SOCIAL MEDIA

Newsletter

PARTNER SITES
Select Language Select State

ಹರಳೆಣ್ಣೆಗೆ ಈ ಎಲೆ ಬೆರೆಸಿ ಹಚ್ಚಿದ್ರೆ ಹತ್ತೇ ನಿಮಿಷದಲ್ಲಿ ಕಪ್ಪಾಗುತ್ತವೆ ಬಿಳಿ ಕೂದಲು! ಮತ್ತೇ ಬೆಳ್ಳಗಾಗಲ್ಲ..

Best White Hair Remedy: ರಾಸಾಯನಿಕಗಳು ಕೂದಲಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರವನ್ನು ನೀಡುತ್ತವೆ. ಆದರೆ, ಇದು ಶಾಶ್ವತ ಪರಿಹಾರವಲ್ಲ. ಬದಲಾಗಿ ಕೂದಲಿನ ಆರೋಗ್ಯ ಮತ್ತು ಸೌಂದರ್ಯವನ್ನು ಹಾಳು ಮಾಡುತ್ತದೆ.

Written By Chetana Devarmani
Published: Nov 23, 2026, 22:09 IST | Updated: Nov 23, 2026, 22:11 IST
Join

ಕಾಲ ಕಳೆದಂತೆ ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತಿವೆ. ಅದರಲ್ಲಿ ಕೂದಲಿನ ಆರೋಗ್ಯವೂ ಒಂದು. ಚಿಕ್ಕವಯಸ್ಸಿನಲ್ಲಿ ಕೂದಲು ಬಿಳಿಯಾಗುವುದು ಕೂಡ ಅನೇಕರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಚಿಕ್ಕವಯಸ್ಸಿನಲ್ಲೇ ಬಿಳಿಕೂದಲನ್ನು ತಡೆಯಲು ನಾವು ಹಲವಾರು ವಸ್ತುಗಳನ್ನು ಬಳಸುತ್ತೇವೆ. ಈ ವಸ್ತುಗಳಲ್ಲಿ ಹೆಚ್ಚಿನವು ರಾಸಾಯನಿಕಗಳನ್ನು ಒಳಗೊಂಡಿರುತ್ತವೆ. ಈ ರಾಸಾಯನಿಕಗಳು ಕೂದಲಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರವನ್ನು ನೀಡುತ್ತವೆ. ಆದರೆ, ಇದು ಶಾಶ್ವತ ಪರಿಹಾರವಲ್ಲ. ಬದಲಾಗಿ ಕೂದಲಿನ ಆರೋಗ್ಯ ಮತ್ತು ಸೌಂದರ್ಯವನ್ನು ಹಾಳು ಮಾಡುತ್ತದೆ.

ಕೂದಲಿಗೆ ಕೆಲವು ನೈಸರ್ಗಿಕ ಉತ್ಪನ್ನಗಳನ್ನು ಹಚ್ಚುವುದರಿಂದ, ಬಿಳಿ ಕೂದಲಿನ ಸಮಸ್ಯೆಯನ್ನು ಮೂಲದಿಂದ ಪರಿಹರಿಸಬಹುದು. ಹೌದು, ಎಳ್ಳೆಣ್ಣೆ ಬಳಸುವುದರಿಂದ ಕೂದಲನ್ನು ಕಪ್ಪಾಗಿಸಬಹುದು.. ಎಳ್ಳಿನ ಎಣ್ಣೆಯು ಅನೇಕ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ನಿಮ್ಮ ಕೇಶಕ್ಕೆ ಹೊಳಪು ನೀಡಿ ದಷ್ಟಪುಷ್ಟವಾಗಿ ಬೆಳೆಯುವಂತೆ ಮಾಡುತ್ತದೆ.. ಕರಿಬೇವಿನ ಪುಡಿ ಅಥವಾ ಎಲೆಯನ್ನು ಎಳ್ಳೆಣ್ಣೆಯೊಂದಿಗೆ ಬೆರೆಸಿ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ.

ಕರಿಬೇವಿನ ಎಲೆಗಳು ಕೂಡ ಕೂದಲು ಉದುರುವುದನ್ನು ತಡೆಯುತ್ತದೆ. ಅಲ್ಲದೆ ಇದು ಕೂದಲನ್ನು ಬಲಪಡಿಸುತ್ತದೆ. ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ. ಈ ಪರಿಹಾರ ಮಾಡಲು ಮೊದಲು 1 ಕಪ್ ಎಳ್ಳಿನ ಎಣ್ಣೆಯನ್ನು ತೆಗೆದುಕೊಳ್ಳಿ. ಇದಕ್ಕೆ ಅರ್ಧ ಕಪ್ ಕರಿಬೇವನ್ನು ಸೇರಿಸಿ ಚೆನ್ನಾಗಿ ಬಿಸಿ ಮಾಡಿ. ಈ ಎಣ್ಣೆಯನ್ನು ನಿಮ್ಮ ಕೂದಲಿಗೆ ವಾರಕ್ಕೆ ಎರಡು ಬಾರಿ ನಿಯಮಿತವಾಗಿ ಹಚ್ಚಿ. ಹೀಗೆ ಮಾಡುವುದರಿಂದ ನಿಮ್ಮ ಬಿಳಿ ಕೂದಲು ಕ್ರಮೇಣ ಕಪ್ಪಾಗುತ್ತದೆ.

ಕೂದಲು ಕಪ್ಪಾಗಲು ಎಳ್ಳೆಣ್ಣೆಯೊಂದಿಗೆ ಹೆನ್ನಾ ಸಹ ಹಚ್ಚಬಹುದು. ಇದು ನಿಮ್ಮ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಸಹಾಯ ಮಾಡಿ.. ಕೂದಲಿನ ಹೊಳಪನ್ನು ಸುಧಾರಿಸುತ್ತದೆ. ಇದರ ನಿಯಮಿತ ಬಳಕೆಯಿಂದ ಕೂದಲು ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದಕ್ಕಾಗಿ 1 ಕಪ್ ಎಳ್ಳಿನ ಎಣ್ಣೆಯನ್ನು ತೆಗೆದುಕೊಂಡು ಅದಕ್ಕೆ 1 ಚಮಚ ಗೋರಂಟಿ ಪುಡಿ ಅಥವಾ ಗೋರಂಟಿ ಎಲೆಗಳನ್ನು ಸೇರಿಸಿ ಚೆನ್ನಾಗಿ ಬಿಸಿ ಮಾಡಿ. ನಂತರ ಈ ಎಣ್ಣೆಯನ್ನು ನಿಮ್ಮ ಕೂದಲಿಗೆ ವಾರಕ್ಕೆ ಎರಡು ಬಾರಿ ಹಚ್ಚಿ. ನಿಮ್ಮ ಕೂದಲಿಗೆ ಈ ಎಣ್ಣೆಯನ್ನು ನಿಯಮಿತವಾಗಿ ಹಚ್ಚಿಕೊಳ್ಳುವದರಿಂದ ಕ್ರಮೇಣ ನಿಮ್ಮ ಕೂದಲು ಕಪ್ಪಾಗುತ್ತದೆ.  
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES