• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಯುಟಿಲಿಟಿ
  • /ರಸಗೊಬ್ಬರ ಖರೀದಿಗೂ ಬಂತು ಮೊಬೈಲ್ ಆ್ಯಪ್; ಇನ್ಮುಂದೆ ಮನೆಯಲ್ಲೇ ಕುಳಿತು ಗೊಬ್ಬರ ಬುಕ್ ಮಾಡಿ!

ರಸಗೊಬ್ಬರ ಖರೀದಿಗೂ ಬಂತು ಮೊಬೈಲ್ ಆ್ಯಪ್; ಇನ್ಮುಂದೆ ಮನೆಯಲ್ಲೇ ಕುಳಿತು ಗೊಬ್ಬರ ಬುಕ್ ಮಾಡಿ!

ಯೂರಿಯಾ, ಡಿಎಪಿ ಸೇರಿದಂತೆ ವಿವಿಧ ರಸಗೊಬ್ಬರಗಳನ್ನು ಖರೀದಿಸಲು ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮೊಬೈಲ್ ಆ್ಯಪ್ ಆಧಾರಿತ ಮುಂಗಡ ಬುಕಿಂಗ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

Written ByChetana Devarmani
Published: Nov 15, 2026, 14:17 IST|Updated: Nov 15, 2026, 14:18 IST
joinshare
ರಸಗೊಬ್ಬರ ಖರೀದಿಗೂ ಬಂತು ಮೊಬೈಲ್ ಆ್ಯಪ್; ಇನ್ಮುಂದೆ ಮನೆಯಲ್ಲೇ ಕುಳಿತು ಗೊಬ್ಬರ ಬುಕ್ ಮಾಡಿ!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ರಸಗೊಬ್ಬರ ಖರೀದಿಸಲು ಅಂಗಡಿಗಳ ಮುಂದೆ ಕ್ಯೂ ನಿಲ್ಲುವ ರೈತರ ಸಂಕಷ್ಟ ತಪ್ಪಿಸಲು ಕೇಂದ್ರ ಸರ್ಕಾರ FFS ಮೊಬೈಲ್ ಆ್ಯಪ್ ಪರಿಚಯಿಸಿದೆ. ಈ ಆ್ಯಪ್ ಮೂಲಕ ರೈತರು ತಮ್ಮ ಫಾರ್ಮರ್‌ ಐಡಿ ಬಳಸಿ ಮುಂಗಡ ಬುಕಿಂಗ್ ಮಾಡಬಹುದು ಮತ್ತು ದೊರೆಯುವ ಕ್ಯೂಆರ್ ಕೋಡ್ ತೋರಿಸಿ ಸುಲಭವಾಗಿ ಗೊಬ್ಬರ ಪಡೆಯಬಹುದು. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರೈತರು ರಸಗೊಬ್ಬರ ಖರೀದಿಸುವ ವಿಧಾನದಲ್ಲೂ ಮಹತ್ವದ ಡಿಜಿಟಲ್ ಬದಲಾವಣೆಯಾಗುತ್ತಿದೆ. ಯೂರಿಯಾ, ಡಿಎಪಿ ಸೇರಿದಂತೆ ವಿವಿಧ ರಸಗೊಬ್ಬರಗಳನ್ನು ಖರೀದಿಸಲು ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮೊಬೈಲ್ ಆ್ಯಪ್ ಆಧಾರಿತ ಮುಂಗಡ ಬುಕಿಂಗ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ರಸಗೊಬ್ಬರ ಮಾರಾಟದಲ್ಲಿ ಪಾರದರ್ಶಕತೆ ತರುವುದು, ಅನಗತ್ಯ ದಾಸ್ತಾನು ಹಾಗೂ ಕಾಳಸಂತೆ ಮಾರಾಟಕ್ಕೆ ಕಡಿವಾಣ ಹಾಕಿ ನಿಜವಾದ ಕೃಷಿಕರಿಗೆ ಅಗತ್ಯ ಪ್ರಮಾಣದ ಗೊಬ್ಬರ ತಲುಪಿಸುವ ಉದ್ದೇಶದಿಂದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು 'Framework for Fertilizer Sale (FFS)' ಎಂಬ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಇದನ್ನು ಈಗಿರುವ Integrated Fertilizer Management System (iFMS) ಹಾಗೂ ಮಾರಾಟ ಮಳಿಗೆಗಳಲ್ಲಿರುವ Point of Sale (PoS) ಯಂತ್ರಗಳೊಂದಿಗೆ ಸಂಯೋಜಿಸಲಾಗಿದೆ.

ರೈತರು ಮೊದಲು ತಮ್ಮ ಮೊಬೈಲ್‌ನಲ್ಲಿ ಅಧಿಕೃತ 'Framework for Fertilizer Sale' ಆ್ಯಪ್ ಮೂಲಕ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. AgriStack ಅಡಿಯಲ್ಲಿ ಸೃಷ್ಟಿಯಾಗಿರುವ ರೈತರ ಗುರುತಿನ ಸಂಖ್ಯೆ (Farmer ID), ಜಮೀನಿನ ವಿಸ್ತೀರ್ಣ ಮತ್ತು ಬೆಳೆ ಮಾಹಿತಿಯನ್ನು ಆಧರಿಸಿ ಗೊಬ್ಬರದ ಅವಶ್ಯಕತೆಯನ್ನು ಪರಿಶೀಲಿಸಲಾಗುತ್ತದೆ. ಕೃಷಿ ವಿಶ್ವವಿದ್ಯಾಲಯಗಳ ಶಿಫಾರಸು ಮತ್ತು ಮಾರ್ಗಸೂಚಿಗಳ ಅನ್ವಯ ಅಗತ್ಯ ಪ್ರಮಾಣ ನಿರ್ಧಾರವಾಗಲಿದ್ದು, ರೈತರು ತಮಗೆ ಬೇಕಾದ ಗೊಬ್ಬರದ ವಿಧ, ಪ್ರಮಾಣ ಹಾಗೂ ಸಮೀಪದ ಮಾರಾಟ ಮಳಿಗೆಯನ್ನು ಆಯ್ಕೆ ಮಾಡಿ ಮುಂಗಡ ಬುಕಿಂಗ್ ಮಾಡಬಹುದು.

ಬುಕಿಂಗ್ ಯಶಸ್ವಿಯಾದ ನಂತರ ರೈತರಿಗೆ ವಿಶೇಷ ಕ್ಯೂಆರ್ ಕೋಡ್ ಅಥವಾ ಟೋಕನ್ ಸಂಖ್ಯೆ ಲಭ್ಯವಾಗುತ್ತದೆ. ನಿಗದಿತ ಅಂಗಡಿಗೆ ತೆರಳಿ ಈ ಕ್ಯೂಆರ್ ಕೋಡ್ ತೋರಿಸಿದಾಗ, ಅಂಗಡಿಯವರು ಅದನ್ನು PoS ಯಂತ್ರದಲ್ಲಿ ಸ್ಕ್ಯಾನ್ ಮಾಡಿ ವಿವರ ಪರಿಶೀಲಿಸುತ್ತಾರೆ. ಬಳಿಕ ಆಧಾರ್ ಆಧಾರಿತ ದೃಢೀಕರಣ ಪೂರ್ಣಗೊಳಿಸಿ ಸಬ್ಸಿಡಿ ದರದಲ್ಲಿ ಗೊಬ್ಬರ ವಿತರಿಸಲಾಗುತ್ತದೆ.

ಸ್ವಂತ ಜಮೀನು ಇಲ್ಲದೆ ಗುತ್ತಿಗೆ ಅಥವಾ ಬಾಡಿಗೆ ಆಧಾರದಲ್ಲಿ ಕೃಷಿ ಮಾಡುವ ರೈತರಿಗೂ ರಸಗೊಬ್ಬರ ನಿರಾಕರಿಸಬಾರದು ಎಂಬುದು ಕೇಂದ್ರ ಸರ್ಕಾರದ ನಿಲುವಾಗಿದೆ. ಅಲ್ಲದೆ, ಪ್ರತಿನಿಧಿ ಅಥವಾ ಅಧಿಕೃತ ವ್ಯಕ್ತಿಯ ಮೂಲಕವೂ ಗೊಬ್ಬರ ಪಡೆಯುವ ಅವಕಾಶವನ್ನು FFS ಕಾರ್ಯವಿಧಾನದಲ್ಲಿ ಕಲ್ಪಿಸಲಾಗಿದೆ. ಇಂತಹ ರೈತರು ತಮ್ಮ ನೋಂದಣಿ ಮತ್ತು ದಾಖಲೆಗಳ ಕುರಿತು ಕೃಷಿ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (CSC) ಮಾಹಿತಿ ಪಡೆಯಬಹುದಾಗಿದೆ.

ಕರ್ನಾಟಕದಲ್ಲಿ ಪ್ರಾಯೋಗಿಕವಾಗಿ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಈ ವ್ಯವಸ್ಥೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿತ್ತು. ಇದರ ಯಶಸ್ಸಿನ ಹಿನ್ನೆಲೆಯಲ್ಲಿ 2026ರ ಡಿಸೆಂಬರ್‌ನಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಇನ್ನೂ 15 ಜಿಲ್ಲೆಗಳಿಗೆ ಈ ವ್ಯವಸ್ಥೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಾರಿಯಾಗುವ ನಿಖರ ದಿನಾಂಕವನ್ನು ಜಿಲ್ಲಾ ಕೃಷಿ ಇಲಾಖೆಯ ಅಧಿಕೃತ ಪ್ರಕಟಣೆಯ ಮೂಲಕ ಖಚಿತಪಡಿಸಿಕೊಳ್ಳಬೇಕಿದೆ.

ಮುನ್ನೆಚ್ಚರಿಕೆಯಾಗಿ ಚಿಕ್ಕಮಗಳೂರು ಜಿಲ್ಲೆಯ ರೈತರು ತಮ್ಮ Farmer ID, ಆಧಾರ್ ವಿವರ, ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಮತ್ತು ಜಮೀನಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಉತ್ತಮ. ಆ್ಯಪ್ ಬಳಕೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಾದರೆ ಸಮೀಪದ ರೈತ ಸಂಪರ್ಕ ಕೇಂದ್ರ, ಸಾಮಾನ್ಯ ಸೇವಾ ಕೇಂದ್ರ (CSC), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ಅಥವಾ ಕೃಷಿ ಅಧಿಕಾರಿಗಳ ನೆರವು ಪಡೆಯಲು ಸೂಚಿಸಲಾಗಿದೆ.

 

Add Zee News as a Preferred Source
TAGS:
Govt Schemes