SOCIAL MEDIA

Newsletter

PARTNER SITES
Select Language Select State

ಕೇಂದ್ರದಿಂದ ಮಹತ್ವದ ನಿರ್ಧಾರ.. ರದ್ದಾಗಲಿವೆ ಇಂತಹ ಕುಟುಂಬಗಳ ಪಡಿತರ ಚೀಟಿಗಳು.! ತಕ್ಷಣವೇ ಪರಿಶೀಲಿಸಿ

Ration Card E-KYC : ಇ-ಕೆವೈಸಿ ಕಡ್ಡಾಯ ನಡುವೆ ಇದೀಗ ಪಡಿತರ ಚೀಟಿಗೆ ಸಂಬಂಧಿಸಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಕೆಲವು ರೇಷನ್‌ ಕಾರ್ಡ್‌ಗಳನ್ನು ಸ್ಥಗಿತಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಈ ಕುರಿತು ಮಹತ್ವದ ಸೂಚನೆಯನ್ನು ಫಲಾನುಭವಿಗಳಿಗೆ ನೀಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Reported By Krishna NK Written By Krishna NK
Published: Sep 29, 2026, 04:10 PM IST | Updated: Sep 29, 2026, 04:16 PM IST
Image Credit: Ration Card updates and KYC onlilne website
Join

BPL Card new Update : ದೇಶಾದ್ಯಂತ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು (PDS) ಇನ್ನಷ್ಟು ಪಾರದರ್ಶಕಗೊಳಿಸಲು ಮತ್ತು ನಕಲಿ ಅಥವಾ ನಿಷ್ಕ್ರಿಯ ಫಲಾನುಭವಿಗಳನ್ನು ತಡೆಯಲು ಕೇಂದ್ರ ಸರ್ಕಾರ ಬೃಹತ್‌ ಕ್ರಮಕ್ಕೆ ಮುಂದಾಗಿದೆ. ಕಳೆದ ಆರು ತಿಂಗಳಿನಿಂದ ಪಡಿತರ ಧಾನ್ಯಗಳನ್ನು ಪಡೆಯದ ಸುಮಾರು 1.58 ಕೋಟಿ (15.8 ಮಿಲಿಯನ್) ಫಲಾನುಭವಿಗಳ ಪಡಿತರ ಚೀಟಿಗಳನ್ನು ಅಕ್ಟೋಬರ್ 1, 2026 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ನಿರ್ಧರಿಸಿದೆ.

ಹೌದು.. ಸೆಪ್ಟೆಂಬರ್ 1 ರಂದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಹಾರ ಕಾರ್ಯದರ್ಶಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ನೂತನ ಕಾರ್ಯನಿರ್ವಹಣಾ ವಿಧಾನಗಳನ್ನು (SOP) ಬಿಡುಗಡೆ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಹೊಸ ನಿಯಮದಲ್ಲೇನಿದೆ?
ಆರು ತಿಂಗಳಿನಿಂದ ಪಡಿತರ ಪಡೆಯದ ಕಾರ್ಡ್‌ಗಳನ್ನು 'ಮೌನ ಪಡಿತರ ಚೀಟಿ'ಗಳೆಂದು ಪರಿಗಣಿಸಿ, ಮೊದಲ ಹಂತದಲ್ಲಿ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗುತ್ತದೆ. ತಕ್ಷಣವೇ ಇವುಗಳನ್ನು ಶಾಶ್ವತವಾಗಿ ರದ್ದುಗೊಳಿಸುವುದಿಲ್ಲ. ಅಷ್ಟೇ ಅಲ್ಲದೆ, ಅರ್ಹ ಫಲಾನುಭವಿಗಳಿಗೆ ತಮ್ಮ ಪಡಿತರ ಚೀಟಿಯನ್ನು ಮರುಸಕ್ರಿಯಗೊಳಿಸಲು 3 ತಿಂಗಳ ಕಾಲಾವಕಾಶ ನೀಡಲಾಗುವುದು.

ಇ-ಕೆವೈಸಿ (e-KYC) ಕಡ್ಡಾಯ: ಈ ಮೂರು ತಿಂಗಳ ಅವಧಿಯಲ್ಲಿ ಫಲಾನುಭವಿಗಳು ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆ ಹಾಗೂ ಕ್ಷೇತ್ರ ಪರಿಶೀಲನೆ ಪೂರ್ಣಗೊಳಿಸಿದರೆ, ಅವರ ಕಾರ್ಡ್‌ಗಳನ್ನು ಮರಳಿ ಚಾಲ್ತಿಗೆ ತರಲಾಗುತ್ತದೆ. ಆದ್ದರಿಂದ ಆದಷ್ಟು ಶೀಘ್ರವೇ ಕೆವೈಸಿ ಮಾಡಿಸುವಂತೆ ಕೇಂದ್ರ ಸಾರ್ವಜನಿಕರಿಗೆ ಸಲಹೆ ನೀಡಿದೆ..

ಒಟ್ಟಾರೆಯಾಗಿ.. ಅರ್ಹ ಬಡ ಕುಟುಂಬಗಳಿಗೆ ಮಾತ್ರ ಸರ್ಕಾರದ ಆಹಾರ ಧಾನ್ಯ ತಲುಪಬೇಕು ಮತ್ತು ಪಡಿತರ ದತ್ತಸಂಚಯವನ್ನು (Database) ನಿಖರವಾಗಿ ನಿರ್ವಹಿಸಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ತಳೆದಿದೆ. ಅಲ್ಲದೆ, ಕಾಳಸಂತೆಯನ್ನು ಕಂಟ್ರೋಲ್‌ ಮಾಡುವ ನಿಟ್ಟಿನಲ್ಲಿಯೂ ಸೂಕ್ತ ಕ್ರಮಗಳನ್ನು ಜರುಗಿಸುತ್ತಿದೆ..

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES