ಮೂಡಿಗೆರೆಯಲ್ಲಿ ಪ್ರಧಾನಿ ಮೋದಿ ಜನ್ಮದಿನೋತ್ಸವ ಆಚರಣೆ ಹಿನ್ನಲೆಯಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಮುಖಂಡೆ ಸುಷ್ಮಾ ವಿಭಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಸ್ವಚ್ಛತಾ ಕಾರ್ಮಿಕರಿಗೆ ಗೌರವಿಸಲಾಯಿತು. ಸಮಾಜಮುಖಿ ಕಾರ್ಯಗಳಲ್ಲಿ ನಿರತರಾಗಿರುವವರಿಗೆ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸಿ ಗೌರವಿಸಿದ ಬಿಜೆಪಿ ಮುಖಂಡರು ಉಚಿತ ಅಪಘಾತ, ಆರೋಗ್ಯ ವಿಮಾ ನೋಂದಣಿ ಅಭಿಯಾನ ನಡೆಸಲಾಯಿತು. ಈ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಾವಿರಾರು ಮಂದಿ ಸ್ಥಳದಲ್ಲೇ ಹೆಸರು ನೋಂದಣಿ ಮಾಡಿಕೊಂಡರು.