಡಿದೆ. ಇದು ಇಂಗ್ಲೆಂಡ್‌ ನೆಲದಲ್ಲಿ ಪಾಕಿಸ್ತಾನ ಅನುಭವಿಸಿದ ಮೊದಲ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದೆ.

ಈ ಸೋಲಿನ ಬಳಿಕ ತಂಡದ ಕೋಚಿಂಗ್‌ ವ್ಯವಸ್ಥೆ, ಆಟಗಾರರ ಆಯ್ಕೆ ಮತ್ತು ಕ್ರಿಕೆಟ್‌ ಆಡಳಿತದ ಕಾರ್ಯವೈಖರಿ ಕುರಿತು ಹಲವು ಪ್ರಶ್ನೆಗಳು ಎದುರಾಗಿವೆ. ಇದೀಗ ಶೋಯೆಬ್‌ ಅಖ್ತರ್‌ ಅವರಿಗೆ ಮಂಡಳಿಯಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಸಾಧ್ಯತೆಯು ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ಬೆಳವಣಿಗೆಯಾಗಿದೆ. 

ಆದರೆ ಅಖ್ತರ್‌ ಅವರ ನೇಮಕಾತಿ, ಹುದ್ದೆಯ ಹೆಸರು ಹಾಗೂ ಜವಾಬ್ದಾರಿಗಳ ಕುರಿತು PCB ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಮಂಡಳಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಮೇಲೆ ಪಾಕಿಸ್ತಾನ ಕ್ರಿಕೆಟ್‌ನ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.

Add Zee News as a Preferred Source
TAGS:
Cricket
Kannada News