• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಯುಟಿಲಿಟಿ
  • /ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ನಿಮಗೆಷ್ಟು ಗೊತ್ತು!

ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ನಿಮಗೆಷ್ಟು ಗೊತ್ತು!

ಮಹಿಳೆಯರು ಸ್ವತಂತ್ರರಾಗಿರಲು ಆರ್ಥಿಕ ಸಬಲೀಕರಣ ತುಂಬಾ ಮುಖ್ಯವಾಗಿದೆ. ಹಾಗಾಗಿಯೇ, ಕೇಂದ್ರ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಹೆಣ್ಣು ಮಕ್ಕಳಿಗಾಗಿ ಕೆಲವು ಯೋಜನೆಗಳನ್ನು ಪರಿಚಯಿಸಿದೆ.

Reported ByYashaswini VEdited ByYashaswini V
Published: Sep 14, 2026, 09:59 AM IST|Updated: Sep 14, 2026, 10:03 AM IST
joinshare
ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ನಿಮಗೆಷ್ಟು ಗೊತ್ತು!

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಪ್ರಸ್ತುತ ಕಾಲಮಾನದಲ್ಲಿ ಹೆಣ್ಣು ಮಕ್ಕಳು ಗಂಡು ಮಕ್ಕಳಂತೆಯೇ ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದು, ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೆಣ್ಣು ಗಂಡಿನ ನಡುವೆ ಯಾವುದೇ ಭೇದ-ಭಾವ ಇಲ್ಲ, ಗಂಡು ಮಕ್ಕಳಂತೆ ಹೆಣ್ಮಕ್ಕಳೂ ಕೂಡ ಎಲ್ಲಾ ಕೆಲಸಗಳನ್ನು ಮಾಡಬಲ್ಲರು, ಸಾಧನೆ ಮಾಡಬಲ್ಲರು ಎಂಬುದಕ್ಕೆ ಹಲವು ನಿದರ್ಶನಗಳಿವೆ. ಆದರೂ ಸಹ ದೇಶದ ಕೆಲವು ಭಾಗಗಳಲ್ಲಿ ಇಂದಿಗೂ ಕೂಡ ಹೆಣ್ಣು ಮಕ್ಕಳೆಂದರೆ ಅವರೊಂದು ಹೊರೆ ಎನ್ನುವ ಭಾವನೆ ಇದೆ. ಹೆಣ್ಣು ಭ್ರೂಣ ಹತ್ಯೆಯಂತಹ ಪಿಡುಗು ಇನ್ನೂ ಕೂಡ ಸಂಪೂರ್ಣವಾಗಿ ತೊಲಗಿಲ್ಲ. ಆದರೆ, ಹೆಣ್ಣು ಅಬಲೆ ಅಲ್ಲ, ಸಬಲೆ... ಇದಕ್ಕಾಗಿ ಆಕೆ ಆರ್ಥಿಕವಾಗಿಯೂ ಸಬಲೀಕರಣವಾಗಿರುವುದು ತುಂಬಾ ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ, ಅವರ ಜೀವನವನ್ನು ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸುವ ಗುರಿಯೊಂದಿಗೆ ಹಲವು ಯೋಜನೆಗಳನ್ನು ಪ್ರಾರಂಭಿಸಿದೆ. ಈ ಯೋಜನೆಗಳು ಸಮಾಜದ ವಿವಿಧ ವರ್ಗಗಳ ಮಹಿಳೆಯರನ್ನು ಒಳಗೊಂಡಿದೆ.

ಹೆಣ್ಣು ಮಕ್ಕಳಿಗೋಸ್ಕರವೇ ರೂಪಿಸಲಾಗಿರುವ, ಮಹಿಳಾ ಪರವಾದ ಆ ಯೋಜನೆಗಳು ಯಾವುವು? ಮಹಿಳೆಯರ ಸಬಲೀಕರಣಕ್ಕಾಗಿಯೇ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳ ಪ್ರಯೋಜನವೇನು? ಈ ಕುರಿತ ಮಾಹಿತಿ ಇಲ್ಲಿದೆ.

ಮಹಿಳೆಯರಿಗಾಗಿ ಕೇಂದ್ರ ಸರ್ಕಾರದ ಯೋಜನೆಗಳು:
* ಬೇಟಿ ಬಚಾವೋ, ಬೇಟಿ ಪಢಾವೋ
* ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ
* ಸುಕನ್ಯಾ ಸಮೃದ್ಧಿ ಯೋಜನೆ
* ಮಹಿಳಾ ಸನ್ಮಾನ್‌ ಉಳಿತಾಯ ಪ್ರಮಾಣಪತ್ರ
* ಉಚಿತ ಹೊಲಿಗೆ ಯಂತ್ರ ಯೋಜನೆ
* ಪ್ರಧಾನ ಮಂತ್ರಿ ಉಜ್ವಲ ಯೋಜನೆ

ಬೇಟಿ ಬಚಾವೋ, ಬೇಟಿ ಪಢಾವೋ (Beti Bachao, Beti Padhao): 


ಹೆಣ್ಣು ಭ್ರೂಣ ಹತ್ಯೆಯಂತಹ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಿ, ಹೆಣ್ಣು ಮಕ್ಕಳ ಲಿಂಗ ಅನುಪಾತದಲ್ಲಿನ ಕುಸಿತವನ್ನು ಕಡಿಮೆ ಮಾಡುವುದು ಹಾಗೂ ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ "ಬೇಟಿ ಬಚಾವೋ, ಬೇಟಿ ಪಢಾವೋ" ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಆರೋಗ್ಯ ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಮಾನವ ಸಂಪನ್ಮೂಲ ಸಚಿವಾಲಯಗಳ ಅಡಿಯಲ್ಲಿ ಈ ಯೋಜನೆಯು ಜಂಟಿ ಉಪಕ್ರಮವಾಗಿ ಕಾರ್ಯನಿರ್ವಹಿಸುತ್ತದೆ.

ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯನ್ನು ಜನವರಿ 22, 2015ರಂದು ಆರಂಭಿಸಲಾಯಿತು. ಇದನ್ನು BBBP ಯೋಜನೆ ಎಂತಲೂ ಕರೆಯಲಾಗುತ್ತದೆ.  

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (Pradhan Mantri Matru Vandana Yojana):

ಕೇಂದ್ರ ಸರ್ಕಾರಿ ಗರ್ಭಿಣಿ ಮಹಿಳೆಯರಿಗಾಗಿಯೇ ವಿನ್ಯಾಸಗೊಳಿಸಿರುವ ಯೋಜನೆಯೇ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ. ಇದನ್ನು ಪಿಎಂಎಂವಿವೈ ಯೋಜನೆ ಎಂತಲೂ ಕರೆಯಲಾಗುತ್ತದೆ. ಸಾಮಾನ್ಯವಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು ಅಪೌಷ್ಟಿಕತೆಯಂತಹ ಸಮಸ್ಯೆಗಳನನು ಎದುರಿಸುತ್ತಾರೆ. ಅಲ್ಲದೇ, ಹಾಲುಣಿಸುವ ಸಂದರ್ಭದಲ್ಲೂ ಸಹ ತಾಯಂದಿರಿಗೆ ಅಗತ್ಯ ಪೋಷಕಾಂಶಗಳು ಪೂರ್ಣ ಪ್ರಮಾಣದಲ್ಲಿ ದೊರೆಯದೆ ಅಪೌಷ್ಟಿಕತೆಯಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗರ್ಭಿಣಿಯಿರಿಗೆ, ಹಾಲುಣಿಸುವ ಮಹಿಳೆಯರಿಗೆ 6,000 ರೂ.ಗಳ ಆರ್ಥಿಕ ನೆರವನ್ನು ನೀಡುತ್ತದೆ.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಅಡಿಯಲ್ಲಿ ಗರ್ಭಿಣಿಯರಿಗೆ ಮೊದಲ ಹಂತದಲ್ಲಿ ₹1000, ಎರಡನೇ ಹಂತದಲ್ಲಿ ₹2000 ಮತ್ತು ಮೂರನೇ ಹಂತದಲ್ಲಿ ₹2000 ಹಣವನ್ನು ಹಾಗೂ ಮಗುವಿನ ಜನನದ ಸಮಯದಲ್ಲಿ ಆಸ್ಪತ್ರೆಗೆ ಕೊನೆಯ ಕಂತಿನ ₹1000 ಹಣವನ್ನು ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ನೀಡಲಾಗುವ ಈ ಮೊತ್ತವನ್ನು ನೇರವಾಗಿ ಫಲಾನುಭವಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುತ್ತದೆ. ಆದಾಗ್ಯೂ, ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಗರ್ಭಿಣಿ ಮಹಿಳೆಯ ವಯಸ್ಸು 19 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಎಂಬ ನಿಯಮವಿದೆ.

ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana): 

ಕೇಂದ್ರ ಸರ್ಕಾರ ಹೆಣ್ಣು ಮಗುವಿನ ಉಜ್ವಲ ಭವಿಷ್ಯಕ್ಕಾಗಿ ಅವರ ಶಿಕ್ಷಣ, ಮದುವೆಯಂತಹ ಸಂದರ್ಭಗಳಲ್ಲಿ ಯಾವುದೇ ರೀತಿಯ ಆರ್ಥಿಕ ತೊಂದರೆಗಳು ಉಂಟಾಗದಂತೆ ನಿಗಾವಹಿಸುವ ನಿಟ್ಟಿನಲ್ಲಿ ರೂಪಿಸಿರುವ ಯೋಜನೆಯೇ ʼಸುಕನ್ಯಾ ಸಮೃದ್ಧಿ ಯೋಜನೆʼ. ಸುಕನ್ಯಾ ಸಮೃದ್ಧಿ ಯೋಜನೆ ಎಂದರೆ ಎಸ್‌ಎಸ್‌ವೈ ಯೋಜನೆಯಲ್ಲಿ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಪೋಷಕರು ತಮ್ಮ ಮಗಳ ಹೆಸರಿನಲ್ಲಿ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆಯಬಹುದಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ ₹250 ಗಳಿಂದ ಗರಿಷ್ಠ ₹1,50,000ದವರೆಗೆ ಹೂಡಿಕೆ ಮಾಡಬಹುದಾಗಿದೆ. ಕೇಂದ್ರ ಸರ್ಕಾರವು ಪ್ರಸ್ತುತ ಎಸ್‌ಎಸ್‌ವೈ ಯೋಜನೆಯಲ್ಲಿ ಸರ್ಕಾರ 8.2% ಬಡ್ಡಿಯನ್ನು ನೀಡುತ್ತಿದೆ.

ಸುಕನ್ಯಾ ಸಮೃದ್ಧಿ ಯೋಜನೆಯ ಮುಕ್ತಾಯ ಅವಧಿ 15 ವರ್ಷಗಳಾಗಿದ್ದು, ಹೆಣ್ಣು ಮಗುವಿಗೆ 21 ವರ್ಷ ಪೂರ್ಣಗೊಂಡಾಗ ಇದರಿಂದ ಹಣ ಹಿಂಪಡೆಯಲು ಅವಕಾಶವಿರುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಪೋಷಕರು ತಮ್ಮ ಹೆಣ್ಣು ಮಗುವಿನ ಶಿಕ್ಷಣ ಹಾಗೂ ಅವರ ಮದುವೆ ಸಂದರ್ಭದಲ್ಲಿ ಆರ್ಥಿಕ ಭದ್ರತೆಯನ್ನು ಒದಗಿಸುವುದಾಗಿದೆ.

ಮಹಿಳಾ ಸನ್ಮಾನ್‌ ಉಳಿತಾಯ ಪ್ರಮಾಣಪತ್ರ (Mahila Samman Savings Certificate): 

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕಾಗಿಯೇ ಕೇಂದ್ರ ಸರ್ಕಾರದಿಂದ ವಿನ್ಯಾಸಗೊಳಿಸಲಾಗಿರುವ ಯೋಜನೆಯೇ ʼಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರʼ. ದೇಶಾದ್ಯಂತಯ ಯಾವುದೇ ಅಂಚೆ ಕಚೇರಿಯಲ್ಲಿ ʼಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರʼದಲ್ಲಿ ಠೇವಣಿ ಮಾಡಲು ಅವಕಾಶವಿದೆ. ಈ ಯೋಜನೆಯಲ್ಲಿ ಮಹಿಳೆಯರು ಎರಡು ವರ್ಷಗಳವರೆಗೆ ಕನಿಷ್ಠ 1000 ರೂ.ಗಳಿಂದ ಗರಿಷ್ಠ 2 ಲಕ್ಷ ರೂ.ಗಳವರೆಗೆ ಹಣವನ್ನು ಠೇವಣಿ ಇಡಬಹುದು. ಖಾತೆ ತೆರೆದ ದಿನಾಂಕದಿಂದ ಒಂದು ವರ್ಷದ ನಂತರ ಹೂಡಿಕೆದಾರರು ಅರ್ಹ ಬಾಕಿ ಮೊತ್ತದ 40 ಪ್ರತಿಶತದಷ್ಟು ಹಣವನ್ನು ಹಿಂಪಡೆಯಲು ಅವಕಾಶವಿದೆ. ಕೇಂದ್ರ ಸರ್ಕಾರವು ಪ್ರಸ್ತುತ ʼಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರʼ ಯೋಜನೆಯಲ್ಲಿ ಶೇಕಡಾ 7.5 ರಷ್ಟು ಬಡ್ಡಿದರವನ್ನು ನೀಡುತ್ತದೆ.

ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine Scheme): 

ಗ್ರಾಮೀಣ ಮತ್ತು ನಗರ ಪ್ರದೇಶಗಳ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಮಹಿಳೆಯರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿರುವ ಯೋಜನೆಯೇ ಉಚಿತ ಹೊಲಿಗೆ ಯಂತ್ರ ಯೋಜನೆ. ಕೇಂದ್ರ ಸರ್ಕಾರವು ಹೊಲಿಗೆ ಮತ್ತು ಕಸೂತಿಯಲ್ಲಿ ಆಸಕ್ತಿ ಹೊಂದಿರುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡುತ್ತದೆ. 20 ರಿಂದ 40 ವರ್ಷದೊಳಗಿನ ಮಹಿಳೆಯರು ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಆದಾಗ್ಯೂ, ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಪಡೆಯಲು ಬಯಸುವ ಮಹಿಳೆಯ ಪತಿಯ ಆದಾಯ ಮಾಸಿಕ ₹12,000 ಕ್ಕಿಂತ ಅಧಿಕವಾಗಿರಬಾರದು ಎಂಬ ಷರತ್ತಿನ ಅಡಿಯಲ್ಲಿ ಈ ಸೌಲಭ್ಯವನ್ನು ನೀಡಲಾಗುತ್ತದೆ.  

ಪ್ರಧಾನ ಮಂತ್ರಿ ಉಜ್ವಲ ಯೋಜನೆ (Pradhan Mantri Ujjwala Yojana): 

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ ಹೊಗೆರಹಿತ, ಶುದ್ಧವಾದ ಅಡುಗೆ ಇಂಧನ ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು 2016 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು (PMUY) ಆರಂಭಿಸಿದೆ. ಇದು ಮಹಿಳೆಯರ ಆರೋಗ್ಯವನ್ನು ಕಾಪಾಡುವ ಗುರಿಯನ್ನು ಹೊಂದಿದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಮಹಿಳೆಯರು ಈ ಯೋಜನೆಯಡಿ ಪ್ರಯೋಜನ ಪಡೆಯಬಹುದಾಗಿದೆ.

Add Zee News as a Preferred Source
TAGS:
Central Government Schemes