ರಾಹುಲ್ ಗಾಂಧಿ ಅವರ ಪಾದಯಾತ್ರೆ ಸ್ಮರಣೆಗೆ ಸೆ.30ರಂದು ರಾಜ್ಯಮಟ್ಟದ ಶಿಕಾರಿಪುರದಲ್ಲಿ ರಾಜ್ಯಮಟ್ಟದ ‘ಭಾರತ್ ಜೋಡೋ 2.0’ ಪಾದಯಾತ್ರೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಗ್ಯಾನೇಶ್ ಕುಮಾರ್ ರಾಜೀನಾಮೆ ಕೊಡಬೇಕು. ರಾಜ್ಯದಲ್ಲಿ ಎಸ್‌ಐಆರ್ ಸರಿಯಾಗಿ ನಡೆಯುತ್ತಿಲ್ಲ. ಗ್ಯಾನೇಶ್ ಕುಮಾರ್ ಅವರೇ ನೀವು ಯಾರು?, ಎಲೆಕ್ಷನ್ ಕಮೀಷನರೋ? ಕಲೆಕ್ಷನ್ ಕಮೀಷನರೋ ಹೇಳಬೇಕು.
ಕಾಂಗ್ರೆಸ್ ಸರ್ಕಾರ ಹಾಗೂ ಪೌರ ಕಾರ್ಮಿಕರ ನಡುವೆ ಭಕ್ತ-ಭಗವಂತನ ಸಂಬಂಧ. ಶೀಘ್ರದಲ್ಲೇ ಪೌರಕಾರ್ಮಿಕರ ಭತ್ಯೆಗಳನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದ್ರು ಸರ್ಕಾರ ಮನವಿಗೆ ಸ್ಪಂದಿಸದ ಹಿನ್ನಲೆ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮುಖ್ಯಮಂತ್ರಿಗಳು ಯೋಗ್ಯ ನಾಯಕರಲ್ಲ ಎಂದಾದರೆ ಅವರ ವಿರುದ್ಧ ಓಪನ್ ಆಗಿ ಪ್ರೊಟೆಸ್ಟ್ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.