SOCIAL MEDIA

Newsletter

PARTNER SITES
Select Language Select State

ರೈಲ್ವೆ ಉದ್ಯೋಗಿಗಳಿಗೆ ದೀಪಾವಳಿ ಬಂಪರ್‌ ಗಿಫ್ಟ್‌! 78 ದಿನಗಳ ಬೋನಸ್‌ಗೆ ಕೇಂದ್ರ ಸಚಿವ ಸಂಪುಟ ಅಸ್ತು!

ಕೇಂದ್ರ ಸಚಿವ ಸಂಪುಟವು ಸುಮಾರು 11.40 ಲಕ್ಷ ಅರ್ಹ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮಾನವಾದ ಉತ್ಪಾದಕತೆ ಆಧಾರಿತ ಬೋನಸ್‌ ನೀಡಲು ಅನುಮೋದನೆ ನೀಡಿದೆ. ಇದಕ್ಕಾಗಿ ₹2,009.61 ಕೋಟಿ ವೆಚ್ಚವಾಗಲಿದ್ದು, ಪ್ರತಿ ಅರ್ಹ ಉದ್ಯೋಗಿಗೆ ಗರಿಷ್ಠ ₹17,951 ದೊರೆಯಲಿದೆ.

Written By Puttaraj K Alur
Published: Oct 14, 2026, 04:42 PM IST | Updated: Oct 14, 2026, 04:57 PM IST
Image Credit: Indian Railways Bonus
Join

Indian Railways Bonus 2026: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತೀಯ ರೈಲ್ವೆ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಅರ್ಹ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮಾನವಾದ ಉತ್ಪಾದಕತೆ ಆಧಾರಿತ ಬೋನಸ್‌ (Productivity Linked Bonus – PLB) ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನಿರ್ಧಾರದಿಂದ ದೇಶದ ಸುಮಾರು 11.40 ಲಕ್ಷ ರೈಲ್ವೆ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಪ್ರತಿ ಅರ್ಹ ಉದ್ಯೋಗಿಗೆ ಗರಿಷ್ಠ ₹17,951 ಬೋನಸ್‌ ದೊರೆಯಲಿದೆ.  

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರೈಲ್ವೆ ಸಿಬ್ಬಂದಿಯ ಕಾರ್ಯಕ್ಷಮತೆ ಮತ್ತು ಭಾರತೀಯ ರೈಲ್ವೆಯ ಬೆಳವಣಿಗೆಗೆ ಅವರು ನೀಡಿದ ಕೊಡುಗೆಯನ್ನ ಗುರುತಿಸಿ ಬೋನಸ್‌ ನೀಡಲು ಸರ್ಕಾರ ಮುಂದಾಗಿದೆ.

11.40 ಲಕ್ಷ ಉದ್ಯೋಗಿಗಳಿಗೆ ಲಾಭ

ಕೇಂದ್ರ ಸರ್ಕಾರದ ನಿರ್ಧಾರದ ಪ್ರಕಾರ, ಒಟ್ಟು 11,40,770 ಅರ್ಹ ರೈಲ್ವೆ ಸಿಬ್ಬಂದಿಗೆ ಬೋನಸ್‌ ಪಾವತಿಸಲಾಗುತ್ತದೆ. ಇದಕ್ಕಾಗಿ ಸರ್ಕಾರ ಸುಮಾರು ₹2,009.61 ಕೋಟಿ ವೆಚ್ಚ ಮಾಡಲಿದೆ ಎಂದು ವರದಿಯಾಗಿದೆ. ರೈಲ್ವೆ ಉದ್ಯೋಗಿಗಳಿಗೆ ಪ್ರತಿವರ್ಷ ದುರ್ಗಾಪೂಜೆ ಮತ್ತು ದಸರಾ ಹಬ್ಬಗಳ ಮುನ್ನ ಉತ್ಪಾದಕತೆ ಆಧಾರಿತ ಬೋನಸ್‌ ನೀಡುವುದು ವಾಡಿಕೆಯಾಗಿದೆ. ಈ ಬಾರಿ ಕೂಡ ಹಬ್ಬದ ಸಂದರ್ಭದಲ್ಲಿ ನೌಕರರಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಗರಿಷ್ಠ ₹17,951 ಬೋನಸ್‌ ಎಷ್ಟು?

ಅರ್ಹ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮಾನವಾದ ಬೋನಸ್‌ ನೀಡಲಾಗುತ್ತದೆ. ಈ ಲೆಕ್ಕಾಚಾರದ ಪ್ರಕಾರ ಪ್ರತಿ ಉದ್ಯೋಗಿಗೆ ಗರಿಷ್ಠ ₹17,951 ಪಾವತಿಸಲಾಗುತ್ತದೆ. ಆದರೆ ಎಲ್ಲಾ ಉದ್ಯೋಗಿಗಳಿಗೂ ಇದೇ ಮೊತ್ತ ಸಿಗುತ್ತದೆ ಎಂದರ್ಥವಲ್ಲ. ಅನ್ವಯಿಸುವ ನಿಯಮಗಳು ಮತ್ತು ಅರ್ಹತೆಯ ಆಧಾರದ ಮೇಲೆ ಪಾವತಿ ನಿರ್ಧಾರವಾಗುತ್ತದೆ. ಹಬ್ಬದ ಸಂದರ್ಭದಲ್ಲಿ ಸಿಗುವ ಈ ಹೆಚ್ಚುವರಿ ಹಣವು ಉದ್ಯೋಗಿಗಳಿಗೆ ಕುಟುಂಬದ ಖರ್ಚು, ಹಬ್ಬದ ಖರೀದಿ ಮತ್ತು ಇತರ ಅಗತ್ಯಗಳನ್ನ ನಿರ್ವಹಿಸಲು ನೆರವಾಗಲಿದೆ. ವಿಶೇಷವಾಗಿ ಹಬ್ಬದ ಸಮಯದಲ್ಲಿ ಹೆಚ್ಚುವರಿ ಆರ್ಥಿಕ ನೆರವು ದೊರೆಯುವುದು ನೌಕರರಿಗೆ ಅನುಕೂಲಕರವಾಗಲಿದೆ.

