• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಯುಟಿಲಿಟಿ
  • /ಪೋಷಕರಿಗೆ ಮಧುಮೇಹ ಇದ್ದರೆ, ಮಕ್ಕಳಿಗೂ ಬರುತ್ತಾ..? ಎಷ್ಟೋ ಜನರಿಗೆ ಈ ಸತ್ಯವೇ ಗೊತ್ತಿಲ್ಲ..

ಪೋಷಕರಿಗೆ ಮಧುಮೇಹ ಇದ್ದರೆ, ಮಕ್ಕಳಿಗೂ ಬರುತ್ತಾ..? ಎಷ್ಟೋ ಜನರಿಗೆ ಈ ಸತ್ಯವೇ ಗೊತ್ತಿಲ್ಲ..

ಪೋಷಕರಿಗೆ ಮಧುಮೇಹ (ಡಯಾಬಿಟಿಸ್) ಇದ್ದರೆ, ಅದು ಮಕ್ಕಳಿಗೂ ಆನುವಂಶಿಕವಾಗಿ ಬಂದೇ ತೀರುತ್ತದೆಯೇ? ಅಥವಾ ನಮ್ಮ ದೈನಂದಿನ ಜೀವನಶೈಲಿಯನ್ನು ಬದಲಾಯಿಸಿಕೊಳ್ಳುವ ಮೂಲಕ ಈ ಅಪಾಯವನ್ನು ತಡೆಯಬಹುದೇ? ಇತ್ತೀಚಿನ ದಿನಗಳಲ್ಲಿ ಯುವಜನರಲ್ಲೂ ಮಧುಮೇಹ ಹೆಚ್ಚಾಗುತ್ತಿದ್ದು, ಕುಟುಂಬದ ಇತಿಹಾಸ ಹೊಂದಿರುವವರು ವಹಿಸಬೇಕಾದ ಮುನ್ನೆಚ್ಚರಿಕೆಗಳೇನು..? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ..

Reported ByChetana DevarmaniEdited ByKrishna NK
Published: Sep 25, 2026, 10:32 PM IST|Updated: Sep 25, 2026, 10:34 PM IST
joinshare
ಪೋಷಕರಿಗೆ ಮಧುಮೇಹ ಇದ್ದರೆ, ಮಕ್ಕಳಿಗೂ ಬರುತ್ತಾ..? ಎಷ್ಟೋ ಜನರಿಗೆ ಈ ಸತ್ಯವೇ ಗೊತ್ತಿಲ್ಲ..
Image Credit: Health tips in Kannada

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Health Tips : ಒಮ್ಮೆ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಮಧುಮೇಹ (ಡಯಾಬಿಟಿಸ್) ಇತ್ತೀಚಿನ ದಿನಗಳಲ್ಲಿ ಯುವಜನರಲ್ಲೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಮನೆಯಲ್ಲಿ ಪೋಷಕರಿಗೆ ಮಧುಮೇಹವಿದ್ದರೆ, ಅದು ಮಕ್ಕಳಿಗೂ ಆನುವಂಶಿಕವಾಗಿ ಬರುತ್ತದೆಯೇ ಎಂಬ ಅನುಮಾನ ಹಾಗೂ ಭಯ ಇಂದಿಗೂ ಹಲವರಲ್ಲಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ..

ಆನುವಂಶಿಕತೆ ಮತ್ತು ಎರಡು ಪ್ರಮುಖ ವಿಧಗಳು
ಮಧುಮೇಹದಲ್ಲಿ ಟೈಪ್ 1 ಮತ್ತು ಟೈಪ್ 2 ಎಂಬ ಎರಡು ಪ್ರಮುಖ ವಿಧಗಳಿವೆ. ಟೈಪ್ 1 ಮಧುಮೇಹವು ದೇಹದಲ್ಲಿ ಇನ್ಸುಲಿನ್ ಉತ್ಪಾದನೆ ಕಡಿಮೆಯಾಗುವುದರಿಂದ ಬರುತ್ತದೆ ಹಾಗೂ ಇದಕ್ಕೆ ಕುಟುಂಬದ ಇತಿಹಾಸವೇ ಕಾರಣವಾಗಿರಬೇಕೆಂದಿಲ್ಲ. ಆದರೆ ಅತ್ಯಂತ ಸಾಮಾನ್ಯವಾದ ಟೈಪ್ 2 ಮಧುಮೇಹದಲ್ಲಿ ಆನುವಂಶಿಕತೆ ಪ್ರಮುಖ ಪಾತ್ರ ವಹಿಸುತ್ತದೆ. ಪೋಷಕರಲ್ಲಿ ಒಬ್ಬರಿಗೆ ಅಥವಾ ಇಬ್ಬರಿಗೂ ಟೈಪ್ 2 ಮಧುಮೇಹವಿದ್ದರೆ, ಮಕ್ಕಳಿಗೆ ಬರುವ ಸಾಧ್ಯತೆ ಹಾಗೂ ಅಪಾಯ ಹೆಚ್ಚಿರುತ್ತದೆ.

