• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕ್ರೀಡೆ
  • /ಭಾರತವನ್ನ ಸೋಲಿಸಿದವನಿಗೆ ಕೊಹ್ಲಿಯಿಂದ ವಿಶೇಷ ಉಡುಗೊರೆ! ವೈರಲ್ ಆಯ್ತು ಸ್ಟಾರ್ ಆಟಗಾರರ ಅಪರೂಪದ ಕ್ಷಣ

ಭಾರತವನ್ನ ಸೋಲಿಸಿದವನಿಗೆ ಕೊಹ್ಲಿಯಿಂದ ವಿಶೇಷ ಉಡುಗೊರೆ! ವೈರಲ್ ಆಯ್ತು ಸ್ಟಾರ್ ಆಟಗಾರರ ಅಪರೂಪದ ಕ್ಷಣ

ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ 6 ವಿಕೆಟ್ ಪಡೆದು ಭಾರತಕ್ಕೆ ಸೋಲುಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮ್ಯಾಟ್ ಹೆನ್ರಿಗೆ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಜೆರ್ಸಿಯನ್ನ ಉಡುಗೊರೆಯಾಗಿ ನೀಡಿದ್ದಾರೆ. ಪಂದ್ಯ ಮುಗಿದ ಬಳಿಕ ಇಬ್ಬರೂ ಭೇಟಿಯಾದ ಈ ವಿಶೇಷ ಕ್ಷಣದ ವಿಡಿಯೋವನ್ನ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದೀಗ ವೈರಲ್ ಆಗಿದೆ.

Written ByPuttaraj K Alur
Published: Nov 14, 2026, 16:45 IST|Updated: Nov 14, 2026, 16:52 IST
joinshare
ಭಾರತವನ್ನ ಸೋಲಿಸಿದವನಿಗೆ ಕೊಹ್ಲಿಯಿಂದ ವಿಶೇಷ ಉಡುಗೊರೆ! ವೈರಲ್ ಆಯ್ತು ಸ್ಟಾರ್ ಆಟಗಾರರ ಅಪರೂಪದ ಕ್ಷಣ
Image Credit: Virat Kohli

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Virat Kohli: ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾವನ್ನ ಕೇವಲ 89 ರನ್‌ಗಳಿಗೆ ಕಟ್ಟಿಹಾಕಿ ಭರ್ಜರಿ ಗೆಲುವು ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ವೇಗದ ಬೌಲರ್ ಮ್ಯಾಟ್ ಹೆನ್ರಿಗೆ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆಯೊಂದನ್ನ ನೀಡಿದ್ದಾರೆ. ತಮ್ಮ ಅಮೋಘ ಬೌಲಿಂಗ್‌ನಿಂದ ಭಾರತೀಯ ಬ್ಯಾಟರ್‌ಗಳನ್ನ ಕಾಡಿದ್ದ ಹೆನ್ರಿಗೆ, ಪಂದ್ಯ ಮುಗಿದ ಬಳಿಕ ಕೊಹ್ಲಿ ಟೀಂ ಇಂಡಿಯಾದ ಜೆರ್ಸಿಯನ್ನ ಉಡುಗೊರೆಯಾಗಿ ನೀಡಿದ್ದಾರೆ. ಈ ವಿಶೇಷ ಕ್ಷಣದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನವೆಂಬರ್ 13ರಂದು ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಕಿವೀಸ್ ವೇಗದ ಬೌಲರ್ ಮ್ಯಾಟ್ ಹೆನ್ರಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ತಮ್ಮ ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿದ ಅವರು, ಕೇವಲ 27 ರನ್ ನೀಡಿ ಆರು ವಿಕೆಟ್‌ಗಳನ್ನ ಕಬಳಿಸಿದ್ದರು. ಪ್ರಮುಖ ಭಾರತೀಯ ಬ್ಯಾಟರ್‌ಗಳ ವಿಕೆಟ್ ಪಡೆಯುವ ಮೂಲಕ ನ್ಯೂಜಿಲೆಂಡ್ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ನ್ಯೂಜಿಲೆಂಡ್ ನೀಡಿದ್ದ 334 ರನ್‌ಗಳ ಗುರಿಯನ್ನ ಬೆನ್ನಟ್ಟಿದ ಭಾರತ ತಂಡ ಆರಂಭದಲ್ಲೇ ತೀವ್ರ ಸಂಕಷ್ಟಕ್ಕೆ ಸಿಲುಕಿತು. ಪಂದ್ಯದ ಮೊದಲ ಓವರ್‌ನಲ್ಲೇ ಹೆನ್ರಿ ಭಾರತದ ಮೂವರು ಪ್ರಮುಖ ಬ್ಯಾಟರ್‌ಗಳನ್ನ ಪೆವಿಲಿಯನ್‌ಗೆ ಕಳುಹಿಸಿದ್ದರು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಹಂಗಾಮಿ ನಾಯಕ ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾಗಿದ್ದರು. ಇದರಿಂದ ಭಾರತ ತಂಡ ಯಾವುದೇ ರನ್ ಗಳಿಸುವ ಮೊದಲೇ ಮೂರು ವಿಕೆಟ್ ಕಳೆದುಕೊಂಡಿತು. ಏಕದಿನ ಕ್ರಿಕೆಟ್‌ನಲ್ಲಿ ಭಾರತಕ್ಕೆ ಇಂತಹ ಪರಿಸ್ಥಿತಿ ಎದುರಾಗಿರುವುದು ಇದೇ ಮೊದಲ ಬಾರಿಯಾಗಿದೆ.

ಹೆನ್ರಿಗೆ ಕೊಹ್ಲಿಯಿಂದ ಜೆರ್ಸಿ ಉಡುಗೊರೆ

Virat Kohli gifted his jersey to Matt Henry ❤️ https://t.co/LQv1UsZLC6

— Nikhil. (@ishowwhyrat) November 13, 2026

ಪಂದ್ಯದಲ್ಲಿ ತಮ್ಮನ್ನ ಶೂನ್ಯಕ್ಕೆ ಔಟ್ ಮಾಡಿದ್ದ ಬೌಲರ್ ಹೆನ್ರಿಯ ಸಾಧನೆಯನ್ನ ಕೊಹ್ಲಿ ಮೆಚ್ಚಿಕೊಂಡಿದ್ದಾರೆ. ಪಂದ್ಯ ಮುಕ್ತಾಯವಾದ ಬಳಿಕ ಇಬ್ಬರೂ ಆಟಗಾರರು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ ತಮ್ಮ ಟೀಂ ಇಂಡಿಯಾ ಜೆರ್ಸಿಯನ್ನ ಮ್ಯಾಟ್ ಹೆನ್ರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ಕ್ಷಣವನ್ನ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಕೊಹ್ಲಿ ಮತ್ತು ಹೆನ್ರಿ ಪರಸ್ಪರ ಮಾತನಾಡುತ್ತಾ ನಗುತ್ತಿರುವುದು ಕಂಡುಬಂದಿದೆ.

ಎದುರಾಳಿ ತಂಡದ ಆಟಗಾರನಾಗಿದ್ದರೂ ಹೆನ್ರಿಯ ಬೌಲಿಂಗ್ ಪ್ರದರ್ಶನವನ್ನ ಗೌರವಿಸಿ ಕೊಹ್ಲಿ ಜೆರ್ಸಿ ನೀಡಿರುವುದು ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ. ಹೆನ್ರಿ ತಮ್ಮ ಬೌಲಿಂಗ್ ಮೂಲಕ ಭಾರತದ ಬ್ಯಾಟಿಂಗ್ ಪಡೆಯನ್ನ ಕಂಗೆಡಿಸಿದ್ದರೂ, ಪಂದ್ಯ ಮುಗಿದ ಬಳಿಕ ಕೊಹ್ಲಿ ತೋರಿದ ಈ ನಡೆ ಕ್ರೀಡಾಸ್ಫೂರ್ತಿಯ ಕ್ಷಣವಾಗಿ ಗುರುತಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಮತ್ತು ಫೋಟೋಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ.

