• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ವೈಭವ್ ಸೂರ್ಯವಂಶಿಗೆ ಓಪನಿಂಗ್ ಕೊಡಬೇಕಿತ್ತಾ? 3ನೇ ಕ್ರಮಾಂಕದಲ್ಲಿ ಆಡಿಸಿ ಮಾಡಿದ ತಪ್ಪೇನು? ಮತ್ತೊಂದು ಅವಕಾಶ ಸಿಗುತ್ತಾ?

ವೈಭವ್ ಸೂರ್ಯವಂಶಿಗೆ ಓಪನಿಂಗ್ ಕೊಡಬೇಕಿತ್ತಾ? 3ನೇ ಕ್ರಮಾಂಕದಲ್ಲಿ ಆಡಿಸಿ ಮಾಡಿದ ತಪ್ಪೇನು? ಮತ್ತೊಂದು ಅವಕಾಶ ಸಿಗುತ್ತಾ?

ಟೀಂ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ, ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 4 ರನ್ ಗಳಿಸಿ ಔಟಾದರು. ಇಶಾನ್ ಕಿಶನ್ ಗಾಯದಿಂದ ಹೊರಗುಳಿದಿದ್ದರಿಂದ ಆರು ಪಂದ್ಯಗಳ ಬಳಿಕ ವೈಭವ್‌ಗೆ ಅವಕಾಶ ಸಿಕ್ಕಿತ್ತು. ಇದೀಗ ಇಶಾನ್ ಮುಂದಿನ ಪಂದ್ಯಕ್ಕೂ ಅಲಭ್ಯರಾದರೆ ವೈಭವ್‌ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ. ಆದರೆ ಅವರನ್ನ ಆರಂಭಿಕ ಆಟಗಾರನಾಗಿ ಆಡಿಸುತ್ತಾರಾ ಅಥವಾ ಮೂರನೇ ಕ್ರಮಾಂಕದಲ್ಲೇ ಮುಂದುವರಿಸುತ್ತಾರಾ ಎಂಬ ಕುತೂಹಲ ಮೂಡಿದೆ.

Written ByPuttaraj K Alur
Published: Oct 24, 2026, 07:34 PM IST|Updated: Oct 24, 2026, 07:42 PM IST
joinshare
ವೈಭವ್ ಸೂರ್ಯವಂಶಿಗೆ ಓಪನಿಂಗ್ ಕೊಡಬೇಕಿತ್ತಾ? 3ನೇ ಕ್ರಮಾಂಕದಲ್ಲಿ ಆಡಿಸಿ ಮಾಡಿದ ತಪ್ಪೇನು? ಮತ್ತೊಂದು ಅವಕಾಶ ಸಿಗುತ್ತಾ?
Image Credit: Vaibhav Suryavanshi

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
100 ಕೋಟಿ ರೂಪಾಯಿ ಖರ್ಚು ಮಾಡಿ ಬೃಹತ್ ಮನೆ ಕಟ್ಟಿದ ಸ್ಟಾರ್ ಹಾಸ್ಯನಟ

100 ಕೋಟಿ ರೂಪಾಯಿ ಖರ್ಚು ಮಾಡಿ ಬೃಹತ್ ಮನೆ ಕಟ್ಟಿದ ಸ್ಟಾರ್ ಹಾಸ್ಯನಟ

2

ಬಿಜೆಪಿಯಲ್ಲೂ ಇದೆ ಸಿಡಿ ಫ್ಯಾಕ್ಟರಿ, ಶೀಘ್ರದಲ್ಲೇ ಸ್ಫೋಟವಾಗಲಿದೆ! ರಾಜಕೀಯ ಬ್ಲ್ಯಾಕ್‌ಮೇಲ್ ಕಥೆ ಬಿಚ್ಚಿಟ್ಟ ಯತ್ನಾಳ್

3

ಸ್ಮಾಶನದಲ್ಲಿನ ಹೆಣಕ್ಕೂ ರಕ್ಷಣೆ ಇಲ್ಲ : ಬೆಚ್ಚಿ ಬೀಳಿಸುತ್ತೆ ಸಮಾಧಿ ಅಗೆದು ಈ ಖದೀಮರು ಮಾಡಿದ ಕೃತ್ಯ

4

ಅಪರೂಪದ ವೈರಸ್ ತಗುಲಿ ವ್ಯಕ್ತಿ ಸಾವು.. ಶಮೊಂಡಾ ವೈರಸ್ ಎಂದರೇನು?