ಜೀವನಶೈಲಿ ಮತ್ತು ಅಪಾಯದ ಅಂಶಗಳು
ಕೇವಲ ಆನುವಂಶಿಕ ಅಂಶಗಳಷ್ಟೇ ಅಲ್ಲದೆ ನಮ್ಮ ದೈನಂದಿನ ಜೀವನಶೈಲಿಯೂ ಡಯಾಬಿಟಿಸ್ ಬರಲು ಪ್ರಮುಖ ಕಾರಣವಾಗಿದೆ. ಅನಾರೋಗ್ಯಕರ ಆಹಾರ ಪದ್ಧತಿ, ತೂಕ ಹೆಚ್ಚಾಗುವುದು ಮತ್ತು ದೈಹಿಕ ಚಟುವಟಿಕೆ ಅಥವಾ ವ್ಯಾಯಾಮದ ಕೊರತೆ ಟೈಪ್ 2 ಮಧುಮೇಹದ ಅಪಾಯವನ್ನು ದ್ವಿಗುಣಗೊಳಿಸುತ್ತವೆ.

ವೈದ್ಯಕೀಯ ತಜ್ಞರ ಮುನ್ನೆಚ್ಚರಿಕೆ ಮತ್ತು ಸಲಹೆಗಳು
ಕುಟುಂಬದಲ್ಲಿ ಮಧುಮೇಹದ ಇತಿಹಾಸ ಇರುವವರು ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ, ಆದರೆ ಸಾಮಾನ್ಯರಿಗಿಂತ ಹೆಚ್ಚು ಜಾಗರೂಕರಾಗಿರಬೇಕು. ಪ್ರತಿದಿನ ದೈಹಿಕ ಚಟುವಟಿಕೆ ಮಾಡುವುದು, ಪೌಷ್ಟಿಕ ಹಾಗೂ ಸಮತೋಲಿತ ಆಹಾರ ಸೇವಿಸುವುದು, ದೇಹದ ತೂಕವನ್ನು ಹದವಾಗಿಟ್ಟುಕೊಳ್ಳುವುದು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ಅತ್ಯಗತ್ಯ.

ನಿಯಮಿತ ರಕ್ತ ಪರಿಶೀಲನೆ ಹಾಗೂ ತಡೆಗಟ್ಟುವಿಕೆ
ಮಧುಮೇಹದ ಕುಟುಂಬ ಇತಿಹಾಸ ಹೊಂದಿರುವವರು ವೈದ್ಯರ ಸಲಹೆಯಂತೆ ಆಗಾಗ್ಗೆ ಫಾಸ್ಟಿಂಗ್ ಬ್ಲಡ್ ಶುಗರ್‌ನಂತಹ ರಕ್ತ ಪರಿಶೀಲನೆಗಳನ್ನು ಮಾಡಿಸಿಕೊಳ್ಳುವುದು ಸೂಕ್ತ. ಆನುವಂಶಿಕ ಪ್ರವೃತ್ತಿ ಇದ್ದರೂ ಸಹ, ಚಿಕ್ಕ ವಯಸ್ಸಿನಿಂದಲೇ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಧುಮೇಹದ ಅಪಾಯದಿಂದ ದೂರವಿರಬಹುದು.

ಹಕ್ಕುತ್ಯಾಗ (Disclaimer): ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಕೇವಲ ಜಾಗೃತಿ ಮತ್ತು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಇದು ಯಾವುದೇ ರೀತಿಯ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಲ್ಲ. ನಿಮ್ಮ ಆರೋಗ್ಯ ಅಥವಾ ವೈದ್ಯಕೀಯ ಸ್ಥಿತಿಗೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿದ್ದಲ್ಲಿ ಯಾವಾಗಲೂ ಅರ್ಹ ವೈದ್ಯರು ಅಥವಾ ಆರೋಗ್ಯ ತಜ್ಞರನ್ನು ಸಂಪರ್ಕಿಸಿ.

Add Zee News as a Preferred Source
TAGS:
Health Tips