ಯಾರಿಗೆ ಸಿಗಲಿದೆ ಬೋನಸ್‌?

ಈ ಉತ್ಪಾದಕತೆ ಆಧಾರಿತ ಬೋನಸ್‌ ಮುಖ್ಯವಾಗಿ ಅರ್ಹ ನಾನ್‌-ಗೆಜೆಟೆಡ್‌ ರೈಲ್ವೆ ಉದ್ಯೋಗಿಗಳಿಗೆ ಅನ್ವಯಿಸುತ್ತದೆ. ರೈಲ್ವೆಯ ವಿವಿಧ ಕಾರ್ಯಾಚರಣೆ ಮತ್ತು ತಾಂತ್ರಿಕ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಇದರ ವ್ಯಾಪ್ತಿಗೆ ಬರಬಹುದು. ಆದರೆ ಎಲ್ಲಾ ರೈಲ್ವೆ ನೌಕರರೂ ಸ್ವಯಂಚಾಲಿತವಾಗಿ ಅರ್ಹರಾಗುವುದಿಲ್ಲ; ಸಂಬಂಧಿತ ಅರ್ಹತಾ ನಿಯಮಗಳು ಅನ್ವಯಿಸುತ್ತವೆ. ರೈಲ್ವೆ ಕಾರ್ಯಾಚರಣೆ ಸುಗಮವಾಗಿ ನಡೆಯಲು, ಪ್ರಯಾಣಿಕರ ಸುರಕ್ಷತೆ ಕಾಪಾಡಲು ಹಾಗೂ ಸರಕು ಸಾಗಣೆ ಮತ್ತು ಪ್ರಯಾಣಿಕರ ಸೇವೆಗಳನ್ನ ನಿರ್ವಹಿಸಲು ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ. ಅವರ ಕಾರ್ಯಕ್ಷಮತೆಯನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಬೋನಸ್‌ ನೀಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.  

ರೈಲ್ವೆ ಕಾರ್ಯಕ್ಷಮತೆಗೆ ಉತ್ತೇಜನ

ಭಾರತೀಯ ರೈಲ್ವೆ ದೇಶದ ಪ್ರಮುಖ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ರೈಲು ಸೇವೆಯನ್ನ ಬಳಸುತ್ತಾರೆ. ಸರಕು ಸಾಗಣೆ, ರೈಲುಗಳ ನಿರ್ವಹಣೆ, ನಿಲ್ದಾಣಗಳ ಕಾರ್ಯಾಚರಣೆ ಮತ್ತು ಸುರಕ್ಷತಾ ವ್ಯವಸ್ಥೆಗಳಲ್ಲಿ ಸಿಬ್ಬಂದಿಯ ಕೊಡುಗೆ ನಿರ್ಣಾಯಕವಾಗಿದೆ. ಉದ್ಯೋಗಿಗಳಿಗೆ ಉತ್ಪಾದಕತೆ ಆಧಾರಿತ ಬೋನಸ್‌ ನೀಡುವುದರಿಂದ ಅವರ ಕಾರ್ಯಕ್ಷಮತೆಯನ್ನ ಗುರುತಿಸುವುದರ ಜೊತೆಗೆ, ಭವಿಷ್ಯದಲ್ಲಿಯೂ ಉತ್ತಮ ಸೇವೆ ನೀಡಲು ಪ್ರೋತ್ಸಾಹ ಸಿಗಲಿದೆ ಎಂಬುದು ಸರ್ಕಾರದ ಉದ್ದೇಶವಾಗಿದೆ.

ಒಟ್ನಲ್ಲಿ ಕೇಂದ್ರ ಸಚಿವ ಸಂಪುಟದ ಈ ನಿರ್ಧಾರದಿಂದ ಸುಮಾರು 11.40 ಲಕ್ಷ ಅರ್ಹ ರೈಲ್ವೆ ಉದ್ಯೋಗಿಗಳಿಗೆ ಹಬ್ಬದ ಸಂದರ್ಭದಲ್ಲಿ ಆರ್ಥಿಕ ಲಾಭ ದೊರೆಯಲಿದೆ. ಗರಿಷ್ಠ ₹17,951 ಬೋನಸ್‌ ಘೋಷಣೆಯಾಗಿರುವುದು ರೈಲ್ವೆ ಸಿಬ್ಬಂದಿಗೆ ಮಹತ್ವದ ಸುದ್ದಿಯಾಗಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES