KPSC ನೇಮಕಾತಿ ಅಕ್ರಮದ ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದ ಅಲೋಕ್ ಕುಮಾರ್ ನೇತೃತ್ವದ SIT ರಚನೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ. ಅಧಿಕಾರಿಯ ನೇಮಕದ ಬಗ್ಗೆ ಆಕ್ಷೇಪಗಳಿದ್ದರೆ ದಾಖಲೆಗಳನ್ನ ಸಲ್ಲಿಸುವಂತೆ ಸೂಚಿಸಿರುವ ನ್ಯಾಯಪೀಠ, ಪರ್ಯಾಯ ಸಮರ್ಥ ಅಧಿಕಾರಿಗಳ ಪಟ್ಟಿಯನ್ನ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಕಲ್ಪಿಸಿದೆ. ಮುಂದಿನ ವಿಚಾರಣೆಯನ್ನ ಅಕ್ಟೋಬರ್ 12ಕ್ಕೆ ಮುಂದೂಡಲಾಗಿದೆ.
ಕರ್ನಾಟಕದಲ್ಲಿ ಕಡಿಮೆ ಅವಧಿಯಲ್ಲಿ ಸಾವಿರಾರು Form 7 ಅರ್ಜಿಗಳು ಸಲ್ಲಿಕೆಯಾಗಿರುವ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಚುನಾವಣಾ ಆಯೋಗದ ಗಮನ ಸೆಳೆದಿದ್ದಾರೆ. ಬೆಳಗಾವಿ ಉತ್ತರ, ಮೂಡಿಗೆರೆ, ಬಬಲೇಶ್ವರ, ನರಸಿಂಹರಾಜ ಹಾಗೂ ಭಾಲ್ಕಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಲ್ಕ್ ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಹ ಮತದಾರರ ಹಕ್ಕು ರಕ್ಷಿಸಲು ತಕ್ಷಣ ತನಿಖೆ ನಡೆಸಿ, ತಪ್ಪು ಕಂಡುಬಂದರೆ FIR ದಾಖಲಿಸುವಂತೆ ಸಿಎಂ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಸಿಎಂ ನಿಯೋಗದೊಂದಿಗೆ ಚರ್ಚೆ ನಡೆದಿದ್ದು, ಕ್ರಮದ ಭರವಸೆ ನೀಡಲಾಗಿದೆ.
ಇಂದು ಬೆಂಗಳೂರು ಉಸ್ತುವಾರಿಸಚಿವ ಕೃಷ್ಣ ಬೈರೇಗೌಡರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಕರ್ನಾಟಕ ಕಾಂಗ್ರೆಸ್‌ನ ‘ಭಾರತ್ ಜೋಡೋ 2.0’ ಪಾದಯಾತ್ರೆ ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಆರಂಭವಾಗಿದೆ.
ಬೆಂಗಳೂರು ಹೊರ ವಲಯಗಳಲ್ಲಿರುವ ಐಟಿ ಹಬ್‌ಗಳಿರುವ ಮಹದೇವಪುರ ಕ್ಷೇತ್ರದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ಸ್ಥಳದಲ್ಲೇ ಪರಿಹಾರ ಕೂಡ ಸೂಚಿಸಿದರು.
ಹೌದು, ಇಂದಿನ ಮೌಲ್ಯದಲ್ಲಿ ನನ್ನ ಬಳಿ 1,400 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ. ಕುಮಾರಸ್ವಾಮಿ ಅವರು ಹತಾಶಾರಾಗಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
ರೈತರ ಸಮಸ್ಯೆಗಳ ಕುರಿತು ವಿಶೇಷ ಅಧಿವೇಶನ ಕರೆದರೂ, ರೈತರಿಗೆ ನಿಜವಾದ ಪರಿಹಾರ ಸಿಕ್ಕಿಲ್ಲವೆಂದು ನಿಖಿಲ್ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಅಧಿವೇಶನದಲ್ಲಿ ವಾಲ್ಮೀಕಿ ಹಗರಣದ ವಿಚಾರವಾಗಿ ಚರ್ಚೆ ನಡೆದು ಸಮಯ ವ್ಯರ್ಥವಾಯಿತು ಎಂದು ಆರೋಪಿಸಿದ್ದಾರೆ.
KSDC ಹಾಗೂ KSWAN ಯೋಜನೆಗಳ ₹444 ಕೋಟಿ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಸಚಿವ ಯತೀಂದ್ರ ಸಿದ್ದರಾಮಯ್ಯ, IAS ಅಧಿಕಾರಿ ಭೂಬಾಲನ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಿದ್ದಾರೆ. ಅರ್ಹತೆಯಿಲ್ಲದ ಹೈದರಾಬಾದ್ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ತನಿಖೆಗೆ ಪೂರ್ವಾನುಮತಿ ಕೋರಿ ರಾಜ್ಯಪಾಲರಿಗೂ ದೂರು ಸಲ್ಲಿಸಲಾಗಿದೆ.
ನೈಸ್ ಯೋಜನೆಯ ಮೂಲ ಒಪ್ಪಂದದ ಇತಿಹಾಸವನ್ನ ಪ್ರಸ್ತಾಪಿಸಿದ ಕುಮಾರಸ್ವಾಮಿ, ಆರಂಭದಲ್ಲಿ ನೈಸ್ ಕಂಪನಿ ಇರಲಿಲ್ಲ ಎಂದು ಹೇಳಿದ್ದಾರೆ. ವಿಹೆಚ್‌ಬಿ, ಕಲ್ಯಾಣಿ ಗ್ರೂಪ್ ಹಾಗೂ ಎಸ್.ಎ.ಬಿ. ಇಂಜಿನಿಯರಿಂಗ್ ಸಂಸ್ಥೆಗಳೊಂದಿಗೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ದೇವೇಗೌಡರು 1995ರ ಫೆಬ್ರವರಿ 20ರಂದು ಎಂಒಯುಗೆ ಸಹಿ ಹಾಕಿದ್ದರು ಎಂದು ಅವರು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ ನೀಡುವಂತೆ ಕೇಂದ್ರದ ಮಧ್ಯಸ್ಥಿಕೆ ಕೋರಿರುವ ಸಿಎಂ ಡಿ.ಕೆ.ಶಿವಕುಮಾರ್, ಯೋಜನಾ ಸ್ಥಳ ಪರಿಶೀಲನೆಗೆ ತಮಿಳುನಾಡು ನಿಯೋಗ ಕಳುಹಿಸಲು ಮನವಿ ಮಾಡಿದ್ದಾರೆ. ತಮಿಳುನಾಡು ಸಿಎಂ ಜೊತೆ ನೇರ ಚರ್ಚೆಗೂ ಆಹ್ವಾನ ನೀಡುವುದಾಗಿ ತಿಳಿಸಿದ್ದಾರೆ.
ಮೈಸೂರು ದಸರಾ ಗಜಪಡೆಯ ಮಾವುತರು ಮತ್ತು ಕಾವಾಡಿಗರಿಗಾಗಿ ಆಯೋಜಿಸಿದ್ದ ಉಪಹಾರ ಕೂಟಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಡವಾಗಿ ಆಗಮಿಸಿದ್ದಕ್ಕೆ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿ ಸ್ಥಳದಿಂದ ನಿರ್ಗಮಿಸಿದರು. ಮಾವುತರನ್ನ ತಿಂಡಿಗಾಗಿ ಕಾಯಿಸುವುದು ಸರಿಯಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಸಮಯಕ್ಕೆ ಸರಿಯಾಗಿ ಉಪಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಆಗಮಿಸಿ ಮಾವುತರು ಮತ್ತು ಕಾವಾಡಿಗರ ಕುಟುಂಬಸ್ಥರೊಂದಿಗೆ ಉಪಹಾರ ಸೇವಿಸಿದರು.
ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದ ಆರೋಪಿ ಬಸವರಾಜ್ ಕನ್ನಾಳೆ ಅವರ ಮನೆಯಲ್ಲಿ ಇಡಿ ಅಧಿಕಾರಿಗಳಿಗೆ ಸಿಕ್ಕ ಡೈರಿಯಲ್ಲಿ ಅಭ್ಯರ್ಥಿಗಳಿಂದ ಬರಬೇಕಿದ್ದ ಲಕ್ಷಾಂತರ ರೂಪಾಯಿಗಳ ಲೆಕ್ಕ ಪತ್ತೆಯಾಗಿದೆ ಎನ್ನಲಾಗಿದೆ. ಏಳು ಅಭ್ಯರ್ಥಿಗಳ ಹೆಸರಿನಲ್ಲಿ ಒಟ್ಟು ₹65 ಲಕ್ಷ ಬಾಕಿ ಮೊತ್ತ ನಮೂದಾಗಿದ್ದು, ಬ್ಯಾಂಕ್ ಖಾತೆ ಮತ್ತು ಹಣಕಾಸಿನ ವ್ಯವಹಾರಗಳ ವಿವರಗಳೂ ದಾಖಲಾಗಿವೆ. ಈ ಮಾಹಿತಿಗಳ ಕುರಿತು ತನಿಖೆ ಮುಂದುವರಿದಿದೆ.
ರಾಜ್ಯದ ವಿವಿಧ ಹಾಲು ಒಕ್ಕೂಟಗಳ ಅಧ್ಯಕ್ಷರು ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿ ಹಾಲಿನ ದರ ಹೆಚ್ಚಳದ ಕುರಿತು ತಮ್ಮ ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಪ್ರತಿ ಲೀಟರ್ ಹಾಲಿಗೆ ₹12 ಹೆಚ್ಚಳ ಮಾಡುವಂತೆ ಒಕ್ಕೂಟಗಳು ಮನವಿ ಮಾಡಿವೆ. ಈ ಹೆಚ್ಚಳದಲ್ಲಿ ₹2 ಅನ್ನ ಒಕ್ಕೂಟಗಳಿಗೆ ನೀಡುವಂತೆ ಬೇಡಿಕೆ ಸಲ್ಲಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.
ಸದನದಲ್ಲಿ ಕೆಲವು ಶಾಸಕರು ಎರಡೆರಡು ಮದುವೆಯಾಗಿದ್ದಾರೆ ಎಂಬ ಸಿಎಂ ಡಿಕೆಶಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಹಾಗೂ ಪೌರ ಕಾರ್ಮಿಕರ ನಡುವೆ ಭಕ್ತ-ಭಗವಂತನ ಸಂಬಂಧ. ಶೀಘ್ರದಲ್ಲೇ ಪೌರಕಾರ್ಮಿಕರ ಭತ್ಯೆಗಳನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ತಮ್ಮ ವಿರುದ್ಧ ಯಾರು ದೂರು ನೀಡಿದ್ದಾರೆ ಎಂಬುದಕ್ಕಿಂತ, ದಾಳಿಯ ಹಿಂದಿನ ಉದ್ದೇಶವೇನು ಎಂಬುದನ್ನ ಗಮನಿಸುತ್ತಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ವಿಚಾರದಲ್ಲಿ ಎಲ್ಲವನ್ನೂ ಗಮನಿಸುತ್ತಿದ್ದು, ತನಗೆ ಹಲವು ವಿಷಯಗಳು ಅರ್ಥವಾಗುತ್ತಿವೆ ಎಂದು ತಿಳಿಸಿದ್ದಾರೆ.
ಚುನಾವಣಾ ಆಯೋಗಕ್ಕೆ ಮಾನವೀಯತೆಯೇ ಇಲ್ಲ... ಅನ್ಯಕಾರ್ಯಗಳಿಗೆ ಶಿಕ್ಷಕರ ಬಳಕೆ ತಡೆಗೆ ಮಸೂದೆ ತರಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕಾಕ್ರೋಚ್ ಪಾರ್ಟಿಯ ನಿಲುವು ಅವರಿಗೆ ಬಿಟ್ಟದ್ದು. ನಾವು ಯಾರು ಕೈಜೋಡಿಸ್ತಾರೆ ಅವರನ್ನು ಆಹ್ಚಾನ ಮಾಡುತ್ತೇವೆ. ಗ್ಯಾನೇಶ್ ಅವರನ್ನ ವಜಾಗೊಳಿಸಬೇಕು. ಮೊದಲು ಅವರನ್ನ ಅರೆಸ್ಟ್ ಮಾಡಬೇಕು.
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ತೀರ್ಪನ್ನ ಪ್ರಶ್ನಿಸಿ ಐದು ಆಟೋ-ಟ್ಯಾಕ್ಸಿ ಚಾಲಕರ ಸಂಘಟನೆಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವುದರಿಂದ ಚಾಲಕರ ಜೀವನೋಪಾಯದ ಮೇಲೆ ಪರಿಣಾಮ ಬೀರಬಹುದು ಎಂದು ಸಂಘಟನೆಗಳು ವಾದಿಸಿವೆ. ಇದೀಗ ಈ ವಿಚಾರ ಸುಪ್ರೀಂಕೋರ್ಟ್‌ನಲ್ಲಿ ಮುಂದಿನ ಕಾನೂನು ಹಂತಕ್ಕೆ ತಲುಪಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರ ಸಮಸ್ಯೆಗಳನ್ನ ನೇರವಾಗಿ ಆಲಿಸಲು ಪ್ರತೀ ಶುಕ್ರವಾರ ಫೋನ್-ಇನ್ ಕಾರ್ಯಕ್ರಮ ನಡೆಸಲಾಗುತ್ತಿದೆ. ಸೆಪ್ಟೆಂಬರ್ 25ರಂದು ಬೆಳಗ್ಗೆ 7ರಿಂದ 9ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ರಸ್ತೆ ಗುಂಡಿ, ಬೀದಿ ದೀಪ, ಕಸ ವಿಲೇವಾರಿ, ಸೊಳ್ಳೆ ನಿಯಂತ್ರಣ, ಒತ್ತುವರಿ, ಇ-ಖಾತಾ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ದೂರು ನೀಡಬಹುದು. ದೂರುಗಳನ್ನ ‘ಸಹಾಯ 2.0’ ಪೋರ್ಟಲ್‌ನಲ್ಲಿ ದಾಖಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುತ್ತದೆ.
ಸಿಂಗಟಾಲೂರು ಏತ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತರಿಗೆ ನ್ಯಾಯಾಲಯದ ಆದೇಶದಂತೆ ಹೆಚ್ಚುವರಿ ಪರಿಹಾರ ಪಾವತಿಯಾಗದ ಹಿನ್ನೆಲೆಯಲ್ಲಿ ಗದಗದಲ್ಲಿ ಮತ್ತೆ ಜಪ್ತಿ ಕ್ರಮಕ್ಕೆ ರೈತರು ಮುಂದಾಗಿದ್ದಾರೆ. ಡಿಸಿ ಕಚೇರಿ ಪರಿಕರ ಹಾಗೂ ಸರ್ಕಾರಿ ವಾಹನಗಳ ಜಪ್ತಿಗೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ಕಾರುಗಳನ್ನ ಜಪ್ತಿ ಮಾಡಲು ರೈತರು ಹಾಗೂ ವಕೀಲರು ಮುಂದಾಗಿದ್ದಾರೆ. ಪರಿಹಾರ ಪಾವತಿಯಾಗುವವರೆಗೆ ಕಾನೂನು ಹೋರಾಟ ಮುಂದುವರಿಸುವುದಾಗಿ ರೈತರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದ್ರು ಸರ್ಕಾರ ಮನವಿಗೆ ಸ್ಪಂದಿಸದ ಹಿನ್ನಲೆ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.