ಹೆನ್ರಿ ವಿರುದ್ಧ ಕೊಹ್ಲಿಯ ಏಕದಿನ ದಾಖಲೆ

ಏಕದಿನ ಕ್ರಿಕೆಟ್‌ನಲ್ಲಿ ಮ್ಯಾಟ್ ಹೆನ್ರಿ ವಿರುದ್ಧ ವಿರಾಟ್ ಕೊಹ್ಲಿ ಈವರೆಗೆ 60 ಎಸೆತಗಳನ್ನ ಎದುರಿಸಿ 59 ರನ್ ಗಳಿಸಿದ್ದಾರೆ. ಈ ಪೈಕಿ ಹೆನ್ರಿ ಮೂರು ಬಾರಿ ಕೊಹ್ಲಿಯನ್ನ ಔಟ್ ಮಾಡಿದ್ದಾರೆ. ಹೆನ್ರಿ ವಿರುದ್ಧ ಕೊಹ್ಲಿ 98.33 ಸ್ಟ್ರೈಕ್‌ರೇಟ್ ಹೊಂದಿದ್ದಾರೆ. ನಾಲ್ಕನೇ ಏಕದಿನ ಪಂದ್ಯದಲ್ಲೂ ಹೆನ್ರಿ ತಮ್ಮ ಬೌಲಿಂಗ್ ಸಾಮರ್ಥ್ಯವನ್ನ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇನ್ನು ಭಾರತದ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಮ್ಯಾಟ್ ಹೆನ್ರಿ ವಿಶೇಷ ದಾಖಲೆ ಹೊಂದಿದ್ದಾರೆ. ಕೇವಲ 12 ಇನ್ನಿಂಗ್ಸ್‌ಗಳಲ್ಲಿ ನಾಲ್ಕು ಬಾರಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನ ಪಡೆದಿದ್ದಾರೆ. ಈ ಸಾಧನೆ ಮಾಡಿದ ಬೌಲರ್‌ಗಳ ಪಟ್ಟಿಯಲ್ಲಿ ಅವರು ಜಂಟಿ ಅಗ್ರಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್ ಪರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಐದು ವಿಕೆಟ್‌ಗಳ ಗೊಂಚಲು ಪಡೆದ ಬೌಲರ್‌ಗಳ ಪಟ್ಟಿಯಲ್ಲೂ ಹೆನ್ರಿ ಗಮನ ಸೆಳೆದಿದ್ದಾರೆ. ಮೂರು ಬಾರಿ ಐದು ವಿಕೆಟ್‌ಗಳ ಗೊಂಚಲು ಪಡೆಯುವ ಮೂಲಕ ಶೇನ್ ಬಾಂಡ್ ಅವರ ದಾಖಲೆಯನ್ನ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ರಿಚರ್ಡ್ ಹ್ಯಾಡ್ಲಿ ಐದು ಬಾರಿ ಮತ್ತು ಟ್ರೆಂಟ್ ಬೌಲ್ಟ್ ಆರು ಬಾರಿ ಐದು ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

89 ರನ್‌ಗಳಿಗೆ ಕುಸಿದ ಟೀಂ ಇಂಡಿಯಾ

ನ್ಯೂಜಿಲೆಂಡ್ ಬೌಲರ್‌ಗಳ ದಾಳಿಗೆ ತತ್ತರಿಸಿದ ಭಾರತ ತಂಡ 26.4 ಓವರ್‌ಗಳಲ್ಲಿ ಕೇವಲ 89 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಇಶಾನ್ ಕಿಶನ್ 27 ರನ್, ಅಕ್ಷರ್ ಪಟೇಲ್ 21 ರನ್ ಹಾಗೂ ನಮನ್ ಧೀರ್ 21 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಅಂತಿಮವಾಗಿ ನ್ಯೂಜಿಲೆಂಡ್ 244 ರನ್‌ಗಳ ಭರ್ಜರಿ ಅಂತರದಿಂದ ಪಂದ್ಯ ಗೆದ್ದುಕೊಂಡಿತು. ಭಾರತದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಮೊದಲ ಓವರ್‌ನಲ್ಲೇ ಪೆವಿಲಿಯನ್ ಸೇರಿದ ರೀತಿ 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನ ನೆನಪಿಸಿತು. ಈ ಸೋಲಿನೊಂದಿಗೆ ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್‌ಗಳ ಪ್ರಾಬಲ್ಯ ಸಂಪೂರ್ಣವಾಗಿ ಎದ್ದು ಕಾಣಿಸಿತು.

ಒಟ್ನಲ್ಲಿ ಮೈದಾನದಲ್ಲಿ ಮ್ಯಾಟ್ ಹೆನ್ರಿ ತೋರಿದ ಬೌಲಿಂಗ್ ಪರಾಕ್ರಮದ ಬಳಿಕ ವಿರಾಟ್ ಕೊಹ್ಲಿ ನೀಡಿದ ಜೆರ್ಸಿ ಉಡುಗೊರೆ ಪಂದ್ಯಾನಂತರದ ಪ್ರಮುಖ ಚರ್ಚೆಯ ವಿಷಯವಾಗಿದೆ. ಎದುರಾಳಿ ಆಟಗಾರನ ಅತ್ಯುತ್ತಮ ಪ್ರದರ್ಶನವನ್ನ ಗುರುತಿಸಿ ಗೌರವಿಸುವ ಮೂಲಕ ಕೊಹ್ಲಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Add Zee News as a Preferred Source
TAGS:
Cricket
Sports
Kannada News