SOCIAL MEDIA

Newsletter

PARTNER SITES
Select Language Select State

ರಾಜ್ಯದಲ್ಲಿ ವಾಯುಭಾರ ಕುಸಿತದ ಪ್ರಭಾವ : 9 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'

Karnataka Rains : ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದೆ.. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿಢೀರ್ ಮಳೆಯಾಗಿದೆ.. ಇದರ ನಡುವೆ ಸಿಡಿಲಿಗೆ ಮೂವರು ಬಲಿಯಾಗಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದಲ್ಲೂ ಬದಲಾವಣೆಯಾಗಿದೆ.. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ..

Reported By Krishna NK Written By Krishna NK
Published: Sep 25, 2026, 09:45 PM IST | Updated: Sep 25, 2026, 09:49 PM IST
Image Credit: Karnataka Rains
Join

Karnataka Weather Updates : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.. ಇತ್ತ ಉಪಗ್ರಹ ಚಿತ್ರದಲ್ಲಿ ದೇಶದ ಒಂದು ಭಾಗ ಮಳೆಯಲ್ಲಿ ಮುಳುಗಿದ್ದರೆ, ಮತ್ತೊಂದು ಭಾಗ ಬಿಸಿಲಿನಲ್ಲಿ ಬೆಂದುಹೋಗಿರುವ ದೃಶ್ಯ ಸೆರೆಯಾಗಿದೆ.. ಹಾಗಾದ್ರೆ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ..? ದಕ್ಷಿಣ ಕನ್ನಡಕ್ಕೆ ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು..? ಮುಂದಿನ ಮೂರು ದಿನ ರಾಜ್ಯದ ಹವಾಮಾನ ಹೇಗಿರಲಿದೆ..? ಸಂಪೂರ್ಣ ವಿವರ ಇಲ್ಲಿದೆ..

ರಾಜ್ಯದಲ್ಲಿ ಮಳೆ ಚುರುಕಾಗಿರುವ ನಡುವೆಯೇ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ.. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.. ಇನ್ನು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಜಮೀನಿನಲ್ಲಿ ಜೋಳ ಬಿತ್ತನೆ ಮಾಡುವಾಗ ಸಿಡಿಲು ಬಡಿದು ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.. ಹೀಗಾಗಿ ಮಳೆಯ ಜೊತೆಗೆ ಸಿಡಿಲಿನ ಅಪಾಯದ ಬಗ್ಗೆಯೂ ಜನರು ಎಚ್ಚರಿಕೆ ವಹಿಸಬೇಕಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ದೇಶದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ನಿರ್ಮಾಣವಾಗಿದೆ.. ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.. ಈ ಹವಾಮಾನ ವ್ಯವಸ್ಥೆಯ ಪರಿಣಾಮ ಕರ್ನಾಟಕದಲ್ಲೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಚುರುಕಾಗಿದೆ.. ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಹಲವು ಜಿಲ್ಲೆಗಳಲ್ಲಿ ಇದೀಗ ಮೋಡ ಕವಿದ ವಾತಾವರಣ ಮತ್ತು ತಂಪು ಕಾಣಿಸಿಕೊಂಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.. ಈ ಭಾಗಗಳಲ್ಲಿ ಗುಡುಗು, ಮಿಂಚಿನ ಜೊತೆಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಜನರು ಮುನ್ನೆಚ್ಚರಿಕೆ ವಹಿಸಬೇಕಿದೆ.. ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಕೆಲವು ದಿನಗಳ ಬಿಸಿಲಿನ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆಯ ವಾತಾವರಣ ನಿರ್ಮಾಣವಾಗಿದೆ.. ಮಂಗಳೂರು ಸೇರಿದಂತೆ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ತಾಪಮಾನದಲ್ಲೂ ಇಳಿಕೆಯಾಗಿದೆ.. ಹವಾಮಾನ ಇಲಾಖೆ ಪ್ರಕಾರ ಸೆಪ್ಟೆಂಬರ್ 26ರವರೆಗೆ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.. ಸೆಪ್ಟೆಂಬರ್ 29ರಿಂದ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆಯೂ ನೀಡಲಾಗಿದೆ.. ಹೀಗಾಗಿ ಕರಾವಳಿ ಭಾಗದ ಜನರು ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆ ವಹಿಸಬೇಕಿದೆ.

ಇಡೀ ದೇಶದಲ್ಲೇ ಹವಾಮಾನದ ವೈವಿಧ್ಯಮಯ ಚಿತ್ರವನ್ನು ಇನ್ಸಾಟ್-3ಡಿಎಸ್ ಉಪಗ್ರಹ ಸೆರೆಹಿಡಿದಿದೆ.. ಸೆಪ್ಟೆಂಬರ್ 24ರಂದು ಸೆರೆಹಿಡಿದ ಚಿತ್ರದಲ್ಲಿ ಮಧ್ಯ ಭಾರತದಿಂದ ಪೂರ್ವ ಮತ್ತು ಈಶಾನ್ಯ ಭಾಗದವರೆಗೆ ದಟ್ಟವಾದ ಮೋಡಗಳು ಆವರಿಸಿರುವುದು ಕಂಡುಬಂದಿದೆ.. ಮತ್ತೊಂದೆಡೆ ರಾಜಸ್ಥಾನ, ಗುಜರಾತ್ ಸೇರಿದಂತೆ ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಮೋಡಗಳಿಲ್ಲದೆ ಬಿಸಿಲಿನ ವಾತಾವರಣ ಕಂಡಿದೆ.. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವ್ಯವಸ್ಥೆಯಿಂದ ತೇವಾಂಶಭರಿತ ಗಾಳಿ ದೇಶದ ಒಳಭಾಗಕ್ಕೆ ಸಾಗುತ್ತಿರುವುದು ಉಪಗ್ರಹ ಚಿತ್ರದಲ್ಲಿ ಗೋಚರಿಸಿದೆ.. ಮುಂದಿನ 24ರಿಂದ 48 ಗಂಟೆಗಳಲ್ಲಿ ಹವಾಮಾನದಲ್ಲಿ ಮತ್ತಷ್ಟು ಬದಲಾವಣೆ ಸಾಧ್ಯತೆ ಇದೆ.

ಒಟ್ಟಾರೆಯಾಗಿ, ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕಾಗಿದೆ.. ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.. ಸಿಡಿಲಿಗೆ ಮೂವರು ಬಲಿಯಾಗಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.. 9 ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಳದಿ ಎಚ್ಚರಿಕೆಯೂ ನೀಡಲಾಗಿದೆ.. ದಕ್ಷಿಣ ಕನ್ನಡದಲ್ಲಿ ಸೆಪ್ಟೆಂಬರ್ 26ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದ್ದರೆ, ಸೆಪ್ಟೆಂಬರ್ 29ರಿಂದ ಮತ್ತೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.. ಇತ್ತ INSAT-3DS ಉಪಗ್ರಹದಲ್ಲಿ ದೇಶದ ಒಂದು ಭಾಗ ಮಳೆಯಲ್ಲಿ, ಮತ್ತೊಂದು ಭಾಗ ಬಿಸಿಲಿನಲ್ಲಿ ಇರುವ ವಿಭಿನ್ನ ಹವಾಮಾನದ ಚಿತ್ರವೂ ಸೆರೆಯಾಗಿದೆ.. ಹೀಗಾಗಿ ಮಳೆ, ಗುಡುಗು ಮತ್ತು ಸಿಡಿಲಿನ ಅಪಾಯದ ನಡುವೆ ಜನರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES