2026ರ ತಿದ್ದುಪಡಿಯ ಮತ್ತೊಂದು ಪ್ರಮುಖ ಅಂಶವೆಂದರೆ ಚಾಲನ್ ನೀಡುವ ಮತ್ತು ಪಾವತಿಸುವ ಪ್ರಕ್ರಿಯೆಯಲ್ಲಿ ಡಿಜಿಟಲ್ ವ್ಯವಸ್ಥೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಪೊಲೀಸ್ ಅಧಿಕಾರಿ ಅಥವಾ ರಾಜ್ಯ ಸರ್ಕಾರದಿಂದ ಅಧಿಕಾರ ಪಡೆದ ಅಧಿಕಾರಿ ಭೌತಿಕ ಅಥವಾ ಎಲೆಕ್ಟ್ರಾನಿಕ್ ರೂಪದಲ್ಲಿ ಚಾಲನ್ ನೀಡಬಹುದು.
ಗಣೇಶ ಮೂರ್ತಿಯ ಮುಂದೆ ಹಚ್ಚಿದ್ದ ದೀಪವನ್ನು ಕಾಯುತ್ತಿದ್ದ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಸೆ.18 2026ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
ಸೆಪ್ಟೆಂಬರ್ 19ರಂದು ಸಕಲೇಶಪುರ ತಹಸಿಲ್ದಾರ್ ಕಚೇರಿ ಆವರಣದಲ್ಲಿ ನಡೆದ ಪ್ರಜಾಸೇವೆ ಆಂದೋಲನದ ವೇಳೆ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳನ್ನ ಸಚಿವರ ಮುಂದೆ ಪ್ರಸ್ತಾಪಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡಲು ಹಣ ಕೇಳುತ್ತಾರೆಂಬ ಆರೋಪವೂ ಕೇಳಿಬಂದಿತ್ತು.
ಅವರ ಬೇಡಿಕೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ನಿಯಮಾನುಸಾರ ಸಾಧ್ಯವಿರುವ ಪರಿಹಾರಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಡದಿಯ ಫಾರ್ಮ್‌ಹೌಸ್‌ನಲ್ಲಿ ನಡೆಯುತ್ತಿದ್ದ ಪರವಾನಗಿ ರಹಿತ ನಕಲಿ ಔಷಧಿ ಮರು-ಪ್ಯಾಕಿಂಗ್ ಮತ್ತು ಲೇಬಲಿಂಗ್ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೆಲವು ಔಷಧಿಗಳ ಪರವಾನಗಿಯನ್ನು ಸಹ ರದ್ದುಗೊಳಿಸಲಾಗಿದೆ.
who owns india what the consittution: ಭೂಮಿ ಖರೀದಿಸುವ ಪ್ರತಿಯೊಬ್ಬರಿಗೂ ವಿಶೇಷ ಭಾವನೆ ಇರುತ್ತದೆ. ನೋಂದಣಿ ಪೂರ್ಣಗೊಂಡ ನಂತರ ಮತ್ತು ಮಾರಾಟ ಪತ್ರವು ಅವರ ಕೈಗೆ ಬಂದ ನಂತರ, ಅವರು ಹೆಮ್ಮೆಯಿಂದ ಇದು ನನ್ನ ಭೂಮಿ ಎಂದು ಹೇಳುತ್ತಾರೆ.
Pavithra Gowda: ಬ್ಯಾರಕ್ ಬದಲಾಯಿಸಿಕೊಳ್ಳುವಲ್ಲಿ ಪವಿತ್ರಾ ಗೌಡಗೆ ಕೊಂಚ ರಿಲೀಫ್ ಸಿಕ್ಕಿದೆ..ಆದ್ರೆ ಬ್ಯಾರಕ್ ಬದಲಾದಷ್ಟು ಸುಲಭವಾಗಿ ಬೇಲ್ ಸಿಗುತ್ತಾ..? ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಹಾಗಾದ್ರೆ ಪವಿತ್ರಾ ಗೌಡ ಜಾಮೀನು ಅರ್ಜಿಯಲ್ಲಿ ಏನೆಲ್ಲಾ ಹೇಳಿದ್ದಾರೆ..?ಬ್ಯಾರಕ್ ಬದಲಾವಣೆಗೆ ಕೋರ್ಟ್ ಕೊಟ್ಟಿದ್ದ ಆದೇಶ ಏನು..?ಈ ಕುರಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ..
ರಾಜ್ಯದಾದ್ಯಂತ ಭಾರೀ ಮಳೆಯ ಅಬ್ಬರ: ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್
ಕೊಡಗು ಜಿಲ್ಲೆಯ ಆನೆಕಾಡು ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ನಾಲ್ಕು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೌಜನ್ಯಾ ಪ್ರಕರಣ ದೇಶಾದ್ಯಂತ ಸೃಷ್ಟಿಸಿದ್ದ ಆಕ್ರೋಶ ಸಣ್ಣದಲ್ಲ. ಸಿಐಡಿ ಹಾಗೂ ಸಿಬಿಐ ತನಿಖೆಯ ನಂತರವೂ ನೈಜ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಸೌಜನ್ಯಾ ತಾಯಿ ಕುಸುಮಾವತಿ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅರ್ಜಿಯ ತೀವ್ರತೆ ಹಾಗೂ ತನಿಖಾ ಲೋಪಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಪ್ರಕರಣಕ್ಕೆ ಹೊಸ ತನಿಖಾ ತಂಡದಿಂದ ಮರುಜೀವ ನೀಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಮಂಗಳೂರು ದಸರಾ ಮಹೋತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 22 ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉತ್ಸವವನ್ನು ಉದ್ಘಾಟಿಸಲಿದ್ದಾರೆ
ರಾಜ್ಯದ ಕೆಲವು ಭಾಗಗಳಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಜಲಾಶಯಗಳ ನೀರಿನ ಮಟ್ಟವೂ ಏರಿಕೆ ಆಗತೊಡಗಿದೆ. ಸೋಮವಾರದ ದಿನ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?
ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಪಟ್ಟಣವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶೃಂಗೇರಿ ರೈತ ಒಕ್ಕೂಟ, ರಾಜಕೀಯ ಪಕ್ಷಗಳು, ಹಾಗೂ ವಿವಿಧ ಸಂಘಟನೆಗಳು ಶೃಂಗೇರಿ ಪಟ್ಟಣ ಬಂದ್ ಗೆ ಕರೆ ಕೊಟ್ಟಿದ್ದು, ಶೃಂಗೇರಿ ವೆಲ್ಕಂ ಗೇಟ್ ನಿಂದ ಬಸ್ ನಿಲ್ದಾಣದವರಗೆ ಪ್ರತಿಭಟನಾಕಾರರ ಜಾಥಾ ನಡೆಸುವ ಮೂಲಕ ಸರ್ಕಾರದ ವಿರುದ್ಧ ಹಾಗೂ ಕಸ್ತೂರಿ ರಂಗನ್ ವರದಿ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಈ ಪ್ರತಿಭಟನೆಯಲ್ಲಿ ಸಾವಿರಾರು ಸ್ಥಳೀಯರು ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಕಸ್ತೂರಿ ರಂಗನ್ ವರದಿ ಕುರಿತು ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗುವುದು. ಆ ಬಳಿಕ ಶಾಸಕರು ಮತ್ತು ಸಂಸದರನ್ನೊಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರ ಬಳಿಗೆ ಕರೆದೊಯ್ದು ಮಲೆನಾಡಿನ ಜನರ ಧ್ವನಿ ಮತ್ತು ರಾಜ್ಯದ ಸ್ಪಷ್ಟ ನಿಲುವನ್ನು ತಲುಪಿಸುವುದಾಗಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.
