• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಯುಟಿಲಿಟಿ
  • /ಕರೆಂಟ್‌ ಬಿಲ್‌ ಹೆಸರಲ್ಲೂ ಸೈಬರ್‌ ವಂಚನೆ.. ವಾಟ್ಸ್‌ಆಪ್‌ ಮೆಸೇಜ್‌ ನಂಬಿ ಮೋಸ ಹೋಗಬೇಡಿ

ಕರೆಂಟ್‌ ಬಿಲ್‌ ಹೆಸರಲ್ಲೂ ಸೈಬರ್‌ ವಂಚನೆ.. ವಾಟ್ಸ್‌ಆಪ್‌ ಮೆಸೇಜ್‌ ನಂಬಿ ಮೋಸ ಹೋಗಬೇಡಿ

ವಿದ್ಯುತ್, ಗ್ಯಾಸ್ ಅಥವಾ ನೀರಿನ ಬಿಲ್ ಬಾಕಿ ಹಾಗೂ ನಕಲಿ ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ನಡೆಯುತ್ತಿರುವ ಹೊಸ ಸೈಬರ್ ವಂಚನೆಯ ಬಗ್ಗೆ ಭಾರತೀಯ ಸ್ಟೇಟ್ ಬ್ಯಾಂಕ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ವಂಚಕರು ಕರೆ, ಎಸ್‌ಎಂಎಸ್ ಅಥವಾ ವಾಟ್ಸ್‌ಆ್ಯಪ್ ಸಂದೇಶಗಳ ಮೂಲಕ ಬಿಲ್ ಕಟ್ಟದಿದ್ದರೆ ಇಂದೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಬೆದರಿಕೆ ಹಾಕಿ ಜನರಲ್ಲಿ ಆತಂಕ ಸೃಷ್ಟಿಸುತ್ತಾರೆ.

Written ByYashaswini V
Published: Nov 27, 2026, 16:08 IST|Updated: Nov 27, 2026, 16:13 IST
joinshare
ಕರೆಂಟ್‌ ಬಿಲ್‌ ಹೆಸರಲ್ಲೂ ಸೈಬರ್‌ ವಂಚನೆ.. ವಾಟ್ಸ್‌ಆಪ್‌ ಮೆಸೇಜ್‌ ನಂಬಿ ಮೋಸ ಹೋಗಬೇಡಿ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ!  ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

2

ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು? ಪ್ಲಾಟ್‌ಫಾರಂ ಡೋರ್ ಹೊರತುಪಡಿಸಿ ಇರುವ ಪರ್ಯಾಯಗಳೇನು?

3

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

4

ವಿಜಯ್ ಸೇತುಪತಿ ಕಾಲರ್ ಹಿಡಿದ ರಾಜ್ ಬಿ ಶೆಟ್ಟಿ

5

ಇಂದಿನಿಂದ ನಂದಿನಿ ಮೊಸರು ದರ ಇಳಿಕೆ; ಹೊಸ ಬೆಲೆ ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ತಂತ್ರಜ್ಞಾನ ಬೆಳೆದಂತೆ ಸೈಬರ್ ವಂಚಕರ ಅಟ್ಟಹಾಸವೂ ಮಿತಿಮೀರುತ್ತಿದ್ದು, ಅಮಾಯಕ ಜನರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಲು ಖದೀಮರು ದಿನಕ್ಕೊಂದು ಹೊಸ ತಂತ್ರಗಳನ್ನು ಹೂಡುತ್ತಿದ್ದಾರೆ. ಇದೀಗ ವಿದ್ಯುತ್ ಬಿಲ್ ಪಾವತಿ ಹಾಗೂ ನಕಲಿ ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ನಡೆಯುತ್ತಿರುವ ಹೊಸ ವಂಚನೆಯ ಜಾಲದ ಬಗ್ಗೆ ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಭಾರತೀಯ ಸ್ಟೇಟ್ ಬ್ಯಾಂಕ್ (SBI) ತನ್ನ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಗಂಭೀರ ಎಚ್ಚರಿಕೆಯನ್ನು ನೀಡಿದೆ.

ಜನರನ್ನು ಬಲೆಗೆ ಬೀಳಿಸುತ್ತಿರುವುದು ಹೇಗೆ?
ಸೈಬರ್ ವಂಚಕರು ಅತ್ಯಂತ ವ್ಯವಸ್ಥಿತವಾಗಿ ಈ ಜಾಲವನ್ನು ಹೆಣೆದಿದ್ದಾರೆ. ಮೊದಲಿಗೆ ಗ್ರಾಹಕರ ಮೊಬೈಲ್‌ಗೆ ಕರೆ, ಎಸ್‌ಎಂಎಸ್ ಅಥವಾ ವಾಟ್ಸ್‌ಆ್ಯಪ್ ಮೂಲಕ ಸಂದೇಶಗಳನ್ನು ಕಳುಹಿಸುತ್ತಾರೆ. ನಿಮ್ಮ ಕಳೆದ ತಿಂಗಳ ವಿದ್ಯುತ್, ಗ್ಯಾಸ್ ಅಥವಾ ನೀರಿನ ಬಿಲ್ ಪಾವತಿ ಬಾಕಿ ಉಳಿದಿದೆ. ತಕ್ಷಣವೇ ನಿಮ್ಮ ಕೆವೈಸಿ ವಿವರಗಳನ್ನು ಅಪ್‌ಡೇಟ್ ಮಾಡದಿದ್ದರೆ, ಇಂದು ರಾತ್ರಿಯೇ ನಿಮ್ಮ ಮನೆಯ ವಿದ್ಯುತ್ ಅಥವಾ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಬೆದರಿಕೆಯೊಡ್ಡುತ್ತಾರೆ. ಏಕಾಏಕಿ ಕರೆಂಟ್ ಕಟ್ ಆಗುತ್ತದೆ ಎಂಬ ಆತಂಕಕ್ಕೆ ಒಳಗಾಗುವ ಜನರು, ವಂಚಕರು ಹೇಳಿದಂತೆ ಕೇಳಲು ಮುಂದಾಗುತ್ತಾರೆ.

ಗ್ರಾಹಕರಲ್ಲಿ ತುರ್ತು ಪರಿಸ್ಥಿತಿಯ ಭೀತಿ ಹುಟ್ಟಿಸಿದ ಬಳಿಕ, ವಂಚಕರು ಸಮಸ್ಯೆ ಬಗೆಹರಿಸುವ ನೆಪದಲ್ಲಿ ತಮ್ಮ ಅಸಲಿ ಆಟ ಶುರು ಮಾಡುತ್ತಾರೆ. ಬಿಲ್ ಪಾವತಿಸಲು ಅಥವಾ ಕೆವೈಸಿ ಅಪ್‌ಡೇಟ್ ಮಾಡಲು ಮೊಬೈಲ್‌ಗೆ ಒಂದು ಅಪರಿಚಿತ ಲಿಂಕ್ ಕಳುಹಿಸಿ ಅದರ ಮೇಲೆ ಕ್ಲಿಕ್ ಮಾಡುವಂತೆ ಸೂಚಿಸುತ್ತಾರೆ. ಅಥವಾ ನಕಲಿ ಕಸ್ಟಮರ್ ಕೇರ್ ಅಧಿಕಾರಿಗಳಂತೆ ನಟಿಸಿ ಗ್ರಾಹಕರ ಮೊಬೈಲ್‌ಗೆ ಬರುವ ಒಟಿಪಿ, ಎಟಿಎಂ ಪಿನ್, ಸಿವಿವಿ ಸಂಖ್ಯೆ ಅಥವಾ ಇತರ ಬ್ಯಾಂಕಿಂಗ್ ರಹಸ್ಯ ಮಾಹಿತಿಗಳನ್ನು ಕೇಳಿ ಪಡೆಯುತ್ತಾರೆ. ಗ್ರಾಹಕರು ಲಿಂಕ್ ಕ್ಲಿಕ್ ಮಾಡಿದ ಅಥವಾ ಒಟಿಪಿ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಅವರ ಬ್ಯಾಂಕ್ ಖಾತೆಯಲ್ಲಿರುವ ಲಕ್ಷಾಂತರ ರೂಪಾಯಿ ಹಣವನ್ನು ವಂಚಕರು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ಪರಾರಿಯಾಗುತ್ತಿದ್ದಾರೆ.

ಎಸ್‌ಬಿಐ ನೀಡಿರುವ ಪ್ರಮುಖ ಸುರಕ್ಷತಾ ಸಲಹೆಗಳು:
ಈ ವಂಚನೆಯಿಂದ ಸಾರ್ವಜನಿಕರನ್ನು ರಕ್ಷಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೆಲವು ಮಹತ್ವದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ:
•     ವಾಟ್ಸ್‌ಆ್ಯಪ್, ಎಸ್‌ಎಂಎಸ್ ಅಥವಾ ಇಮೇಲ್ ಮೂಲಕ ಅಪರಿಚಿತ ವ್ಯಕ್ತಿಗಳು ಕಳುಹಿಸುವ ಯಾವುದೇ ಪಾವತಿ ಲಿಂಕ್‌ಗಳು ಅಥವಾ ಎಪಿಕೆ ಫೈಲ್‌ಗಳ ಮೇಲೆ ಅಪ್ಪಿತಪ್ಪಿಯೂ ಕ್ಲಿಕ್ ಮಾಡಬೇಡಿ.
•    ಸಂಪರ್ಕ ಕಡಿತಗೊಳಿಸಲಾಗುವುದು ಎಂಬ ತುರ್ತು ಎಚ್ಚರಿಕೆಯ ಸಂದೇಶಗಳು ಬಂದ ತಕ್ಷಣ ಆತಂಕಕ್ಕೊಳಗಾಗಬೇಡಿ. ಯಾವುದೇ ಸರ್ಕಾರಿ ಸಂಸ್ಥೆಗಳು ಅಥವಾ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ವೈಯಕ್ತಿಕ ವಾಟ್ಸ್‌ಆ್ಯಪ್ ನಂಬರ್‌ಗಳಿಂದ ಕರೆ ಮಾಡಿ ಬೆದರಿಕೆ ಹಾಕುವುದಿಲ್ಲ. ಸಂದೇಶದ ಸತ್ಯಾಸತ್ಯತೆಯನ್ನು ಸಂಬಂಧಪಟ್ಟ ಕಚೇರಿ ಅಥವಾ ಅಧಿಕೃತ ವೆಬ್‌ಸೈಟ್ ಮೂಲಕ ಖಚಿತಪಡಿಸಿಕೊಳ್ಳಿ.
•    ಬ್ಯಾಂಕ್ ಸಿಬ್ಬಂದಿ ಅಥವಾ ಯಾವುದೇ ಅಧಿಕಾರಿಗಳು ಫೋನ್ ಕರೆ ಮಾಡಿ ನಿಮ್ಮ ಒಟಿಪಿ, ಪಾಸ್‌ವರ್ಡ್, ಸಿವಿವಿ ಅಥವಾ ಪಿನ್ ಸಂಖ್ಯೆಯನ್ನು ಕೇಳುವುದಿಲ್ಲ. ಇಂತಹ ಖಾಸಗಿ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

Electricity Bill Scam Captain Y Received an urgent call or message asking you to update your KYC for electricity, gas or water bill services? Beware! It could be a scam! Fraudsters often impersonate officials from utility service providers and create a sense of urgency by asking you to update your KYC details or pay outstanding bills through suspicious links. But don't worry! Captain Y – Your Cyber Rakshak from SBI – is here to guide you and remind you: Before trusting such calls or clicking on unknown links, Hamesha Poochho Why? Stay alert. Stay safe!

— State Bank of India (@TheOfficialSBI) November 11, 2026

ಒಟ್ಟಾರೆಯಾಗಿ, ಸಾರ್ವಜನಿಕರು ಇಂತಹ ಬೆದರಿಕೆ ಕರೆಗಳ ಬಗ್ಗೆ ಸದಾ ಜಾಗರೂಕರಾಗಿರಬೇಕು. ಸ್ವಲ್ಪ ಎಚ್ಚರಿಕೆ ವಹಿಸುವುದರಿಂದ ಸೈಬರ್ ಖದೀಮರ ಜಾಲಕ್ಕೆ ಬೀಳುವುದನ್ನು ತಪ್ಪಿಸಿಕೊಂಡು, ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಬಹುದು.
 

Add Zee News as a Preferred Source
TAGS:
Cyber Crime
Personal Finance
Crime