5

Chanakya Niti: ನಿಮ್ಮ ಕುಟುಂಬದವರಿಗೂ ಈ 5 ವಿಷಯಗಳನ್ನ ಹೇಳಬೇಡಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Vaibhav Suryavanshi: ಟೀಂ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ ಇದೀಗ ಕ್ರಿಕೆಟ್ ವಲಯದಲ್ಲಿ ಚರ್ಚೆಯ ಕೇಂದ್ರವಾಗಿದ್ದಾರೆ. ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಳಿಕ ಭಾರತ ತಂಡಕ್ಕೆ ಆಯ್ಕೆಯಾಗಿದ್ದ ವೈಭವ್‌ಗೆ, ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಬೇಕು ಎಂಬ ಬೇಡಿಕೆ ಅಭಿಮಾನಿಗಳಿಂದ ಕೇಳಿಬಂದಿತ್ತು. ಏಷ್ಯನ್ ಗೇಮ್ಸ್‌ನಲ್ಲೂ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಈ ಯುವ ಆಟಗಾರನಿಗೆ ಸತತ ಆರು ಪಂದ್ಯಗಳಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಎರಡನೇ ಟಿ20 ಪಂದ್ಯದಲ್ಲಿ ಅವಕಾಶ ಪಡೆದರೂ, ಕೇವಲ ನಾಲ್ಕು ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೈಭವ್

ಭಾರತ vs ನ್ಯೂಜಿಲೆಂಡ್ ನಡುವೆ ಕ್ರೈಸ್ಟ್‌ಚರ್ಚ್‌ನ ಹೆಗ್ಲಿ ಓವಲ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿತ್ತು. ಇಶಾನ್ ಕಿಶನ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದರಿಂದ ವೈಭವ್‌ಗೆ ಈ ಅವಕಾಶ ಲಭಿಸಿತ್ತು. ಆದರೆ ವೈಭವ್‌ರನ್ನ ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವ ಬದಲು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಯಿತು. 

ನ್ಯೂಜಿಲೆಂಡ್ ನೀಡಿದ್ದ 181 ರನ್‌ಗಳ ಗುರಿಯನ್ನ ಬೆನ್ನಟ್ಟುತ್ತಿದ್ದ ಭಾರತ ತಂಡದ ಪರ ವೈಭವ್ ಐದನೇ ಓವರ್‌ನಲ್ಲಿ ಬ್ಯಾಟಿಂಗ್‌ಗೆ ಬಂದರು. ಆರಂಭದಿಂದಲೇ ರನ್ ಗಳಿಸಲು ಪರದಾಡಿದ ವೈಭವ್‌ಗೆ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಅವರು ಎದುರಿಸಿದ ಎಂಟು ಎಸೆತಗಳಲ್ಲಿ ಕೇವಲ ನಾಲ್ಕು ರನ್ ಗಳಿಸಿ ನಿರ್ಗಮಿಸಿದರು. ಹೀಗಾಗಿ ಅವರಿಗೆ ನೀಡಿದ ಅವಕಾಶ ನಿರೀಕ್ಷಿತ ಫಲ ನೀಡಲಿಲ್ಲ.

ಕ್ಯಾಚ್ ಕೈಚೆಲ್ಲಿದ ಫೀಲ್ಡರ್, ಸದುಪಯೋಗಪಡಿಸಿಕೊಳ್ಳದ ವೈಭವ್

ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ನ್ಯೂಜಿಲೆಂಡ್ ತಂಡದ ಆಫ್ ಸ್ಪಿನ್ನರ್ ಮೈಕೆಲ್ ಬ್ರೇಸ್‌ವೆಲ್ ಬೌಲಿಂಗ್‌ನಲ್ಲಿ ಕ್ಯಾಚ್ ನೀಡಿದ್ದರು. ಆದರೆ ಫೀಲ್ಡರ್ ಆ ಕ್ಯಾಚ್ ಕೈಚೆಲ್ಲಿದ್ದರಿಂದ ವೈಭವ್‌ಗೆ ಜೀವದಾನ ಸಿಕ್ಕಿತ್ತು. ಆ ಸಮಯದಲ್ಲಿ ಅವರು ಕೇವಲ ಒಂದು ರನ್ ಗಳಿಸಿದ್ದರು. ಕ್ಯಾಚ್ ಕೈಚೆಲ್ಲಿದ ಕಾರಣ ಮತ್ತೊಂದು ಅವಕಾಶ ಪಡೆದಿದ್ದರೂ, ವೈಭವ್ ಅದನ್ನ ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ. ಇನ್ನಿಂಗ್ಸ್‌ನ ಏಳನೇ ಓವರ್‌ನ ಎರಡನೇ ಎಸೆತದಲ್ಲಿ ನ್ಯೂಜಿಲೆಂಡ್ ಬೌಲರ್ ನಾಥನ್ ಸ್ಮಿತ್ ಅವರ ಬೌಲಿಂಗ್‌ನಲ್ಲಿ ಔಟಾದರು. ಕವರ್ಸ್ ಕಡೆಗೆ ಚೆಂಡನ್ನ ಆಡಲು ಪ್ರಯತ್ನಿಸಿದ ವೈಭವ್ ಕ್ಯಾಚ್ ನೀಡಿ ಪೆವಿಲಿಯನ್‌ಗೆ ಮರಳಿದರು. ಈ ಮೂಲಕ ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಅವರ ಇನ್ನಿಂಗ್ಸ್ ನಾಲ್ಕು ರನ್‌ಗಳಿಗೆ ಅಂತ್ಯಗೊಂಡಿತು.