Tata Punchನ ಪ್ರಮುಖ ಆಕರ್ಷಣೆ ಅದರ ವಿನ್ಯಾಸ. ಸಾಮಾನ್ಯ ಹ್ಯಾಚ್‌ಬ್ಯಾಕ್ ಕಾರುಗಳಿಗಿಂತ ಎತ್ತರದ ಮತ್ತು SUV ಮಾದರಿಯ ನೋಟ ಹೊಂದಿರುವುದು ಇದರ ವಿಶೇಷತೆ. ಮುಂಭಾಗದಲ್ಲಿ ಎತ್ತರದ ಬಾನೆಟ್, ವಿಶಿಷ್ಟವಾದ ಹೆಡ್‌ಲ್ಯಾಂಪ್ ವಿನ್ಯಾಸ ಮತ್ತು ಬಲಿಷ್ಠವಾಗಿ ಕಾಣುವ ಬಂಪರ್‌ಗಳು ಕಾರಿಗೆ SUV ರೀತಿಯ ಲುಕ್ ನೀಡುತ್ತವೆ.
ಮೈಗ್ರೇನ್‌ಅನ್ನ ಕೇವಲ ಸಾಮಾನ್ಯ ತಲೆನೋವು ಎಂದು ಪರಿಗಣಿಸಲಾಗುವುದಿಲ್ಲ. ಇದು ನರಮಂಡಲಕ್ಕೆ ಸಂಬಂಧಿಸಿದ ಸಮಸ್ಯೆಯಾಗಿದ್ದು, ತಲೆಯ ಒಂದು ಭಾಗದಲ್ಲಿ ತೀವ್ರವಾದ ಅಥವಾ ಮಿಡಿಯುವ ರೀತಿಯ ನೋವು ಕಾಣಿಸಿಕೊಳ್ಳಬಹುದು. ಕೆಲವರಿಗೆ ವಾಂತಿ, ಬೆಳಕು ಅಥವಾ ಶಬ್ದದ ಬಗ್ಗೆ ಹೆಚ್ಚು ಸಂವೇದನೆ ಸೇರಿದಂತೆ ಇತರ ಲಕ್ಷಣಗಳೂ ಕಾಣಿಸಿಕೊಳ್ಳಬಹುದು.
ಈ ಟಿವಿಯ ಮತ್ತೊಂದು ಪ್ರಮುಖ ವೈಶಿಷ್ಟ್ಯವೆಂದರೆ Android TV ಪ್ಲಾಟ್‌ಫಾರ್ಮ್. ಇದರ ಮೂಲಕ ಸ್ಮಾರ್ಟ್ ಟಿವಿ ಅನುಭವ ಪಡೆಯಬಹುದು. ಉತ್ಪನ್ನ ಪಟ್ಟಿಯ ಪ್ರಕಾರ Prime Video, YouTube, Zee5, Plex, YuppTV, Eros Now ಮತ್ತು Al Jazeera ಸೇರಿದಂತೆ ಹಲವು ಅಪ್ಲಿಕೇಶನ್‌ಗಳಿಗೆ ಸಪೋರ್ಟ್ ಇದೆ.
ಅಕ್ಟೋಬರ್ 1, 2026ರಿಂದ LPG ಸಬ್ಸಿಡಿ ದರದಲ್ಲಿ ಸಿಲಿಂಡರ್ ಪಡೆಯಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಅಗತ್ಯವಾಗಲಿದೆ. ಈಗಾಗಲೇ ಈ ಪ್ರಕ್ರಿಯೆ ಪೂರ್ಣಗೊಳಿಸಿರುವವರಿಗೆ ಯಾವುದೇ ಹೆಚ್ಚುವರಿ ಕ್ರಮ ಬೇಕಿಲ್ಲ. ಇನ್ನೂ ಮಾಡಿಸದವರು LPG ವಿತರಕರು ಅಥವಾ ಸಂಬಂಧಪಟ್ಟ OMC ಆ್ಯಪ್ ಮೂಲಕ BAA ಪೂರ್ಣಗೊಳಿಸಬಹುದು. Aadhaar ಲಿಂಕ್ ಮಾಡಿರುವುದು ಮತ್ತು ಬಯೋಮೆಟ್ರಿಕ್ ದೃಢೀಕರಣ ಪೂರ್ಣಗೊಳಿಸಿರುವುದು ಒಂದೇ ಅಲ್ಲ.