ಆರು ಪಂದ್ಯಗಳ ಬಳಿಕ ಸಿಕ್ಕ ಅವಕಾಶ

ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ವೈಭವ್ ಸೂರ್ಯವಂಶಿಯನ್ನ ಭಾರತ ತಂಡಕ್ಕೆ ಆಯ್ಕೆ ಮಾಡಬೇಕು ಎಂಬ ಒತ್ತಾಯ ಮೊದಲಿನಿಂದಲೂ ಕೇಳಿಬಂದಿತ್ತು. ತಂಡಕ್ಕೆ ಆಯ್ಕೆಯಾದ ಬಳಿಕ ಅವರಿಗೆ ಆಡುವ ಅವಕಾಶ ನೀಡಬೇಕು ಎಂಬ ಬೇಡಿಕೆಯೂ ಹೆಚ್ಚಾಗಿತ್ತು. ಆರಂಭದಲ್ಲಿ ಅವಕಾಶ ಪಡೆದು ಉತ್ತಮ ಪ್ರದರ್ಶನ ನೀಡಿದ್ದರೂ, ಬಳಿಕ ಅವರನ್ನ ತಂಡದಿಂದ ಕೈಬಿಡಲಾಗಿತ್ತು. ಏಷ್ಯನ್ ಗೇಮ್ಸ್‌ನಲ್ಲೂ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೈಭವ್‌ಗೆ ಸತತ ಆರು ಪಂದ್ಯಗಳಲ್ಲಿ ಅವಕಾಶ ಸಿಗದಿರುವುದು ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿತ್ತು. ಕೊನೆಗೂ ಎರಡನೇ ಟಿ20 ಪಂದ್ಯದಲ್ಲಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿತ್ತು. ಆದರೆ ಈ ಬಾರಿ ಅವರು ಉತ್ತಮ ಇನ್ನಿಂಗ್ಸ್‌ ಆಡುವಲ್ಲಿ ವಿಫಲರಾದರು.

ವೈಭವ್‌ಗೆ ಮತ್ತೊಂದು ಅವಕಾಶ ಸಿಗುತ್ತಾ?

ಎರಡನೇ ಟಿ20 ಪಂದ್ಯದಲ್ಲಿ ವೈಫಲ್ಯ ಅನುಭವಿಸಿದರೂ, ವೈಭವ್ ಸೂರ್ಯವಂಶಿಗೆ ಮುಂದಿನ ಪಂದ್ಯದಲ್ಲೂ ಅವಕಾಶ ಸಿಗುವ ಸಾಧ್ಯತೆಯಿದೆ. ಇಶಾನ್ ಕಿಶನ್ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದಿದ್ದರೆ, ಮೂರನೇ ಟಿ20 ಪಂದ್ಯದಲ್ಲೂ ಅವರು ತಂಡದಿಂದ ಹೊರಗುಳಿಯಬಹುದು. ಅಂತಹ ಸಂದರ್ಭದಲ್ಲಿ ವೈಭವ್‌ಗೆ ಮತ್ತೊಂದು ಅವಕಾಶ ದೊರೆಯುವ ನಿರೀಕ್ಷೆಯಿದೆ. ಆದರೆ ಮುಂದಿನ ಪಂದ್ಯದಲ್ಲಿ ವೈಭವ್‌ಗೆ ಅವಕಾಶ ನೀಡಿದರೆ ಅವರನ್ನ ಯಾವ ಕ್ರಮಾಂಕದಲ್ಲಿ ಆಡಿಸಲಾಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ. 

ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುತ್ತಾರಾ ಅಥವಾ ಮೂರನೇ ಕ್ರಮಾಂಕದಲ್ಲೇ ಮುಂದುವರಿಸುತ್ತಾರಾ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಐಪಿಎಲ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಗಮನ ಸೆಳೆದಿದ್ದ ವೈಭವ್ ಸೂರ್ಯವಂಶಿ, ಮುಂದಿನ ಪಂದ್ಯದಲ್ಲಿ ಅವಕಾಶ ಪಡೆದರೆ ಹೇಗೆ ಆಡಲಿದ್ದಾರೆ ಎಂಬುದರತ್ತ ಇದೀಗ ಅಭಿಮಾನಿಗಳ ಗಮನ ನೆಟ್ಟಿದೆ.

Add Zee News as a Preferred Source
TAGS:
Cricket